
ಚಿತ್ರದುರ್ಗ ನ್ಯೂಸ್.ಕಾಂ: ದುರ್ಗದ ಜಲೀಲ್, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗುರುವಾರ ಸಂಜೆ ವಿಶ್ವಹಿಂದೂ ಪರಿಷತ್-ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ದರ್ಶನ ಪಡೆದು ಪ್ರಾರ್ಥಿಸಿದರು.
ಈ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರೈತರು ಅನೇಕ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಅವರ ಕಷ್ಟಗಳಿಗೆ ಪರಿಹಾರ ಸಿಗಲಿ ಎಂದು ಗಣಪತಿ ಬಳಿ ಪ್ರಾರ್ಥಿಸಿದ್ದೇನೆ ಎಂದರು.
ಇದನ್ನೂ ಓದಿ: ಶರಣ ಸಂಸ್ಕøತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಆಯ್ಕೆ
ನಾನು ಮತ್ತು ನಮ್ಮ ಕುಟುಂಬ ಯಾವತ್ತೂ ರೈತರ ಪರವಾಗಿದ್ದೇವೆ. ನಾಳೆ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲೂ ಭಾಗವಹಿಸುತ್ತೇನೆ. ಶೀಘ್ರದಲ್ಲೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ ಎನ್ನುವುದು ನನ್ನ ಆಶಯವಾಗಿದೆ ಎಂದರು.
ಚಿತ್ರರಂಗದ ಅನೇಕರು ಈಗಾಗಲೇ ಕಾವೇರಿ ಹೋರಾಟವನ್ನು ಬೆಂಬಲಿಸಿದ್ದಾರೆ. ಇದಕ್ಕಾಗೊ ಒಂದು ವೇದಿಕೆ ಸಿದ್ಧವಾದ ಬಳಿಕ ಎಲ್ಲರೂ ಬರುವ ವಿಶ್ವಾಸವಿದೆ. ನಾಡು, ನುಡಿ, ನೆಲ-ಜಲದ ವಿಚಾರದಲ್ಲಿ ಚಿತ್ರರಂಗ ಎಂದೂ ಕೈ ಬಿಡುವುದಿಲ್ಲ ಎಂದು ಹೇಳಿದರು.

ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳುವಷ್ಟು ದೊಡ್ಡವನು ನಾನಲ್ಲ. ಆದರೆ, ನಾಡಿನ ರೈತರ ಸಮಸ್ಯೆಗೆ ಪರಿಹಾರ ಸಿಗಬೇಕು. ರಾಜ್ಯ ಸರ್ಕಾರ ನೇರವಾಗಿ ರೈತರ ಜೊತೆಗೆ ಮಾತುಕತೆ ಮೂಲಕ ಪರಿಹಾರ ಕೈಗೊಳ್ಳಬೇಕು.
ನಾಳೆ ನಡೆಯುವ ಹೋರಾಟದಲ್ಲಿ ಸಂಸದರಾದ ಸುಮಲತಾ ಅಂಬರೀಶ್ ಕೂಡಾ ಭಾಗವಹಿಸುತ್ತಾರೆ. ಇದಕ್ಕಾಗಿ ಈಗಾಗಲೇ ದೆಹಲಿಯಿಂದ ಬಂದಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
