Connect with us

    ಕುರಿ ಸಾಕಾಣಿಕೆ ಲಾಭದಾಯಕ | ಕುರಿ ಫೆಡರೇಷನ್ ಸ್ಥಾಪಿಸಿದರೆ ಅನುಕೂಲ | ಡಾ.ದೊಡ್ಡಮಲ್ಲಯ್ಯ

    ಹಿರಿಯೂರು

    ಕುರಿ ಸಾಕಾಣಿಕೆ ಲಾಭದಾಯಕ | ಕುರಿ ಫೆಡರೇಷನ್ ಸ್ಥಾಪಿಸಿದರೆ ಅನುಕೂಲ | ಡಾ.ದೊಡ್ಡಮಲ್ಲಯ್ಯ

    ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಪ್ರಸಿದ್ದಿಯಾಗಿದೆ. ಇದಕ್ಕೆ ಪೂರಕವಾಗಿ ವೈಜ್ಞಾನಿಕ ಜ್ಞಾನ, ಬದ್ದತೆ ಹಾಗೂ ಶಿಸ್ತು ರೂಢಿಸಿಕೊಂಡರೆ ಉತ್ತಮ ಲಾಭ ನಿರೀಕ್ಷೆ ಮಾಡಬಹುದು ಎಂದು ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ ಹೇಳಿದರು.

    ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇತ್ತೇಚೆಗೆ ಜಿಲ್ಲೆಯ ರೈತರಿಗೆ ಹಮ್ಮಿಕೊಂಡಿದ್ದ ‘ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ’ ಕುರಿತ ತರಬೇತಿಯಲ್ಲಿ ಮಾತನಾಡಿದರು.

    ಇದನ್ನೂ ಓದಿ: ರಾಜ್ಯ ಬಿಜೆಪಿ ವಕ್ತಾರರಾಗಿ ಕೆ.ಎಸ್.ನವೀನ್

    ಜಿಲ್ಲೆಯಲ್ಲಿ ಕುರಿ ಸಾಕಾಣಿಕೆ ಮಾಡುವ ರೈತರು ಒಟ್ಟುಗೂಡಿ ಕುರಿ ಫೆಡರೇಷನ್ ಮಾಡಿಕೊಳ್ಳುವುದರಿಂದ ಎಲ್ಲರೂ ಸಮಗ್ರವಾಗಿ ಮುನ್ನೆಡೆಯಲು ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

    ಭಾರತದಲ್ಲಿ ಮಾಂಸಹಾರ ಸೇವನೆಗೆ ಅತೀ ಹೆಚ್ಚು ಕುರಿ ಮತ್ತು ಮೇಕೆ ಮಾಂಸ ಉಪಯೋಗಿಸುತ್ತಾರೆ. ಕುರಿ ಮತ್ತು ಮೇಕೆಯಿಂದ ಹಾಲು, ಉಣ್ಣೆ, ಚರ್ಮ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸಲು ಉತ್ತಮ ಗೊಬ್ಬರ ದೊರೆಯುತ್ತದೆ ಎಂದು ತಿಳಿಸಿದರು.

    ಕುರಿ ಮತ್ತು ಮೇಕೆ ಸಾಕಣಿಕೆಯಲ್ಲಿ ರೈತರಲ್ಲಿ ಆಸಕ್ತಿ ಮೂಡಿಸಲು ಬಿ.ಜಿಕೆರೆ ವೀರಭದ್ರಪ್ಪ, ಶಿರಾ ತಾಲ್ಲೂಕಿನ ದಿ. ದೊಡ್ಡಜ್ಜಿ, ಸುಬ್ಬಾರೆಡ್ಡಿ, ವೀರಕೆಂಪಣ್ಣರ ಯಶೋಗಾಥೆಯನ್ನು ದೊಡ್ಡಮಲ್ಲಯ್ಯ ವಿವರಿಸಿದರು.

    ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಮಾತನಾಡಿ, ಸಮಗ್ರ ಕೃಷಿ ಪದ್ದತಿಯನ್ನು ರೈತರು ಅನುಸರಿಸುವುದರಿಂದ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬನೆಯ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

    ರೈತರು ಪ್ರಸ್ತುತ ಹವಾಮಾನ ವೈಪಾರಿತ್ಯದಿಂದ ಕೃಷಿಯನ್ನು ಒಂದೇ ನಂಬಿ ಆರ್ಥಿಕವಾಗಿ ಮುನ್ನೆಡೆಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಕೃಷಿಗೆ ಪೂರಕವಾದ ತೋಟಗಾರಿಕೆ ಬೆಳೆಗಳು, ಜೇನು ಸಾಕಾಣಿಕೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ಹಾಗೂ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಕೈಗೊಳ್ಳುವುದರಿಂದ ಒಂದರಲ್ಲಿ ನಷ್ಟವಾದರೆ ಇನ್ನೊಂದು ಕೃಷಿ ಪೂರಕ ಚಟುವಟಿಕೆಯಿಂದ ಲಾಭವನ್ನು ನಿರೀಕ್ಷಿಸಬಹುದು ಎಂದರು.

    ಇದನ್ನೂ ಓದಿ: ಚಿತ್ರದುರ್ಗದ ಹಿರಿಯ ಸಾಹಿತಿ ಪ್ರೊ.ಎಚ್.ಶ್ರೀಶೈಲಾರಾಧ್ಯ ಇನ್ನಿಲ್ಲ

    ಸಮಗ್ರ ಕೃಷಿ ಪದ್ದತಿಯ ಒಂದು ಅಂಗವಾದ ಕುರಿ ಮತ್ತು ಮೇಕೆ ಸಾಕಾಣಿಕೆಯ ಕುರಿತು ವೈಜ್ಞಾನಿಕವಾಗಿ ಉತ್ತಮ ಕುರಿ ಮತ್ತು ಮೇಕೆ ತಳಿಯ ಆಯ್ಕೆ, ಕುರಿ ಶೆಡ್ ಮತ್ತು ಮೇವಿನ ನಿರ್ವಹಣೆ ಹಾಗೂ ಅವುಗಳ ಆರೋಗ್ಯ ನಿರ್ವಹಣೆ ಬಗ್ಗೆ ರೈತರು ಈ ತರಬೇತಿಯಲ್ಲಿ ನಿಡಲಾಗುವ ಮಾಹಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.

    ಕೃಷಿ ಅಧಿಕಾರಿ ಎಂ.ಜೆ.ಪವಿತ್ರಾ, ಟಿ.ಪಿ.ರಂಜಿತಾ, ಜಿಲ್ಲಾ ಕೃಷಿ ತರಬೇತಿಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಎಂ.ಉಷಾರಾಣಿ ಭಾಗವಹಿಸಿದ್ದರು.

    ರಾಜ್ಯದಲ್ಲೇ ಅತೀ ಹೆಚ್ಚು ಕುರಿ ಮೇಕೆ ಚಿತ್ರದುರ್ಗದಲ್ಲಿವೆ

    ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ಸಹಾಯಕ ನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕುರಿ (13.50 ಲಕ್ಷ) ಮತ್ತು ಮೇಕೆಗಳ (3.85 ಲಕ್ಷ) ಸಂಖ್ಯೆಯಿದ್ದು, ಕುರಿ ಮತ್ತು ಮೇಕೆ ಮಾಂಸಕ್ಕೆ ಅತೀ ಹೆಚ್ಚು ಬೇಡಿಕೆ ಇದೆ. ಸಾಕಾಣಿಕೆಗೆ ಉತ್ತಮ ಅವಕಾಶಗಳಿವೆ. ಇವು ಸದಾ ಕಾಲ ಸಣ್ಣ ಮತ್ತು ಅತೀ ಸಣ್ಣ ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಲಾಭ ತಂದುಕೊಡುವಂತಾಗಿವೆ ಎಂದರು.
    ಕುರಿಗಳಲ್ಲಿ ಡೆಕನಿ, ಬನ್ನೂರು ಮತ್ತು ಬಳ್ಳಾರಿ ತಳಿಗಳು ಉತ್ತಮವಾಗಿದ್ದು ಮೇಕೆಯಲ್ಲಿ ನಂದಿದುರ್ಗ ತಳಿಯು ಹೆಸರುವಾಸಿಯಾಗಿದೆ.
    25-30 ಕುರಿಗಳಿಗೆ ಒಂದು ಟಗರನ್ನು ಸಾಕುವುದರಿಂದ ಗಣನೀಯವಾಗಿ ಅವುಗಳ ವಂಶಾಭಿವೃದ್ಧಿ ಹೆಚ್ಚಿಸಬಹುದು.

    Click to comment

    Leave a Reply

    Your email address will not be published. Required fields are marked *

    More in ಹಿರಿಯೂರು

    To Top