
CHITRADURGA NEWS | 01 FEBRUARY 2024
ಚಿತ್ರದುರ್ಗ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದ ಸೇತುವೆ ಬಳಿ ನಡೆದಿದೆ.
ಅಪಘಾತದಲ್ಲಿ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ನಿವಾಸಿ ಚಂದ್ರಶೇಖರ್ (60) ಮೃತಪಟ್ಟಿದ್ದಾರೆ. ಬೈಕ್ ಓಡಿಸುತ್ತಿದ್ದ ಅವರ ಪುತ್ರ ಬಸವರಾಜ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಸಾಣೇಹಳ್ಳಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಒಡಿ ಸೌಲಭ್ಯ
ಚಂದ್ರಶೇಖರ್ ಅವರು ಸಂಬಂಧಿಕರ ಮನೆಯಲ್ಲಿ ನಡೆದ ಹಬ್ಬಕ್ಕೆ ಹೋಗಿ ಚನ್ನಗಿರಿ ಮಾರ್ಗವಾಗಿ ದುಮ್ಮಿ ಗ್ರಾಮಕ್ಕೆ ಮಗನ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಏಕಾಏಕಿ ನಿಲುಗಡೆ ಮಾಡಿದ್ದರಿಂದ ಬೈಕ್ ಟ್ರ್ಯಾಕ್ಟರ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಗಾಯಗೊಂಡ ಚಂದ್ರಶೇಖರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
