ಮುಖ್ಯ ಸುದ್ದಿ
BREAKING NEWS – ಮುರುಘಾ ಶರಣರಿಗೆ ಜಾಮೀನು ಮಂಜೂರು | ಚಿತ್ರದುರ್ಗಕ್ಕೆ ಭೇಟಿ ನೀಡದಂತೆ ಷರತ್ತು ವಿಧಿಸಿದ ಹೈಕೋರ್ಟ್
ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಎರಡು ದೂರುಗಳು ದಾಖಲಾಗಿದ್ದವು. ಇದರೊಟ್ಟಿಗೆ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಗಳ ಅಡಿಯಲ್ಲೂ ದೂರು ದಾಖಲಾಗಿದ್ದವು.
ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ
ಏಳು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಜಾಮೀನು ನೀಡಿದೆ. ಷರತ್ತುಗಳಲ್ಲಿ ಪ್ರಮುಖವಾಗಿ ಶ್ರೀಗಳು ಚಿತ್ರದುರ್ಗಕ್ಕೆ ಭೇಟಿ ನೀಡಬಾರದು ಎನ್ನುವುದು ಇದೆ. ಜೊತೆಗೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಿಲ್ಲ ಎಂದು ಉಲ್ಲೇಖಿಸಿದೆ.
2022 ಸೆಪ್ಟಂಬರ್ 1ರಂದು ರಾತ್ರಿ ಮುರುಘಾ ಮಠದಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಲಾಗಿತ್ತು. ಬರೋಬ್ಬರಿ 14 ತಿಂಗಳುಗಳಿಂದ ಶರಣರು ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದರು.
ಜಾಮೀನು ಆದೇಶದ ಪ್ರತಿ ಇನ್ನಷ್ಟೇ ಸಿಗಬೇಕಿದೆ. ಜೊತೆಗೆ ಶರಣರಿಗೆ ವಿಧಿಸಿರುವ ಷರತ್ತುಗಳು ಸೇರಿದಂತೆ ಹೆಚ್ಚಿನ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗಿದೆ.
ಇನ್ನೂ ಒಂದು ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಸದ್ಯಕ್ಕೆ ಶ್ರೀಗಳು ಕಾರಾಗೃಹದಿಂದ ಹೊರಗೆ ಬರುವುದು ಅಸಾಧ್ಯವಾಗಿದೆ.