By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಸತಿ ಯೋಜನೆಗೆ ಅರ್ಜಿ ಆಹ್ವಾನ
    8 minutes ago
    ಮುಖ್ಯಮಂತ್ರಿ ಸಿದ್ದರಾಮಯ್ಯ
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
    2 hours ago
    ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
    3 hours ago
    ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
    ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
    5 hours ago
    ಸ್ವಚ್ಛತಾ ಜಾಗೃತಿ ಜಾಥಾ ಕಾರ್ಯಕ್ರಮ
    ಕಸ ವಿಂಗಡಿಸಿ ಕಸದ ಗಾಡಿಗೆ ನೀಡುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಕೈಜೋಡಿಸಿ 
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    20 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    10 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    9 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    10 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ | ಮುರುಳಿ ಪುನರಾಯ್ಕೆ | ಹನುಮಂತೇಗೌಡ ಮಧುಗಿರಿ ಸಾರಥ್ಯ | ಆಯ್ಕೆಯ ಹಿಂದಿವೆ ನಾನಾ ಲೆಕ್ಕಾಚಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ | ಮುರುಳಿ ಪುನರಾಯ್ಕೆ | ಹನುಮಂತೇಗೌಡ ಮಧುಗಿರಿ ಸಾರಥ್ಯ | ಆಯ್ಕೆಯ ಹಿಂದಿವೆ ನಾನಾ ಲೆಕ್ಕಾಚಾರ

chitradurganews.com
Last updated: 15 January 2024 06:53
chitradurganews.com
2 years ago
Share
ಎ.ಮುರುಳಿ - ಬಿ.ಸಿ.ಹನುಮಂತೇಗೌಡ
ಎ.ಮುರುಳಿ - ಬಿ.ಸಿ.ಹನುಮಂತೇಗೌಡ
SHARE

CHITRADURG NEWS | 15 JANUARY 2024

ಚಿತ್ರದುರ್ಗ: ಬಿಜೆಪಿಯಲ್ಲಿ ಈ ವರ್ಷ ಕೋಟೆನಾಡು ಚಿತ್ರದುರ್ಗಕ್ಕೆ ಬಂಪರ್ ಕೊಡುಗೆ ಸಿಕ್ಕಿದೆ ಎನ್ನಬಹುದು.
ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಎ.ಮುರುಳಿ, ಮಧುಗಿರಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ಸಿ.ಹನುಮಂತೇಗೌಡ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಮೂಲದ ಇಬ್ಬರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಒಲಿದು ಬಂದಿದಿರುವುದು ವಿಶೇಷವಾಗಿದೆ. ಇನ್ನೂ ವಿಶೇಷ ಅಂದ್ರೆ, ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ರಾಜ್ಯ ನಾಯಕರು ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎ.ಮುರುಳಿ ಪುನರಾಯ್ಕೆ

ಇದರೊಟ್ಟಿಗೆ ಬಿಜೆಪಿ ರಾಜ್ಯ ವಕ್ತಾರರಾಗಿ ಕೆ.ಎಸ್.ನವೀನ್ ಕೂಡಾ ಇರುವುದು ಜಿಲ್ಲೆಯ ಬಲವನ್ನು ರಾಜ್ಯ ಬಿಜೆಪಿಯಲ್ಲಿ ಮತ್ತಷ್ಟು ಹೆಚ್ಚಿಸಿದಂತಾಗಿದೆ.

ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ರಾಜ್ಯದಲ್ಲಿ ಹೊಸ ತಂಡ ಕಟ್ಟಿಕೊಂಡು ಲೋಕಸಭೆ ಚುನಾವಣೆಗೆ ಅಣಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೊಸ ಜಿಲ್ಲಾ ಅಧ್ಯಕ್ಷರ ಬಗ್ಗೆ ಸಹಜವಾಗಿ ಎಲ್ಲರಿಗೂ ತೀವ್ರ ಕುತೂಹಲವಿತ್ತು.

ಅದರಂತೆ ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬರೋಬ್ಬರಿ 16 ಜನ ಆಕಾಂಕ್ಷಿಗಳಿದ್ದರು. ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಚಿತ್ರದುರ್ಗ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಬೆಂಬಲಿಗರು, ಅವರು ನಮ್ಮ ಪರ ಇದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇದನ್ನೂ ಓದಿ: ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಹನುಮಂತೇಗೌಡ ಆಯ್ಕೆ

ಆದರೆ, ಎಲ್ಲ ಆಕಾಂಕ್ಷಿಗಳು ಹಾಗೂ ಜಿಲ್ಲೆಯ ಬಿಜೆಪಿ ಮುಖಂಡರಿಗೆ ರಾಜ್ಯ ನಾಯಕರು ಶಾಕ್ ಆಗುವಂತೆ ಹಾಲಿ ಅಧ್ಯಕ್ಷ ಎ.ಮುರುಳಿ ಅವರನ್ನೇ ಮತ್ತೊಂದು ಅವಧಿಗೆ ಪುನರಾಯ್ಕೆ ಮಾಡಿರುವುದು ಅನಿರೀಕ್ಷಿತ ಬೆಳವಣಿಗೆ ಆಗಿದೆ.

ಮುರುಳಿ ಅವರ ಪುನರಾಯ್ಕೆಯ ಹಿಂದೆ ನಾನಾ ಲೆಕ್ಕಾಚಾರಗಳು ಇರಬಹುದು. ಸಾಲು ಸಾಲು ಆಕಾಂಕ್ಷಿಗಳಲ್ಲಿ ಒಬ್ಬರನ್ನು ಅಂತಿಮಗೊಳಿಸುವ ಉಸಾಬರಿಯೂ ಇರಬಹುದು.

ಗೊಲ್ಲ ಸಮುದಾಯದ ಮತಬುಟ್ಟಿ ಮೇಲೆ ಕಣ್ಣು:

ಒಂದು ಲೆಕ್ಕಾಚಾರದ ಪ್ರಕಾರ, ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿರುವ ಗೊಲ್ಲ ಸಮುದಾಯದ ಮತಬುಟ್ಟಿ ಮೇಲೆ ಬಿಜೆಪಿ ಕಣ್ಣಿಟ್ಟಿರುವ ಸಾಧ್ಯತೆ ಇದೆ.

ಮುಂದಿನ ಲೋಕಸಭೆಗೆ ಈ ಸಮುದಾಯದ ಮತಗಳು ಚಿತ್ರದುರ್ಗ, ತುಮಕೂರು ಭಾಗದಲ್ಲಿ ನಿರ್ಣಾಯಕವಾಗಿವೆ. ಈ ಹಿನ್ನೆಲೆಯಲ್ಲಿ ಗೊಲ್ಲ ಸಮುದಾಯಕ್ಕೆ ಸೇರಿದ ಎ.ಮುರುಳಿ ಅವರನ್ನೇ ಮತ್ತೊಂದು ಅವಧಿಗೆ ಮುಂದುವರೆಸಿದರೆ ಸಮುದಾಯದ ಗಮನ ಸೆಳೆಯಬಹುದು. ಸಮುದಾಯದ ವಿಶ್ವಾಸ ಗಳಿಸಬಹುದು ಎನ್ನುವ ಲೆಕ್ಕಾಚಾರಗಳಿವೆ.

ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಅವರ ಪತಿ ಡಿ.ಟಿ.ಶ್ರೀನಿವಾಸ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ಆ ಸಮುದಾಯವನ್ನು ಬಿಜೆಪಿಯಲ್ಲಿ ಹಿಡಿದಿಟ್ಟುಕೊಳ್ಳುವ ಸವಾಲು ಬಿಜೆಪಿ ಮುಂದಿತ್ತು.

ಈ ಕಾರಣಕ್ಕೆ ಪೂರ್ಣಿಮಾ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ಈ ಗೇಮ್ ಪ್ಲಾನ್ ಮಾಡಿರುವ ಸಾಧ್ಯತೆಯೂ ಇದೆ ಎಂಬ ಕೂಡು ಕಳೆಯುವ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ಗರಿಗೆದರಿವೆ.

ಹನುಮಂತೇಗೌಡಗೆ ಮಧುಗಿರಿ ಉಸ್ತುವಾರಿ:

ಇನ್ನೂ ಚಿತ್ರದುರ್ಗ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಬಿ.ಸಿ.ಹನುಮಂತೇಗೌಡ ಅವರನ್ನು ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಕೂಡಾ ಅಚ್ಚರಿಯ ನಡೆಯಾಗಿದೆ.

ಹನುಮಂತೇಗೌಡ ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಮಧುಗಿರಿ ಉಸ್ತುವಾರಿ ನೀಡುವ ಮೂಲಕ ಅಲ್ಲಿ ರಾಜಕೀಯ ಭವಿಷ್ಯ ಗಟ್ಟಿ ಮಾಡಿಕೊಳ್ಳಲು ಸೂಚನೆ ಕೊಟ್ಟಂತಿದೆ.

ಈ ಹಿಂದೆ ಹನುಮಂತೇಗೌಡ ಹಿರಿಯೂರು ಕ್ಷೇತ್ರದಲ್ಲಿ ಹೆಚ್ಚು ಸಕ್ರೀಯರಾಗಿ ಓಡಾಟ ಮಾಡಿಕೊಂಡಿದ್ದರು. ಹಿರಿಯೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚು ಕುಂಚಿಟಿಗ ಮತಗಳಿದ್ದ ಕಾರಣಕ್ಕೆ ಅಲ್ಲಿ ರಾಜಕೀಯ ನೆಲೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದರು.

ಆದರೆ, ರಾಜ್ಯದ ಬಿಜೆಪಿ ನಾಯಕರು ಮಧುಗಿರಿಯಲ್ಲಿ ಓಡಾಡಲು ನೀಡಿದ್ದ ಸೂಚನೆಯಂತೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಹನುಮಂತೇಗೌಡ ಮಧುಗಿರಿ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದರು.

ಮೂಲತಃ ಇದೇ ಜಿಲ್ಲೆಯವರಾಗಿರುವ ಹನುಮಂತೇಗೌಡ, ಚಿತ್ರದುರ್ಗದ ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಪದವಿ ಪೂರೈಸಿ, ಇಲ್ಲಿಯೇ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. ಚಿತ್ರದುರ್ಗ ಜಿಲ್ಲೆಯಲ್ಲಿಯೇ ಮದುವೆಯೂ ಆಗಿದ್ದರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ನೆಲೆ ಕಂಡುಕೊಳ್ಳುತ್ತಾರೆ ಎನ್ನುವ ಸಾಧ್ಯತೆಗಳನ್ನು ಲೆಕ್ಕ ಹಾಕಲಾಗುತ್ತಿತ್ತು.

ಆದರೆ, ಕಳೆದ ವಿಧಾನಸಭೆ ಚುನಾವಣೆ ವೇಳೆ ಮಧುಗಿರಿ ಕ್ಷೇತ್ರದಲ್ಲಿ ಓಡಾಡಿದ್ದ ಗೌಡರಿಗೆ ಈಗ ಅದೇ ಕ್ಷೇತ್ರದ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಿರುವುದು ಭವಿಷ್ಯದಲ್ಲಿ ಇಲ್ಲಿ ನೆಲೆ ಕಂಡುಕೊಳ್ಳಲು ಅನುಕೂಲ ಆಗಲಿ ಎನ್ನುವ ಉದ್ದೇಶ ಇರಬಹುದು. ಜೊತೆಗೆ ಈ ಭಾಗದ ಒಕ್ಕಲಿಗ ಮತ ಸೆಳೆಯುವ ಉದ್ದೇಶವೂ ಇರಬಹುದು ಎನ್ನುವ ಲೆಕ್ಕಾಚಾರ ಇದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:A. MuruliB.Y.VijayendraBJPChitradurgaDistrict PresidentHanumante GowdaMadhugiriಎ.ಮುರುಳಿಚಿತ್ರದುರ್ಗಜಿಲ್ಲಾ ಅಧ್ಯಕ್ಷಬಿ.ವೈ.ವಿಜಯೇಂದ್ರಬಿಜೆಪಿಮಧುಗಿರಿಹನುಮಂತೇಗೌಡ
Share This Article
Facebook Email Print
Previous Article ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಹನುಮಂತೇಗೌಡ ಆಯ್ಕೆ BREAKING NEWS ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಹನುಮಂತೇಗೌಡ ಆಯ್ಕೆ
Next Article ದೇಗುಲಗಳ ಸ್ವಚ್ಛತೆ ಮಾಡಿದ ಬಿಜೆಪಿ ಕಾರ್ಯಕರ್ತರು ಕೋಟೆನಾಡಿನಲ್ಲಿ ದೇಗುಲಗಳ ಸ್ವಚ್ಛತೆ ಮಾಡಿದ ಬಿಜೆಪಿ ಕಾರ್ಯಕರ್ತರು
Leave a Comment

Leave a Reply Cancel reply

Your email address will not be published. Required fields are marked *

ವಸತಿ ಯೋಜನೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
ಮುಖ್ಯ ಸುದ್ದಿ
ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
ಮುಖ್ಯ ಸುದ್ದಿ
ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up