
ಚಿತ್ರದುರ್ಗ ನ್ಯೂಸ್.ಕಾಂ: ಬೈಕಿಗೆ ಗೂಡ್ಸ್ ಆಟೋ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗ್ಗೆ ಕಾತ್ರಾಳು ವಿದ್ಯಾಪೀಠದ ಸಮೀಪದಲ್ಲಿ ನಡೆದಿದೆ.
ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮದ 30 ವರ್ಷದ ಮಂಜುನಾಥ ಮೃತ ಯುವಕ.

ಚಿತ್ರದುರ್ಗ ತಾಲ್ಲೂಕಿನ ಕಾತ್ರಾಳ್ ವಿದ್ಯಾಪೀಠದ ಬಳಿ ಬಿರಾವರ-ಜಗಳೂರು ಮುಖ್ಯ ರಸ್ತೆಯಿಂದ ಐನಳ್ಳಿ ಕಡೆಗೆ ಹೋಗುವ ಹಳೆಯ ಜಗಳೂರು ರಸ್ತೆಯಲ್ಲಿ ಹೋಗುತ್ತಿರುವಾಗ ಐನಳ್ಳಿ ಕಡೆಯಿಂದ ಬಂದ ಗೂಡ್ಸ್ ಆಟೋ ಬೈಕಿಗೆ ಡಿಕ್ಕಿಯಾಗಿದೆ.
ಇದನ್ನೂ ಓದಿ: ಗೌರಸಮುದ್ರ ಮಾರಮ್ಮನ ಜಾತ್ರ ಸ್ಥಳದಲ್ಲೇ ಪ್ರಾಣಬಿಟ್ಟ ಮೇಲೆಗಳ ಹಿಂಡು
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ ಮಂಜುನಾಥನ ತಲೆ ಹಾಗೂ ಮೂಗಿಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿರಿಗೆರೆ ಯೋಜನಾ ಕಚೇರಿಯ ಯಳಗೋಡು ವಲಯದ ಕ್ಷೇತ್ರ ಮೇಲ್ವೀರಚರಕಾರಾಗಿ ಮಂಜುನಾಥ್ ಕರ್ತವ್ಯ ನಿರ್ವಹಿಸುತ್ತಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
