ಚಿತ್ರದುರ್ಗ ನ್ಯೂಸ್.ಕಾಂ: ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವ ಮೂಲಕ ಜನಸ್ನೇಹಿ ಪೋಲಿಸ್ ಆಗಿ ಕಾರ್ಯನಿರ್ವಹಿಸಬೇಕು ಎಂದು ಎಡಿಜಿಪಿ ಎಸ್.ಮುರುಗನ್ ಪೋಲಿಸರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪೊಲೀಸ್ ಕಚೇರಿಗೆ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯ ಎಲ್ಲ ಪೋಲಿಸ್ ಠಾಣೆ ಹಾಗೂ ಕಚೇರಿಗಳಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಆಡಳಿತಾತ್ಮಕವಾಗಿ ಜಿಲ್ಲಾ ಪೊಲೀಸ್ ಕಚೇರಿಯ ಲಿಪಿಕ ಸಿಬ್ಬಂದಿಯು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಂದು ಕೊರತೆ, ಪೊಲೀಸ್ ಅಧಿಕಾರಿಗಳ ಕುಟುಂಬದವರ ಕುಂದು ಕೊರತೆಗಳ ವಿಚಾರಣೆ ನಡೆಸಿದರು.
ಎಡಿಜಿಪಿ ಎಸ್.ಮುರುಗನ್ ಅವರು ಹಿರಿಯೂರು ಡಿ ಎಸ್ ಪಿ ಕಚೇರಿ, ಐಮಂಗಲ ಪೊಲೀಸ್ ಠಾಣೆ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
