By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    11 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    11 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    11 hours ago
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    23 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    12 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    23 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    16 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    22 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    23 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    3 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ಚಿತ್ರದುರ್ಗ ಬಂದ್ | ಇಡೀ ದಿನ ಏನೇನಾಯ್ತು | ಯಾರು ಏನು ಹೇಳಿದ್ರು | ಸಂಪೂರ್ಣ ವರದಿ ಇಲ್ಲಿದೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಬಂದ್ | ಇಡೀ ದಿನ ಏನೇನಾಯ್ತು | ಯಾರು ಏನು ಹೇಳಿದ್ರು | ಸಂಪೂರ್ಣ ವರದಿ ಇಲ್ಲಿದೆ

chitradurganews.com
Last updated: 23 January 2024 21:49
chitradurganews.com
2 years ago
Share
ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು ಬಂದ್ ಮಾಡಿದರು.
ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು ಬಂದ್ ಮಾಡಿದರು.
SHARE

CHITRADURGA NEWS | 23 JANUARY 2024

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ವಿರೋಧಿಸಿ, ಕಾಮಗಾರಿ ತ್ವರಿತಗೊಳಿಸಲು ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಚಿತ್ರದುರ್ಗ ನಗರ ಬಂದ್ ಆಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು, ರೈತರು ಹಾಗೂ ಸಾರ್ವಜನಿಕರ ನೆರವಿನೊಂದಿಗೆ ಮಧ್ಯಾಹ್ನದವರೆಗೆ ಮುಖ್ಯ ರಸ್ತೆಗಳನ್ನು ಬಂದ್ ಮಾಡುವಲ್ಲಿ ಸಂಘಟಕರು ಯಶಸ್ವಿಯಾದರು.

ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರ ಸ್ವೀಕಾರ

ಬೆಳಗ್ಗೆ 6 ಗಂಟೆಗೆ ಬೀದಿಗಿಳಿದ ರೈತರು, ಕಾರ್ಮಿಕರು, ಕನ್ನಡಪರ ಹೋರಾಟಗಾರರು, ಅಂಗಡಿ ಮುಂಗಟ್ಟುಗಳು ತೆರೆಯದಂತೆ ನೋಡಿಕೊಂಡರು. ಬಸ್ಸುಗಳು ಮುಖ್ಯ ರಸ್ತೆಗೆ ಬರಲೇ ಇಲ್ಲ. ಹೋಟೆಲ್, ಖಾಸಗಿ ಶಾಲೆಗಳು, ಬೈಕ್ ಶೋ ರೂಂಗಳು ಸೇರಿದಂತೆ ಬಹುತೇಕರು ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸಿದರು.

ಚಿತ್ರದುರ್ಗ ನಗರ ಬಂದ್
ಚಿತ್ರದುರ್ಗ ನಗರ ಬಂದ್

ನಗರದ ಗಾಂಧಿ ವೃತ್ತ, ಪ್ರವಾಸಿ ಮಂದಿರದ ವೃತ್ತ, ಮೆದೇಹಳ್ಳಿ ರಸ್ತೆ, ಬಿ.ಡಿ.ರಸ್ತೆಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿ ಬಂದ್ ಆಚರಿಸಿದರು.

ಭೀಮಸಮುದ್ರ ರಸ್ತೆಯಲ್ಲಿ ಬಂದ್ ನಡುವೆಯೂ ಕಾರ್ಯನಿರ್ವಹಿಸುತ್ತಿದ್ದ ಗಾರ್ಮೆಂಟ್ಸ್ ಬಳಿ ಕರವೇ ಕಾರ್ಯಕರ್ತರು ಪ್ರತಿಭಟಿಸಿ ಕಾರ್ಮಿಕರನ್ನು ಹೊರಗೆ ಬರುವಂತೆ ಮಾಡಿದರು.

ಇದನ್ನೂ ಓದಿ: ಶ್ರೀರಾಮಲಲ್ಲಾ ದರ್ಶನವಾಗುತ್ತಲೇ ನೂರಾರು ಸಂತರ ಆನಂದಭಾಷ್ಪ

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಮುಖ್ಯ ರಸ್ತೆ ಸಂಪೂರ್ಣ ಬಂದಗ್ ಆಗಿತ್ತು. ಕೆಲ ಶಾಲೆಗಳು ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಟೋ, ಬಸ್ ಸೇವೆ ಇಲ್ಲದೆ ಪರದಾಡಬೇಕಾಯಿತು.
ಮಾಹಿತಿ ಇಲ್ಲದೆ ನಗರಕ್ಕೆ ಬಂದ ಗ್ರಾಮೀಣ ಭಾಗದ ಜನತೆ ಹಾಗೂ ಬೇರೆ ಜಿಲ್ಲೆಯ ವಾಹನಗಳು ಚಿತ್ರದುರ್ಗ ನಗರದೊಳಗೆ ಸಂಚರಿಸುವಾಗ ಪ್ರತಿಭಟನೆಯ ಬಿಸಿ ಎದುರಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಟಾನ ಕುರಿತು ಸರಕಾರಕ್ಕೆ ಬದ್ಧತೆ ಇದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಯೋಜನೆ ಕಾಮಗಾರಿ ವೀಕ್ಷಣೆಗೆ ದಿನಾಂಕ ನಿಗಧಿಪಡಿಸಿದ್ದರು, ಆದರೆ ಇಡೀ ದಿನ ಕಾಮಗಾರಿ ವೀಕ್ಷಣೆ ಮಾಡಬೇಕು ಎನ್ನುವ ಕಾರಣಕ್ಕೆ ನಾವೇ ಮುಂದೂಡಿದ್ದೇವೆ. ಈ ತಿಂಗಳ ಅಂತ್ಯದೊಳಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿನಾಂಕ ನಿಗಧಿ ಮಾಡಲಿದ್ದಾರೆ. ಬರುವ ಬಜೆಟ್‍ನಲ್ಲಿ ಯೋಜೆನೆಗೆ ಪೂರಕ ಅನುದಾನ ಮೀಸಲಿರಿಸುತ್ತೇವೆ.

| ಡಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ.

ಜಿಲ್ಲಾ ನೀರಾವರಿ ಅನುμÁ್ಠನ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಪ್ರಧಾನ ಕಾರ್ಯದರ್ಶಿ ದಯಾನಂದ್, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ಮುಖಂಡರಾದ ಜೆ.ಯಾದವರೆಡ್ಡಿ, ಬಸ್ತಿಹಳ್ಳಿ ಸುರೇಶ್ ಬಾಬು, ರೈತ ಮುಖಂಡರಾದ ಈಚಘಟ್ಟದ ಸಿದ್ದವೀರಪ್ಪ, ಹೊರಕೇರಪ್ಪ, ಲಕ್ಷ್ಮಿಕಾಂತ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ಧನಂಜಯ ಹಂಪಯ್ಯನಮಾಳಿಗೆ, ಕರುನಾಡ ವಿಜಯಸೇನೆಯ ಕೆ.ಟಿ.ಶಿವಕುಮಾರ್, ಕರವೇ ರಮೇಶ್, ಅಣ್ಣಪ್ಪ, ಕಾರ್ಮಿಕ ಮುಖಂಡರದ ಸುರೇಶ್ ಬಾಬು, ಬಸವರಾಜು, ಟಿ.ಆರ್.ಉಮಾಪತಿ, ಸತ್ಯಕೀರ್ತಿ, ವೈ.ತಿಪ್ಪೇಸ್ವಾಮಿ, ವಕೀಲರು, ಪತ್ರಕರ್ತರು ಸೇರಿದಂತೆ ನೂರಾರು ಮಂದಿ ಬಂದ್‍ನಲ್ಲಿ ಭಾಗವಹಿಸಿದ್ದರು.

ಚಿತ್ರದುರ್ಗ ನಗರ ಬಂದ್
ಚಿತ್ರದುರ್ಗ ನಗರ ಬಂದ್

ಇದನ್ನೂ ಓದಿ: ಬಿಜೆಪಿಗೆ ಅಧಿಕಾರ ಕೊಟ್ಟಿದ್ದು ಭಜನೆ ಮಾಡಲು ಅಲ್ಲ

ಮಾಜಿ ಸಂಸದರಿಗೆ ಬಂದ್ ಬಿಸಿ:
ರಾಜ್ಯ ಹಾಗೂ ಕೇಂದ್ರ ಎರಡೂ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈತರು ಬಂದ್ ಆಚರಣೆ ಮಾಡುತ್ತಿದ್ದರು. ಇದೇ ವೇಳೆಗೆ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಗಾಂಧಿ ವೃತ್ತಕ್ಕೆ ಆಗಮಿಸಿ ಬಂದ್‍ಗೆ ಬೆಂಬಲ ಸೂಚಿಸಿ ಮಾತನಾಡಲು ಆರಂಭಿಸಿದರು.

ಈ ವೇಳೆ ರೈತರು, ಕನ್ನಡಪರ ಹೋರಾಟಗಾರರು ಬಿ.ಎನ್.ಚಂದ್ರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ನೀವು ಐದು ವರ್ಷ ಅಧಿಕಾರದಲ್ಲಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಗಾಗಿ ಏನು ಮಾಡಿದ್ದೀರಿ ಹೇಳಿ. ಈಗ ಲೋಕಸಭೆ ಚುನಾವಣೆ ಹತ್ತಿರವಾಗಿದೆ ಎಂದು ಬಂದಿದ್ದೀರಾ ಎಂದು ಪ್ರಶ್ನಿಸಿದರು. ಈ ವೇಳೆ ಬಿ.ಎನ್.ಚಂದ್ರಪ್ಪ ಅನಿವಾರ್ಯವಾಗಿ ಮಾತು ಅರ್ಧಕ್ಕೆ ನಿಲ್ಲಿಸಿ ಅಲ್ಲಿಂದ ತೆರಳಿದರು. ಮಾಜಿ ಸಚಿವ ಎಚ್.ಆಂಜನೇಯ ಕೂಡಾ ಪರಿಸ್ಥಿತಿ ಅರಿತು ಅಲ್ಲಿಂದ ನಿರ್ಗಮಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ರೂ. ಘೋಷಣೆ ಮಾಡಿದೆ. ಆದರೆ, ಈವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ 1200 ಕೋಟಿ ರೂ. ನೀಡಿದೆ. 21 ಸಾವಿರ ಕೋಟಿ ರೂ. ಗಾತ್ರದ ಯೋಜನೆಯನ್ನು ಕೇಂದ್ರ 16500 ಕೋಟಿಗೆ ಕಡಿತಗೊಳಿಸುವುದು ಬೇಡ. 2025ಕ್ಕೆ ಈ ಯೋಜನೆ ಪೂರ್ಣಗೊಳಿಸುವ ಗುರಿಯನ್ನು ಅಧಿಕಾರಿಗಳು ಹಾಕಿಕೊಂಡಿದ್ದಾರೆ. ಅದರಂತೆ ನಮ್ಮ ಸರ್ಕಾರ ಕೂಡಾ ಮುಂದಿನ ಎರಡು ಬಜೆಟ್‍ಗಳಲ್ಲಿ ಅನುದಾನ ಒದಗಿಸುವಂತೆ ಮಾಡಲು ಜಿಲ್ಲೆಯ ಎಲ್ಲ ಶಾಸಕರು ಹೋರಾಡುತ್ತೇವೆ.

| ಟಿ.ರಘುಮೂರ್ತಿ, ಚಳ್ಳಕೆರೆ ಶಾಸಕರು.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ:
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದಾಸೀನದಿಂದಾಗಿ ನನೆಗುದಿಗೆ ಬಿದ್ದಿದೆ. ಕಾಮಗಾರಿ ಆರಂಭವಾಗಿ 23 ವರ್ಷ ಕಳೆದಿದ್ದರೂ ಮುಕ್ತಾಯದ ಹಂತ ತಲುಪಿಲ್ಲ. ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆಯನ್ನು ರೈತರು ಖಂಡಿಸಿ ಮನವಿ ಸಲ್ಲಿಸಿದರು.

ಶೋಷಿತರ ಭದ್ರ ನೆಲೆಯಾಗಿರುವ ಪ್ರದೇಶಕ್ಕೆ ನೀರಾವರಿ ಜಾರಿ ವಿಚಾರದಲ್ಲಿ ಸರ್ಕಾರಗಳು ತಳೆದಿರುವ ನಿಲುವುಗಳು ನಿಜಕ್ಕೂ ಆಘಾತಕಾರಿ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ವರ್ಗಾವಣೆ

ಮಧ್ಯ ಕರ್ನಾಟಕದ ನಾಲ್ಕು ಜಿಲ್ಲೆಗಳ ಕೆರೆ ತುಂಬಿಸುವ ಹಾಗೂ ಹನಿ ನೀರಾವರಿ ಯೋಜನೆಗೆ ಆರಂಭದಲ್ಲಿ 6 ಸಾವಿರ ಕೋಟಿ ರೂ. ವೆಚ್ಚ ಅಂದಾಜಿಸಲಾಗಿತ್ತು. ಸರ್ಕಾರದ ಇಚ್ಚಾಶಕ್ತಿ ಕೊರತೆ ಹಾಗೂ ವಿಳಂಬ ಧೋರಣೆಯಿಂದಾಗಿ ಅದೀಗ 22 ಸಾವಿರ ಕೋಟಿಗೆ ತಲುಪಿದೆ.

ತರಿಕೆರೆ ತಾಲೂಕಿನ ಅಬ್ಬಿನಹೊಳಲು ಬಳಿ ಕೇವಲ 1.6 ಕಿಮೀ ಉದ್ದದ ಕಾಲುವೆ ನಿರ್ಮಾಣಕ್ಕೆ ಅಲ್ಲಿನ ಕೆಲ ರೈತರು ಅಡ್ಡಿ ಪಡಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಇದು ಸಮಸ್ಯೆಯಾಗಿ ಉಳಿದಿದೆ. ಓರ್ವ ಜನಪ್ರತಿನಿಧಿಯ ಹಠದ ಮುಂದೆ ಇಡೀ ಸರ್ಕಾರವೇ ಮಂಡಿಯೂರಿದೆ. ಇದೊಂದು ಸಮಸ್ಯೆಯಿಂದಾಗಿ ಯೋಜನಾ ವೆಚ್ಚ ಹೆಚ್ಚಳವಾಗುತ್ತಲೇ ಹೋಗುತ್ತಿದ್ದು ಸರ್ಕಾರಕ್ಕೆ ಈ ಸಂಗತಿ ಅರಿವಾಗದೇ ಇರುವುದು ಶೋಚನೀಯ.

ಕೇಂದ್ರದ 5300 ಕೋಟಿ ರುಪಾಯಿ ಅನುದಾನ ಪಡೆಯುವ ಸಂಬಂಧ ರಾಜ್ಯ ಸರ್ಕಾರ ಕೇಂದ್ರದ ಮುಂದೆ 2025 ರ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಲಿಖಿತವಾಗಿ ಹೇಳಿಕೆ ನೀಡಿದೆ. 2025 ರ ವೇಳೆಗೆ ಕಾಮಗಾರಿ ಮುಗಿಸುವ ಭರವಸೆಯ ರಾಜ್ಯ ಸರ್ಕಾರ ನೀಡಿದೆಯಾದರೂ ಅನುದಾನ ಬಿಡುಗಡೆ, ಬಾಕಿ ಉಳಿದಿರುವ ಕಾಮಗಾರಿ ಪ್ರಮಾಣ ನೋಡಿದರೆ ಇನ್ನೊಂದು ವರ್ಷದಲ್ಲಿ ಕಾಮಗಾರಿ ಮುಗಿಯುತ್ತದೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ.

ಬಹಳ ಧೀರ್ಘ ಕಾಲದ ಹೋರಾಟ ಹಾಗೂ ಯೋಜನೆ ಇದು ಎನ್ನುವುದು ನನ್ನ ಗಮನದಲ್ಲಿದೆ. 2-3 ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಜೊತೆ ಮಾತನಾಡಿ ಆ ಭಾಗದಲ್ಲಿರುವ ಸಮಸ್ಯೆ ಬಗೆಹರಿಸುವುದು ಹಾಗೂ ಬಾಕಿ ಕಾಮಗಾರಿ ಮುಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇನೆ. ಆನಂತರ ರೈತರ ಸಭೆ ಕರೆದು ಮಾತನಾಡುತ್ತೇನೆ.

| ಟಿ.ವೆಂಕಟೇಶ್, ಜಿಲ್ಲಾಧಿಕಾರಿ.

ಕೇಂದ್ರ ಸರ್ಕಾರ ಈ ಅಂಶ ಮುಂದಿಟ್ಟುಕೊಂಡು ಅನುದಾನ ಬಿಡುಗಡೆಗೆ ಮತ್ತಷ್ಟು ವಿಳಂಬ ಮಾಡುವ ಸಾಧ್ಯತೆಗಳ ಬಗ್ಗೆ ಸರ್ಕಾರ ಚಿಂತಿಸಬೇಕು. ಕೇಂದ್ರದ ಅನುದಾನ ಕಾಯದೆ ರಾಜ್ಯ ಸರ್ಕಾರ ಅನುದಾನ ಕಾಯ್ದರಿಸಿಕೊಂಡು ಕಾಮಗಾರಿಗೆ ಚುರುಕಿನ ವೇಗ ನೀಡಬೇಕು. ಕೇಂದ್ರ ಎತ್ತಿರುವ ತಾಂತ್ರಿಕ ಸಮಸ್ಯೆಗಳ ತಕರಾರುಗಳ ರಾಜ್ಯ ಸರ್ಕಾರ ಸರಪಡಿಸಿಕೊಳ್ಳಲಿ.

ಭದ್ರಾ ಮೇಲ್ದಂಡೆಯ ಚಿತ್ರದುರ್ಗ ಮುಖ್ಯ ಕಾಲುವೆ ಕಾಮಗಾರಿ ಶೇ.80 ರಷ್ಟು ಮುಗಿದಿದ್ದು ಬರಪೀಡಿತ ತಾಲೂಕುಗಳಾದ ಚಳ್ಳಕೆರೆ, ಹಿರಿಯೂರು ಮತ್ತು ಚಿತ್ರದುರ್ಗಕ್ಕೆ ಸಂಬಂಧಿಸಿದಂತೆ 69 ಸಾವಿರ ಹೆಕ್ಟೇರ್ ಪ್ರದೇಶದ ಹನಿ ನೀರಾವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಲ್ಲಿಯೂ ವಿಳಂಭ ನೀತಿ ಅನುಸರಿಸಲಾಗುತ್ತಿದೆ. ತರಿಕೆರೆ ಭಾಗದಲ್ಲಿ ಈಗಾಗಲೇ ಹನಿ ನೀರಾವರಿ ಅಳವಡಿಕೆ ಕಾರ್ಯ ಪ್ರಾರಂಭಿಸಲಾಗಿದೆ. ಇದೇ ಮಾದರಿ ಈ ಮೂರು ತಾಲೂಕುಗಳಲ್ಲಿ ಕೈಗೆತ್ತಿಕೊಳ್ಳಬೇಕೆಂದು ನೀರಾವರಿ ಅನುμÁ್ಠನ ಹೋರಾಟ ಸಮಿತಿ ಆಗ್ರಹಿಸಿದೆ.

ಚಿತ್ರದುರ್ಗ ನಗರ ಬಂದ್
ಚಿತ್ರದುರ್ಗ ನಗರ ಬಂದ್

ಹೋರಾಟಗಾರರ ಪ್ರಮುಖ ಬೇಡಿಕೆಗಳು:

  • ಭದ್ರಾ ಮೇಲ್ದಂಡೆ ಕಾಮಗಾರಿಗೆ ತೊಡಕಾಗಿರುವ ಭೂ ಸ್ವಾಧೀನ ಪ್ರಕ್ರಿಯೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.
  • ಚಳ್ಳಕೆರೆ, ಮೊಳಕಾಲ್ಮುರು, ಜಗಳೂರು ಪ್ರದೇಶದ ಕಾಮಗಾರಿಗಳ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು.
    ಹೊಳಲ್ಕೆರೆ ತಾಲೂಕಿನ ಕೆರೆಗಳ ತುಂಬಿಸಲು ಮುಂಬರುವ ಮಳೆಗಾಲದಲ್ಲಿಯೇ ಅಗತ್ಯ ಕ್ರಮ ಕೈಗೊಳ್ಳಬೇಕು.
    ಟೆಂಡರ್ ಕರೆದು ಹನಿ ನೀರಾವರಿ ಕಾಮಗಾರಿಗಳ ಆರಂಭಿಸಬೇಕು.
  • ಮುಂದಿನ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಜಲ ಸಂಪನ್ಮೂಲ ಇಲಾಖೆಗೆ ನಿಗಧಿಗೊಳಿಸಲಾದ ಅನುದಾನದಲ್ಲಿ ಸಿಂಹಪಾಲು ಭದ್ರಾ ಮೇಲ್ದಂಡೆಗೆ ವಿನಿಯೋಗಿಸಬೇಕು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra Upper BankChitradurgaChitradurga BandhFarmersIrrigationKannadaLabourersಕನ್ನಡಕಾರ್ಮಿಕರುಚಿತ್ರದುರ್ಗಚಿತ್ರದುರ್ಗ ಬಂದ್ನೀರಾವರಿಭದ್ರಾ ಮೇಲ್ದಂಡೆರೈತರು
Share This Article
Facebook Email Print
Previous Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರ ಸ್ವೀಕಾರ
Next Article arecanut price list ಅಡಿಕೆ ಧಾರಣೆ | ಜನವರಿ 23 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
ಮುಖ್ಯ ಸುದ್ದಿ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಮುಖ್ಯ ಸುದ್ದಿ
D.Sudhakar son suhas met D.K.Shivakumar
ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up