By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    3 minutes ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    7 minutes ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    2 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    10 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    12 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    12 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ಮಿಂಚೇರಿ ಎತ್ತಿನ ಬಂಡಿ ಯಾತ್ರೆಗೆ ದಿನಗಣನೆ | ಮೇಳೈಸಲಿದೆ ಬುಡಕಟ್ಟು ಸಂಸ್ಕೃತಿಯ ವೈಭವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿಸಂಡೆ ಸ್ಪಷಲ್

ಮಿಂಚೇರಿ ಎತ್ತಿನ ಬಂಡಿ ಯಾತ್ರೆಗೆ ದಿನಗಣನೆ | ಮೇಳೈಸಲಿದೆ ಬುಡಕಟ್ಟು ಸಂಸ್ಕೃತಿಯ ವೈಭವ

News Desk Chitradurga News
Last updated: 3 December 2023 07:45
News Desk Chitradurga News
2 years ago
Share
SHARE

ಚಿತ್ರದುರ್ಗ ನ್ಯೂಸ್‌.ಕಾಂ

ಗಾದ್ರಿಮಲೆ ಹೆಬ್ಬುಲಿ ಗಾದ್ರಿ ಪಾಲನಾಯಕ ಸ್ವಾಮಿಯ ಸಾಲು..ಸಾಲು ಎತ್ತಿನ ಗಾಡಿಗಳ ಮಿಂಚೇರಿ ಜಾತ್ರೆ ಕಣ್ತುಂಬಿಕೊಳ್ಳುವ ಕಾಲ ಸನಿಹವಾಗಿದೆ. ಐದು ವರ್ಷದ ಬಳಿಕ ಪುನಃ ಜಾತ್ರೆಗೆ ಸಿದ್ದತೆ ನಡೆದಿದ್ದು, ಡಿ.23 ರಿಂದ 28 ರವರೆಗೆ ಬುಡಕಟ್ಟು ಸಂಸ್ಕೃತಿಯ ವೈಭವ ಮೇಳೈಸಲಿದೆ.

ಕಿಲೋ ಮೀಟರ್ ಮಾರ್ಗದುದ್ದಕ್ಕೂ ಎತ್ತ ಕಣ್ಣಾಯಿಸಿದರೂ ಶೃಂಗಾರಗೊಂಡ ಎತ್ತಿನ ಗಾಡಿಗಳೇ ಕಣ್ಣಿಗೆ ರಾಚುತ್ತವೆ. ಈ ಸಂಭ್ರಮದ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನ ಕಾತುರದಿಂದ ಕಾಯುತ್ತಾರೆ. ಬೇಕೆಂದಾಗ ಇದನ್ನು ನೋಡಲು ಸಾಧ್ಯವಿಲ್ಲ. ಅದಕ್ಕಾಗಿ ಐದು ವರ್ಷ ಕಾಯಲೇಬೇಕು. ಆ ಅಮೃತ ಗಳಿಗೆ ಈಗ ಒದಗಿ ಬಂದಿದೆ. ಉತ್ಸವಕ್ಕೆ ಈಗಾಗಲೇ ದಿನಗಣನೆ ಪ್ರಾರಂಭವಾಗಿದೆ.

ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಮ್ಯಾಸ ನಾಯಕ ಸಮುದಾಯದವರು ತಮ್ಮ ಆರಾಧ್ಯ ದೈವ ಹಾಗೂ ಸಾಂಸ್ಕೃತಿಕ ವೀರ ಎಂದೇ ಖ್ಯಾತಿ ಗಳಿಸಿರುವ ಗಾದ್ರಿಮಲೆ ಹೆಬ್ಬುಲಿ ಗಾದ್ರಿ ಪಾಲನಾಯಕ ಸ್ವಾಮಿಯ ಹೆಸರಿನಲ್ಲಿ ನಡೆಸುವ ಆರು ದಿನಗಳ ಮಿಂಚೇರಿ ಯಾತ್ರೆಯ ಜಾತ್ರೆಯಲ್ಲಿ ನಾವು ಈ ವಿಶಿಷ್ಟ ಆಚರಣೆಯನ್ನು ಕಾಣಬಹುದು.

ಗ್ರಾಮದಿಂದ 40 – 50 ಕಿ.ಮೀ ದೂರದಲ್ಲಿರುವ ಸಿರಿಗೆರೆ ಗ್ರಾಮ ಹತ್ತಿರದ ಗಾದ್ರಿ ಪಾಲನಾಯಕನ ಸ್ಥಳಕ್ಕೆ ಹೋಗಿ ಎಡೆ ಅರ್ಪಿಸಿ, ಪೂಜೆ ಸಲ್ಲಿಸಿ ಬರುವುದು ಈ ಯಾತ್ರೆಯ ವಿಶೇಷ. ಬರುವಂಥ ಭಕ್ತರು ಒಂದು ದಿನದಲ್ಲೇ ಹಿಂತಿರುಗುವುದಿಲ್ಲ. ಎರಡು ದಿನಗಳ ಕಾಲ ಮಿಂಚೇರಿ ಗುಡ್ಡದಲ್ಲಿಯೇ ಬಿಡಾರ ಹೂಡುತ್ತಾರೆ. ಯಾತ್ರೆಗೆ ಸಾವಿರಾರು ಜನರು ತಮ್ಮ ಸಂಬಂಧಿಕರ ಜತೆಗೂಡಿ ಬುಡಕಟ್ಟು ಸಂಸ್ಕೃತಿಯ ಸಂಪ್ರದಾಯದಂತೆ ಎತ್ತಿನ ಗಾಡಿ ಜತೆಗೆ ಇತ್ತೀಚೆಗೆ ಟ್ರ್ಯಾಕ್ಟರ್ ಮೂಲಕವೂ ಬರುತ್ತಾರೆ.

ಗಾದ್ರಿ ಪಾಲನಾಯಕ ಗೋ ಸಂರಕ್ಷಕ. ಆತನಿಗೆ ಕಂಚವ್ವ, ಕಾಮವ್ವರೆಂಬ ಇಬ್ಬರು ಪತ್ನಿಯರು. ಅಡವಿಯಲ್ಲಿ ಪಶುಪಾಲನೆ ಸಂದರ್ಭ ಹುಲಿಯೊಂದಿಗೆ ಅನೋನ್ಯ ಒಪ್ಪಂದದಿಂದಾಗಿ ಹುಲಿಮರಿಗಳನ್ನು ಹಸು ಕರುಗಳ ರೊಪ್ಪದಲ್ಲಿಯೇ ಬೀಡಲಾಗಿತ್ತು. ಒಮ್ಮೆ ಗಾದ್ರಿ ಪಾಲನಾಯಕನ ಭಾವ ಮೈದುನರಾದ ಚಿತ್ತಯ್ಯ, ಕಾಟಯ್ಯ ರೊಪ್ಪಕ್ಕೆ ಬರುತ್ತಾರೆ. ಯಾರೂ ಕಾಣದಿದ್ದಾಗ ರೊಪ್ಪದಲ್ಲಿದ್ದ ಹುಲಿ ಮರಿಯನ್ನು ಕೊಲ್ಲುತ್ತಾರೆ. ಇದರಿಂದ ಗಾದ್ರಿ ಪಾಲನಾಯಕ ವಚನ ಭ್ರಷ್ಟನಾದೆನೆಂದು ದುಃಖಿಸುತ್ತಾನೆ. ಕೊನೆಗೆ ಹುಲಿಯೊಂದಿಗೆ ಕಾದಾಡಿ ಹುಲಿ ಮತ್ತು ಪಾಲನಾಯಕ ಸಾವನ್ನಪ್ಪುತ್ತಾರೆ. ಆ ಸಮಾಧಿಗಳು ಇಂದಿಗೂ ಇವೆ. ಮ್ಯಾಸನಾಯಕ ಸಮುದಾಯ ಈ ಕಥೆಯನ್ನು ಈಗಲೂ ನಂಬಿಕೊಂಡು ಬಂದಿದ್ದು, ಜಾತ್ರೆಯನ್ನು ಆಚರಿಸುತ್ತಿದೆ.

ತಿಂಗಳ ಮುಂಚೆಯೇ ದೇಗುಲದಲ್ಲಿ ಸಭೆ ಸೇರಿ ಜಾತ್ರೆ ತಯಾರಿ ಕುರಿತು ನಿರ್ಧರಿಸಲಾಗಿದೆ. ಯಾತ್ರೆಗಾಗಿ ಸಜ್ಜೆ ರೊಟ್ಟಿ, ಗಾರ್ಗೆ, ಕರಜೀಕಾಯಿ, ಶೇಂಗಾ ಉಂಡೆ ಸೇರಿ ವಿವಿಧ ಬಗೆಯ ಖಾದ್ಯ ತಯಾರಿಗೆ ಸಿದ್ಧತೆ ನಡೆಸಿದ್ದಾರೆ. ಸ್ವಾಮಿಯ ದೇಗುಲದಿಂದ ಸುಮಾರು 10 ಸಾವಿರ ಮಂದಿ ಜಿಲ್ಲೆಯ ವಿವಿಧೆಡೆಯಿಂದ ಮಿಂಚೇರಿ ಯಾತ್ರೆಗೆ ಹೋಗುತ್ತಾರೆ. ಯಾತ್ರೆಗೆ ಹೋಗಿ ಬಂದ ನಂತರ ಮನಸ್ಸಿನಲ್ಲಿ ಅಂದುಕೊಂಡದ್ದು ಈಡೇರಿರುವ ಉದಾಹರಣೆ ಸಾಕಷ್ಟಿದ್ದು, ಆ ನಂಬಿಕೆ ಇಂದಿಗೂ ಮುಂದುವರೆದಿದೆ.

ಮಿಂಚೇರಿ ಯಾತ್ರೆಗೆ ಬಚ್ಚಬೋರನಹಟ್ಟಿ ಮಾರ್ಗವಾಗಿ ಗೋನೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಚಿತ್ರದುರ್ಗ, ಸೀಬಾರ, ಗೂಳಯ್ಯನಹಟ್ಟಿ, ಕ್ಯಾಸಾಪುರ, ಕಡ್ಲೇಗುದ್ದು, ಮೇಗಳಹಟ್ಟಿ, ಕೋಣನೂರು, ಚುಕ್ಕೇನಹಳ್ಳಿ, ಸಿರಿಗೆರೆ, ಮದಕರಿಪುರ ಹಾಗೂ ಮಿಂಚೇರಿ ಪುರದವರೆಗೆ ನಡೆಯಲಿದ್ದು, ಆಯಾ ಗ್ರಾಮಗಳ ಗ್ರಾಮಸ್ಥರು ಭವ್ಯ ಸ್ವಾಗತ ನೀಡುವುದು ಸಂಪ್ರದಾಯ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:bullock cartCulturefairMincherisplendortribeಎತ್ತಿನಗಾಡಿಜಾತ್ರೆಬುಡಕಟ್ಟುಮಿಂಚೇರಿವೈಭವಸಂಸ್ಕೃತಿ
Share This Article
Facebook Email Print
Previous Article ವಕೀಲ ಪ್ರೀತಂ ಮೇಲಿನ ಹಲ್ಲೆಗೆ ಖಂಡನೆ; ನ್ಯಾಯಾಲಯದ ಕಲಾಪದಿಂದ ಹೊರಗುಳಿದ ವಕೀಲರು
Next Article (ಚಿತ್ರಕೃಪೆ-ಗೂಗಲ್) ಸಾಂಕೇತಿಕ ಚಿತ್ರ ಚಿತ್ರದುರ್ಗ-ತುಮಕೂರು ನಡುವೆ ಏರ್‌ಪೋರ್ಟ್ (AIRPORT) | ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಚಿಂತನೆ
Leave a Comment

Leave a Reply Cancel reply

Your email address will not be published. Required fields are marked *

ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up