
CHITRADURGA NEWS | 10 JANUARY 2024
ಚಿತ್ರದುರ್ಗ: ಈ ಹಿಂದೆ ಚಿತ್ರದುರ್ಗ ಮುರುಘಾ ಮಠಕ್ಕೆ ಸೇರಿದ ಎಸ್ಜೆಂ ವಿದ್ಯಾಪೀಠದ ಕಾರ್ಯನಿರ್ವಹಣಾ ಅಧಿಕಾರಿಯಾಗಿದ್ದ ಎಂ.ಭರತ್ ಕುಮಾರ್ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ವರ್ಗಾವಣೆ ಮಾಡದಂತೆ ಹಾಗೂ ಅವರನ್ನು ಈಗಿರುವ ಸ್ಥಳದಲ್ಲೇ ಉಳಿಸುವಂತೆ ಕೋರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಎಂ.ಭರತ್ ಕುಮಾರ್ ಪತ್ರ ಬರೆದಿದ್ದ ಕಾರಣಕ್ಕೆ ನ್ಯಾಯಾಲಯ ಸ್ವಯಂ ಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂಧನೆ ಮೊಕದ್ದಮೆ ಹೂಡಿದೆ.

ಇದನ್ನೂ ಓದಿ: ಹೆತ್ತ ಕಂದನ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ
ಈ ವಿಚಾರವಾಗಿ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ಎಂ.ಭರತ್ ಕುಮಾರ್ ಅವರಿಗೆ ಸಮನಸ್ ಜಾರಿಗೊಳಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ವಿದೇಶದಲ್ಲಿ ನೆಲೆಸಿದ್ದ ಎಂ.ಭರತ್ ಕುಮಾರ್ ಅವರು ಕಳೆದ ವರ್ಷ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಅವರನ್ನು ಮಠದ ವಿದ್ಯಾಪೀಠಕ್ಕೆ ಸಿಇಓ ಆಗಿ ನೇಮಕ ಮಾಡಲಾಗಿತ್ತು.
ಇತ್ತೀಚೆಗೆ ಪೀಠಾಧ್ಯಕ್ಷರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು ಭರತ್ ಕುಮಾರ್ ಅವರನ್ನು ಸಿಇಓ ಸ್ಥಾನದಿಂದ ಕೈ ಬಿಟ್ಟಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
