
ಚಿತ್ರದುರ್ಗ ನ್ಯೂಸ್.ಕಾಂ: ಪೋಕ್ಸೋ ಪ್ರಕರಣದಡಿ ಕಳೆದೊಂದು ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.
ಸ್ವಾಮೀಜಿ ಮೂತ್ರ ಕೋಶದ ಸೋಂಕು ಹಾಗೂ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಾರಾಗೃಹದ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ಈ ವೇಳೆ ವೈದ್ಯರು ಕಾರಾಗೃಹಕ್ಕೆ ತೆರಳಿ ಆರೋಗ್ಯ ಪರಿಶೀಲಿಸಿದ್ದರು.
ಸ್ಕ್ಯಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆ ಕಾರಣಕ್ಕೆ ಕಾರಾಗರಹದಿಂದ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದ ನಂತರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
