By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    4 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    4 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    18 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    23 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    5 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    3 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    4 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ನಿಜಲಿಂಗಪ್ಪ ಅವರ ಜೀವನ ವಿಶ್ವವಿದ್ಯಾಲಯದ ಪಠ್ಯವಾಗಲಿ; ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿಹೊಸದುರ್ಗ

ನಿಜಲಿಂಗಪ್ಪ ಅವರ ಜೀವನ ವಿಶ್ವವಿದ್ಯಾಲಯದ ಪಠ್ಯವಾಗಲಿ; ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಒತ್ತಾಯ

News Desk Chitradurga News
Last updated: 10 December 2023 20:35
News Desk Chitradurga News
3 years ago
Share
SHARE

ಚಿತ್ರದುರ್ಗ ನ್ಯೂಸ್‌.ಕಾಂ

ರಾಜಕಾರಣಕ್ಕೆ ಮಾದರಿಯಾಗಿ ಬದುಕಿದ ದಿವಂಗತ ಮಾಜಿ ಮುಖ್ಯಮಂತ್ತಿ ಎಸ್‌.ನಿಜಲಿಂಗಪ್ಪ ಅವರ ಜೀವನ, ಬದುಕಿನ ಪಯಣ ವಿಶ್ವ ವಿದ್ಯಾಲಯದಲ್ಲಿ ಪಠ್ಯವಾಗಬೇಕು. ಈ ಮೂಲಕ ಯುವ ಪೀಳಿಗೆಗೆ ಅವರ ಆದರ್ಶಗಳನ್ನು ತಿಳಿಸುವ ಕಾರ್ಯವಾಗಬೇಕು ಎಂದು ವಿಧಾನಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ: ಬಸ್ಸಲ್ಲಿ ಬಂದಿಳಿದು, ಆಟೋ ಹತ್ತಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ

ತಾಲ್ಲೂಕಿನ ಸೀಬಾರದ ‘ಪುಣ್ಯಭೂಮಿ’ಯಲ್ಲಿ ಭಾನುವಾರ ಎಸ್‌.ನಿಜಲಿಂಗಪ್ಪ ಮೆಮೋರಿಯಲ್‌ ಟ್ರಸ್ಟ್‌ನಿಂದ ಆಯೋಜಿಸಿದ್ದ ಎಸ್ಸೆನ್‌ ಅವರ 121ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ನಿಜಲಿಂಗಪ್ಪ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ‘ಕರ್ನಾಟಕದ ಯಾವುದೇ ರಾಜಕರಣಿಗೂ ರಾಷ್ಟ್ರ ರಾಜಕಾರಣದಲ್ಲಿ ನಿಜಲಿಂಗಪ್ಪ ಅವರಿಗೆ ಸಿಕ್ಕಿದ ಗೌರವ ಸಿಕ್ಕಿಲ್ಲ. ಅಂತಹ ಸ್ಥಾನಮಾನ ಸಿಕ್ಕಿದೆ. ನಿಜಲಿಂಗಪ್ಪ ಅವರ ಬಗ್ಗೆ ಅಧ್ಯಯನ ನಡೆಸುವವರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು’ ಎಂದು ಒತ್ತಾಯಿಸಿದರು.

‘ಜೀವನದಲ್ಲಿ ಅಧಿಕಾರ‌ ಮುಖ್ಯ ಅಲ್ಲವೇ ಅಲ್ಲ, ಆದರ್ಶವೇ‌ ಮುಖ್ಯ ಎಂದು ನಿಜಲಿಂಗಪ್ಪ‌ ಕೊನೆಯ ಕ್ಷಣದವರೆಗೆ ಬದುಕಿದರು. ಅಂದಿನ ರಾಜಕಾರಣಕ್ಕೂ, ಇಂದಿನ ರಾಜಕಾರಣಕ್ಕೂ‌ ಎಳ್ಳು ಕಾಳಷ್ಟು ಸಾಮ್ಯತೆ ಇಲ್ಲ. ಭ್ರಷ್ಟಾಚಾರದ ಸೋಂಕು ಅಂದಿನ ರಾಜಕಾರಣ ಇರಲಿಲ್ಲ’ ಎಂದರು.

ಇದನ್ನೂ ಓದಿ: ಮದುವೆ ಬಸ್‌ ಪಲ್ಟಿ ಪ್ರಕರಣ; ಸಂಕಟದ ನಡುವೆಯೇ ಮುಗಿದ ಮದುವೆ

‘ಕಾಲಕ್ರಮೇಣ ಮರೆಯುವುದು ಮನುಷ್ಯನ ಸ್ವಭಾವ ಆಗಿದೆ. ಆದ್ದರಿಂದ ಪದೇ ಪದೇ ಇಂತಹ ನಾಯಕರ ಸ್ಮರಣೆ ಆಗಬೇಕು. ಭ್ರಷ್ಟಾಚಾರ ರಹಿತ, ಕುಟುಂಬ, ಪರಿವಾರ ರಹಿತ ರಾಜಕಾರಣ ನಡೆದಾಗ ಮಾತ್ರ ನಿಜಲಿಂಗಲಿಪ್ಪ ಅವರಿಗೆ ನಿಜವಾದ ಗೌರವ ಸಲ್ಲುತ್ತದೆ’ ಎಂದು ತಿಳಿಸಿದರು.

‘ನಿಸ್ವಾರ್ಥ ಸೇವೆ ಸಲ್ಲಿಸಿದ ಕಾರಣಕ್ಕೆ ಅವರು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಅದು ಅವರ ರಾಜಕೀಯ‌ ಜೀವನವನ್ನು ತೋರಿಸುತ್ತದೆ. ನನ್ನ ತಾತ ನಿಜಲಿಂಗಪ್ಪ ಅವರ ಬಲಗೈ ಬಂಟನಂತೆ ಹಲವು ದಶಕಗಳ‌ ಕಾಲ ಇದ್ದರು. ಹಾಗಾಗಿ ಹತ್ತಿರದಿಂದ ನೋಡಿದ್ದೇನೆ. ಶುದ್ಧ ರಾಜಕಾರಣಕ್ಕೆ ನನಗೆ ಪ್ರೇರಣೆಯಾಗಿದ್ದಾರೆ’ ಎಂದರು.

ಮಾದಾರ‌ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ‌ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ‘ನಿಜಲಿಂಗಪ್ಪ ಅವರ ರಾಜಕಾರಣದ ಅವಶ್ಯಕತೆ ಇಂದಿನ ಭಾರತಕ್ಕೆ ಅಗತ್ಯವಾಗಿದೆ. ಮಾಜಿ ಮುಖ್ಯಮಂತ್ರಿ ಆಗಿದ್ದರೂ, ಜೀವನವಿಡೀ ಅವರ ಮನೆ ಮುಂದೆ ಒಂದು ಸ್ವಂತ ಕಾರು ನಿಲ್ಲಲಿಲ್ಲ ’ ಎಂದು ತಿಳಿಸಿದರು.

‘ಮಧ್ಯ ಕರ್ನಾಟಕ‌ದ ಚಿತ್ರದುರ್ಗಕ್ಕೆ ಅವರು ಏನು ಮಾಡಲಿಲ್ಲ ಎನ್ನುವ ಆಪಾದನೆ ಇದೆ. ಹಾಗೇ ನೋಡಿದರೆ ಅವರ ಸ್ವಂತ‌ ಜೀವನಕ್ಕೂ ಏನೂ‌ ಮಾಡಿಕೊಳ್ಳಲಿಲ್ಲ. ಅಧಿಕಾರದ ಅವಧಿಯಲ್ಲಿ ನನ್ನ ಊರು, ಹುಟ್ಟೂರು ಎಂದು ಚಿಂತಿಸಿದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದರು’ ಎಂದು ಸ್ಮರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ ಅವರ ಕಾಲದ ರಾಜಕಾರಣಕ್ಕೂ ಇಂದಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದರು. ಅವರ ಪರಿಶುದ್ಧ ರಾಜಕಾರಣ ಇಂದೂ ಕಷ್ಟಸಾಧ್ಯ.‌ ಆದರೂ, ಮುಂದಿನ ಪೀಳಿಗೆ ಈ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು’ ಎಂದರು.

‘ಈ ನೆಲಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಆಗಬೇಕು ಎನ್ನುವುದು ಅವರ ಕನಸಾಗಿತ್ತು. ಅಂದು ಕೇಂದ್ರ ಸಚಿವರಾಗಿದ್ದ ಮನಮೋಹನ್ ಸಿಂಗ್ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಯೋಜನೆಯನ್ನು ಘೋಷಣೆ ಮಾಡಿಸಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.

ಎಸ್‌.ಎನ್‌.ಮೆಮೋರಿಯಲ್‌ ಟ್ರಸ್ಟ್‌ ಗೌರವ ಕಾರ್ಯದರ್ಶಿ ಎಚ್‌.ಹನುಮಂತಪ್ಪ ಮಾತನಾಡಿ, ‘ಜನಪ್ರತಿನಿಧಿಗಳಿಗೆ ಶಿಕ್ಷಣ ಕೊಡುವುದು ನಮ್ಮ ಉದ್ದೇಶವಾಗಿದೆ. ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೆ ತರಬೇತಿ ಆಗಬೇಕು. ಇದಕ್ಕಾಗಿ ಸಿದ್ದರಾಮಯ್ಯ ₹ 2 ಕೋಟಿ ಅನುದಾನ ನೀಡಿದ್ದಾರೆ. ಈಗಾಗಲೇ ₹ 1 ಕೋಟಿಯಲ್ಲಿ‌ ಜಮೀನು ಖರೀಧಿಸಿದ್ದೇವೆ’ ಎಂದು ಹೇಳಿದರು.

ಪುಣ್ಯಭೂಮಿ ಆವರಣದಲ್ಲಿ ಓವರ್ ಹೆಡ್‌ ಟ್ಯಾಂಕ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಟ್ರಸ್ಟ್ ವತಿಯಿಂದ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಮುಖಂಡ ವಿಜಯ ಕುಮಾರ್‌, ಟ್ರಸ್ಟ್‌ ನಿರ್ದೇಶಕ ಕೆಇಬಿ ಷಣ್ಮುಖಪ್ಪ, ಪತ್ರಕರ್ತ ಜಿ.ಎಸ್‌.ಉಜ್ಜಿನಪ್ಪ, ನಾಗರಾಜ್‌ ಸಂಗಂ, ವೀರೇಶ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationChitradurgaMemorialNijalingappaPoliticsSeebaraಚಿತ್ರದುರ್ಗಜನ್ಮದಿನಾಚರಣೆನಿಜಲಿಂಗಪ್ಪರಾಜಕಾರಣಸೀಬಾರಸ್ಮಾರಕ
Share This Article
Facebook Email Print
Previous Article ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಸ್ಸಲ್ಲಿ ಬಂದಿಳಿದು, ಆಟೋ ಹತ್ತಿ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ
Next Article ಚಿರತೆ ಎಮ್ಮೆಕರು ಮೇಲೆ ಚಿರತೆ ದಾಳಿ | ಮರಿಗಳೊಂದಿಗೆ ಅಡ್ಡಾಡುವ ಚಿರತೆ ಕಂಡು ಆತಂಕದಲ್ಲಿ ಗ್ರಾಮಸ್ಥರು
Leave a Comment

Leave a Reply Cancel reply

Your email address will not be published. Required fields are marked *

rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
hernia
ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up