CHITRADURGA NEWS | 14 JANUARY 2024
ಚಿತ್ರದುರ್ಗ: ಬಿಜೆಪಿ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎ.ಮುರುಳಿ ಪುನರಾಯ್ಕೆ ಆಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿ ಪಟ್ಟಿ ಹೊರಬಿಟ್ಟಿದ್ದಾರೆ.
ಇದನ್ನೂ ಓದಿ: ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯ ಕಸರತ್ತು | ಯಾರಾಗಲಿದ್ದಾರೆ ಜಿಲ್ಲೆಗೆ ಸಾರಥಿ
ಈ ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರಾಗಿದ್ದ ಎ.ಮುರುಳಿ ಅವರನ್ನು ಮರು ಆಯ್ಕೆ ಮಾಡುವ ಮೂಲಕ ಅಚ್ಚರಿ ಮೂಡಿಸಲಾಗಿದೆ.
ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು 16 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು.
ಆದರೆ, ಬಿಜೆಪಿ ವರಿಷ್ಠರು ಅಳೆದು, ತೂಗಿ ಹಾಲಿ ಅಧ್ಯಕ್ಷ ಎ.ಮುರುಳಿ ಅವರನ್ನೇ ಮುಂದುವರೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
