
ಚಿತ್ರದುರ್ಗ ನ್ಯೂಸ್.ಕಾಂ: ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಬಂದೊದಗಿದೆ.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಶ್ರೀಗಳಿಗೆ ಎರಡನೇ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ.
ನ.16 ರಂದು ಮುರುಘಾ ಶರಣರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಆಗಿದ್ದರು.
ಬಿಡುಗಡೆಗೆ ಮೊದಲು ಎರಡನೇ ಪೋಕ್ಸೋ ಪ್ರಕರಣದ ಬಾಡಿ ವಾರೆಂಟ್ ಕುರಿತ ವಿಚಾರಣೆ ನಡೆಯುತ್ತಿತ್ತು.
ಬೆಳಗ್ಗೆ ಕಾರಾಗೃಹದಿಂದ ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಶ್ರೀಗಳು, ಮಧ್ಯಾಹ್ನದ ವಿಚಾರಣೆಗೆ ಮೊಬೈಲ್ ಮೂಲಕ ವಿಸಿಗೆ ಬಂದಿದ್ದರು.
ವಿಚಾರಣೆ ನಡುವೆಯೇ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನ.18 ರಂದು ನಡೆದ ನ್ಯಾಯಾಲಯ ಕಲಾಪದ ವೇಳೆ ಜಿಲ್ಲಾ ಕಾರಾಗೃಹದ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆಗೆ ಆದೇಶಿಸಲಾಗಿತ್ತು.
ಇದೇ ಪ್ರಕರಣದ ಆದೇಶವನ್ನು ನ.20 ಸೋಮವಾರಕ್ಕೆ ಕಾಯ್ದಿರಿಸಿದ್ದ ನ್ಯಾಯಾಲಯ ನಾಳೆಯೊಳಗೆ ಬಂಧಿಸಿ ಕರೆತರುವಂತೆ ಆದೇಶಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

