
ಚಿತ್ರದುರ್ಗ ನ್ಯೂಸ್.ಕಾಂ: ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿರುದ್ಧ ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ತಮ್ಮ ಫೇಸ್‍ಬುಕ್ ಮತ್ತು ಎಕ್ಸ್(ಟ್ವಿಟರ್) ಖಾತೆಗಳಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಯಲಹಂಕ ಭೂ ವಿವಾದ ಪ್ರಕರಣ 8 ವರ್ಷ ಹಳೆಯದಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ರಾಜಕೀಯ ದುರುದ್ದೇಶದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ಕೆಲವು ಕೋಮುವಾದಿ ಶಕ್ತಿಗಳು ಈಗ ನನ್ನ ವಿರುದ್ಧ ದೂರು ದಾಖಲಿಸಿ ಅಪಪ್ರಚಾರ ಮಾಡುತ್ತಿದ್ದಾರೆ.
ಇದನ್ನೂ ಓದಿ: ಸಚಿವ ಡಿ.ಸುಧಾಕರ್ ವಿರುದ್ಧ ಬೆಂಗಳೂರಿನಲ್ಲಿ ಎಫ್‍ಐಆರ್
ನಾನು ಯಾವ ತಪ್ಪನ್ನು ಮಾಡಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ನಿಯಮಗಳಿಗೆ ಅನುಸಾರವಾಗಿ ನಡೆದುಕೊಂಡು ಬಂದಿದ್ದೇನೆ. ಸಂಬಂಧಿಸಿದವರಿಗೆ ಸೂಕ್ತ ಪ್ರತಿಕ್ರಿಯೆ ನೀಡುತ್ತೇನೆ. ಸುಳ್ಳು ದೂರು ದಾಖಲಿಸಿ ನನ್ನ ವಿರುದ್ಧ ಜನರನ್ನು ಎತ್ತಿ ಕಟ್ಟುವ ಪ್ರಯತ್ನ ಸಫಲವಾಗಲು ನಾನು ಬಿಡುವುದಿಲ್ಲ. ಪಕ್ಷ ಹಾಗೂ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಪ್ರಯತ್ನಗಳನ್ನು ಸಹಿಸಲಾಗದು ಎಂದು ಹೇಳಿದ್ದಾರೆ.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/DBdpIl5D3JYHFoKkhA0cQg)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
