By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುರುಘಾ ಶರಣರ ಪ್ರಕರಣ | ಮೂರ್ನಾಲ್ಕು ದಿನಗಳಲ್ಲೇ ಬಿಡುಗಡೆ ಸಾಧ್ಯತೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುರುಘಾ ಶರಣರ ಪ್ರಕರಣ | ಮೂರ್ನಾಲ್ಕು ದಿನಗಳಲ್ಲೇ ಬಿಡುಗಡೆ ಸಾಧ್ಯತೆ

ಮುಖ್ಯ ಸುದ್ದಿ

ಮುರುಘಾ ಶರಣರ ಪ್ರಕರಣ | ಮೂರ್ನಾಲ್ಕು ದಿನಗಳಲ್ಲೇ ಬಿಡುಗಡೆ ಸಾಧ್ಯತೆ

chitradurganews.com
Last updated: 9 November 2023 17:41
chitradurganews.com
2 years ago
Share
ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಪೋಕ್ಸೋ ಪ್ರಕರಣದಲ್ಲಿ ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆದರೆ, ಶ್ರೀಗಳ ಮೇಲೆ ಎರಡನೇ ಪೋಕ್ಸೋ ಪ್ರಕರಣವೂ ದಾಖಲಾಗಿದೆ. ಹಾಗಾಗಿ ಮೊದಲನೇ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವುದರಿಂದ ಎರಡನೇ ಪ್ರಕರಣದಲ್ಲಿ ಬಿಡುಗಡೆ ಸಾಧ್ಯವೇ ಎನ್ನುವ ಚರ್ಚೆಗಳು ಜಾಮೀನು ಮಂಜೂರಾದ ಕ್ಷಣದಿಂದ ನಡೆಯುತ್ತಿವೆ.

ಆದರೆ, ಈ ಬಗ್ಗೆ ಮುರುಘಾ ಶರಣರ ಪರ ಹಿರಿಯ ನ್ಯಾಯವಾದಿಗಳಾದ ಸಿ.ವಿ.ನಾಗೇಶ್ ಹಾಗೂ ಸಂದೀಪ್ ಪಾಟೀಲ್ ಮಾಧ್ಯಗಳ ಜೊತೆ ಮಾತನಾಡುತ್ತಾ ಕೆಲ ಅಂಶಗಳನ್ನು ಪ್ರಸ್ತಾಪಿಸಿದ್ದು, ಈ ಆಧಾರದಲ್ಲಿ ಶರಣರು ಮೂರ್ನಾಲ್ಕು ದಿನಗಳಲ್ಲೇ ಬಂಧಮುಕ್ತವಾಗಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮುರುಘಾ ಶರಣರಿಗೆ ಜಾಮೀನು ಮಂಜೂರು

ಶರಣರ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಅವರ ಬಂಧನವಾಗಿಲ್ಲ. ಕೇವಲ ಬಾಡಿ ವಾರೆಂಟ್ ಪಡೆದು ಅವರನ್ನು ವಿಚಾರಣೆ ನಡೆಸಿ, ಮೊದಲ ಎಫ್‍ಐಆರ್ ಅನ್ವಯವೇ ಅವರನ್ನು ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ.

ಆರೋಪಿ ಯಾವ ಪ್ರಕರಣದಲ್ಲಿ ನ್ಯಾಯಾಂಗ ಬಂಧನವಾಗುತ್ತಾರೋ ಆ ಪ್ರಕರಣದಲ್ಲಿ ಜಾಮೀನು ಸಿಕ್ಕಿದರೆ ಅವರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಬೇರೆ ಬೇರೆ ಪ್ರಕರಣದಲ್ಲಿ ಹೈಕೋರ್ಟ್ ಈ ರೀತಿಯ ಆದೇಶಗಳನ್ನು ಮಾಡಿದೆ ಎಂದು ವಿವರಿಸಿದ್ದಾರೆ.

ಹಾಗಾಗಿ ಶರಣರ ಬಿಡುಗಡೆಗೆ ಯಾವುದೇ ಅಡ್ಡಿಗಳು ಇಲ್ಲ. ಈ ಸಂಬಂಧ ಹೈಕೋರ್ಟ್ ಈ ಹಿಂದೆ ನೀಡಿರುವ ಆದೇಶ ಹಾಗೂ ಈಗ ಶ್ರೀಗಳಿಗೆ ನೀಡಿರುವ ಜಾಮೀನು ಆದೇಶವನ್ನು ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗ ಸೆಷನ್ಸ್ ಕೋರ್ಟ್‍ಗೆ ಸಲ್ಲಿಸಲಾಗುತ್ತದೆ. ಒಂದು ವೇಳೆ ವಿಚಾರಣಾ ನ್ಯಾಯಲಯ ಒಪ್ಪದಿದ್ದರೆ ಮತ್ತೆ ಹೈಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ ಎಂದು ನ್ಯಾಯವಾದಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bail for FugitivesChitradurgaChitradurga newsHigh CourtKannada UpdatesMuruga MathMuruga Shri CasePOCSOSessions Courtಕನ್ನಡ ಅಪ್ಡೇಟ್ಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೋಕ್ಸೋಮುರುಘಾ ಮಠಮುರುಘಾ ಶ್ರೀ ಕೇಸ್ಶರಣರಿಗೆ ಜಾಮೀನುಸೆಷನ್ಸ್ ಕೋರ್ಟ್ಹೈಕೋರ್ಟ್‌
Share This Article
Facebook Email Print
Previous Article ಮುರುಘಾ ಮಠ BREAKING NEWS – ಮುರುಘಾ ಶರಣರಿಗೆ ಜಾಮೀನು | ಹೈಕೋರ್ಟ್ ವಿಧಿಸಿದ ಷರತ್ತುಗಳೇನು
Next Article ಎಂ.ಸಿ.ರಘುಚಂದನ್ ಜೀವನಶೈಲಿ ಬದಲಾಗದಿದ್ದರೆ ಬದುಕು ಕಷ್ಟ | ಎಂ.ಸಿ.ರಘುಚಂದನ್
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up