
ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಅವರ ಪತಿ ಡಿ.ಟಿ.ಶ್ರೀನಿವಾಸ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಡಿ.ಟಿ.ಶ್ರೀನಿವಾಸ್ ಆಗ್ನೇಯ ಶಿಕ್ಷಕರ ಕ್ಷೇತ್ರದ ನಿಯೋಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸೆಂಬರ್ 2 ಶನಿವಾರ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ.
ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಡಿ.ಟಿ.ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ಸೇರಿದ ನಂತರ ಜಿಲ್ಲೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಕಾರಣಕ್ಕೆ ಶನಿವಾರ ಜಿಲ್ಲೆಗೆ ಆಗಮಿಸಿದ ಅವರು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರು, ಜನಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸುವರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಳೆದ ಅವಧಿಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಪೂರ್ಣಿಮಾ ಶ್ರೀನಿವಾಸ್, 2023 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ವಿರುದ್ಧ ಪರಾಭವಗೊಂಡಿದ್ದರು.
ಇನ್ನೂ ಕಳೆದ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ.ಶ್ರೀನಿವಾಸ್ ಈ ಕಾರಣಕ್ಕೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು.
ವಿಧಾನಸಭೆ ಚುನಾವಣೆ ನಂತರ ನಡೆದ ಹಲವು ರಾಜಕೀಯ ಬದಲಾವಣೆಗಳಲ್ಲಿ ಮಾಜಿ ಶಾಸಕಿ ಪೂರ್ಣಿಮಾ ಹಾಗು ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ರಾಜ್ಯ ರಾಜಕಾರಣ ಹಾಗೂ ಚಿತ್ರದುರ್ಗ ಜಿಲ್ಲೆಯ ರಾಜಕೀಯ ಘಟನೆಗಳಲ್ಲಿ ಅತ್ಯಂತ ಮುಖ್ಯ ಘಟ್ಟವಾಗಿದೆ.
ಇದನ್ನೂ ಓದಿ: ಹಿರಿಯೂರಿನಲ್ಲಿ ಕಾರಿನಿಂದ 3 ಲಕ್ಷ ಕಳ್ಳತನ
ಇಬ್ಬರೂ ಕಾಂಗ್ರೆಸ್ ಪಕ್ಷ ಸೇರಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಶ್ರೀನಿವಾಸ್ ಅವರಿಗೆ ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೊಷಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೂರ್ಣಿಮಾ ಹಾಗೂ ಅವರ ಪತಿ ಶ್ರೀನಿವಾಸ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಜನಪ್ರತಿನಿಧಿಗಳನ್ನು ಭೇಟಿಯಾಗಲು ಜಿಲ್ಲೆಗೆ ಬರುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
