ಚಿತ್ರದುರ್ಗ ನ್ಯೂಸ್.ಕಾಂ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ 300ಕ್ಕೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದೆ.
ನಗರದ ಬಿ.ಡಿ.ರಸ್ತೆಯಲ್ಲಿರುವ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಇಂದು ಬೆಳಗ್ಗೆ 11.30ಕ್ಕೆ ಸಮಾರಂಭ ನಡೆಯಲಿದೆ.
ಚಿತ್ರದುರ್ಗ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಕೆ.ಸಿ.ವೀರೇಂದ್ರ(ಪಪ್ಪಿ) ಅವರನ್ನು ಮೊದಲ ಬಾರಿಗೆ ಮಹಾಸಭಾದಿಂದ ಸನ್ಮಾನಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಚಿತ್ರದುರ್ಗ-ದಾವಣಗೆರೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರನ್ನು ಸನ್ಮಾನಿಸಲಾಗುತ್ತಿದೆ.
ಇದೇ ವೇಳೆ ವೀರಶೈವ ಲಿಂಗಾಯತ ಒಳಪಂಗಡಗಳ ಜಿಲ್ಲಾಧ್ಯಕ್ಷರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎನ್.ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ವ್ಯವಸ್ಥಿತ ಪಿತೂರಿ
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಜೊತೆಗೆ 2 ಸಾವಿರ ರೂ.ಗಳ ಡಿ.ಡಿ ಯನ್ನು ಮಕ್ಕಳಿಗೆ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಚಿತ್ರದುರ್ಗ ನಗರ ಘಟಕದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ಅರಣ್ಯ ಸಚಿವ ಈಶ್ವರ ಖಂಡ್ರೆ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ ಅಧ್ಯಕ್ಷತೆ ವಹಿಸುವರು.
ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರದಹಳ್ಳಿ, ಕಾರ್ಯದರ್ಶಿ ರೇಣುಕಪ್ರಸನ್ನ, ಜಿಲ್ಲಾ ಉಸ್ತುವಾರಿ ಅಣಬೇರು ರಾಜಣ್ಣ, ಯುವ ಘಟಕದ ರಾಜ್ಯಾಧ್ಯಕ್ಷ ಮನೋಹರ್ ಅಬ್ಬಿಗೆರೆ, ಕೈಗಾರಿಕಾ ಘಟಕದ ಅಧ್ಯಕ್ಷ ಉಮೇಶ್ ಪಾಟೀಲ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮುಕ್ತಾಂಭ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಎಂ.ಬಿ.ತಿಪ್ಪೇರುದ್ರಪ್ಪ, ಮುಖಂಡರಾದ ಜಿ.ಎಸ್.ಮಂಜುನಾಥ್, ಹನುಮಲಿ ಷಣ್ಮುಖಪ್ಪ ಭಾಗವಹಿಸಲಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
