
ಚಿತ್ರದುರ್ಗ ನ್ಯೂಸ್.ಕಾಂ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಚಿತ್ರದುರ್ಗ ಡಯಾಬಿಟಿಕ್ ಸೆಂಟರ್ನಲ್ಲಿ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ನ.16 ಗುರುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಬಸವೇಶ್ವರ ಟಾಕೀಸ್ ಮುಂಭಾಗದಲ್ಲಿರುವ ಚಿತ್ರದುರ್ಗ ಡಯಾಬಿಟಿಕ್ ಸೆಂಟರ್ನಲ್ಲಿ ಚಿತ್ರದುರ್ಗ ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ನಾಗರೀಕರಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಡ್ರಗ್ಸ್ ವ್ಯಸನಿಗಳೇ ಎಚ್ಚರ | ಅನುಮಾನ ಬಂದ್ರೆ ಮೆಡಿಕಲ್ ಟೆಸ್ಟ್

ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು, ಸುಸ್ತು, ಆಯಾಸ, ಕೈ ಕಾಲುಗಳಲ್ಲಿ ಜೋಮು, ತೂಕ ಕಡಿಮೆಯಾಗುವುದು, ದೃಷ್ಟಿ ಮಂಜಾಗುವುದು, ಅತಿಯಾದ ಬಾಯಾರಿಕೆ ಹಾಗೂ ಹಸಿವಿನ ಲಕ್ಷಣಗಳು ಪದೇ ಪದೇ ಕಂಡುಬಂದಲ್ಲಿ ಬಂದು ತಪಾಸಣೆ ಮಾಡಿಸಿಕೊಳ್ಳಬಹುದು.
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ತಜ್ಞರೊಂದಿಗೆ ಸಮಾಲೋಚನೆ ಮತ್ತು ಸಕ್ಕರೆ ತಪಾಸಣೆ ಮಾಡಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9535178908 ಸಂಪರ್ಕಿಸಲು ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
