
ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ನಗರದ ಹಳೇ ಬೆಂಗಳೂರು ರಸ್ತೆಯಲ್ಲಿ ನಿಗೂಢವಾಗಿ ಮೃತಪಟ್ಟಿರುವ ಐದು ಜನರ ಅಸ್ಥಿ ಪತ್ತೆ ಹಿನ್ನೆಲೆಯಲ್ಲಿ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಮನೆಯ ಮಾಲಿಕರಾದ ಜಗನ್ನಾಥ ರೆಡ್ಡಿ ಅವರ ಸಂಬಂಧಿಕರಾದ ಪವನ್ ಕುಮಾರ್ ದೂರು ದಾಖಲು ಮಾಡಿದ್ದಾರೆ.
ಇದನ್ನೂ ಓದಿ: ಜೈಲು ರಸ್ತೆಯ ಮನೆಯಲ್ಲಿ 5 ಜನರ ಮೃತದೇಹಗಳಿರುವ ಶಂಕೆ
ಸದರಿ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಸುಮಾರು 80 ವರ್ಷದ ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣರೆಡ್ಡಿ ಹಾಗೂ ನರೇಂದ್ರ ರೆಡ್ಡಿ ವಾಸವಾಗಿದ್ದರು.
ಆದರೆ, ಸುಮಾರು ವರ್ಷಗಳಿಂದ ಜಗನ್ನಾಥ ರೆಡ್ಡಿ ಅವರ ಕುಟುಂಬ ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ, ನಾವು ಅವರ ಮನೆಗೆ ಹೋಗುತ್ತಿರಲಿಲ್ಲ. ಕೆಲವು ವರ್ಷಗಳಿಂದ ಈ ಕುಟುಂಬ ಎಲ್ಲಿಯೂ ಕಂಡಿಲ್ಲ ಎಂದು ತಿಳಿಸಿದ್ದಾರೆ.
ಇಲ್ಲಿ ಪತ್ತೆಯಾಗಿರುವ ಅಸ್ಥಿ ಪಂಜರಗಳು ಅವರದ್ದೇ ಆಗಿರುವ ಅನುಮಾನವೂ ಇದೆ. 3 ವರ್ಷಗಳ ಹಿಂದೆ ಮೃತಪಟ್ಟರುವ ಶಂಕೆ ಕಾಣಿಸುತ್ತಿದೆ. ಈ ಘೋರ ಸಾವಿನ ಬಗ್ಗೆ ಅನುಮಾನವಿದೆ ಎಂದು ದೂರು ನೀಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
