Connect with us

    28 ರಿಂದ 50 ಸಾವಿರ ವೇತನದ ಉದ್ಯೋಗ | ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

    jobs in chitradurga news

    ಮುಖ್ಯ ಸುದ್ದಿ

    28 ರಿಂದ 50 ಸಾವಿರ ವೇತನದ ಉದ್ಯೋಗ | ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

    CHITRADURGA NEWS | 07 FEBRUARY 2024

    ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

    ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿ ತರಬೇತಿ

    18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು 2024 ಫೆಬ್ರವರಿ 20 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

    ಹುದ್ದೆಗಳ ವಿವರ:

    ಜಿಲ್ಲಾ ಯೋಜನಾ ಸಂಯೋಜಕ (District mission co-ordinator) ಒಂದು ಹುದ್ದೆ.
    ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ವಿಜ್ಞಾನ ಅಥವಾ ಜೀವ ವಿಜ್ಞಾನ, ಪೌಷ್ಠಿಕ, ವೈದ್ಯಕೀಯ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ, ಗ್ರಾಮೀಣ ಆಡಳಿತ ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಪಡೆದಿರಬೇಕು.

    ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ 3 ವರ್ಷದ ಯೋಜನೆ ನಿರ್ವಹಣೆ ಬಗ್ಗೆ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ 50 ಸಾವಿರ ಗೌರವ ಧನ ನೀಡಲಾಗುತ್ತದೆ.

    ಇದನ್ನೂ ಓದಿ: ಯೋಗ, ಡ್ಯಾನ್ಸ್, ಸಮಾಜ ವಿಜ್ಞಾನ, ಇಂಗ್ಲೀಷ್ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಲಿಂಗ ತಜ್ಞ (Gender spacialist) ಒಂದು ಹುದ್ದೆ. ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಂಗೀಗೃತ ವಿಶ್ವವಿದ್ಯಾಲಯದಿಂದ ಸಾಮಾಜಿಕ ಕಾರ್ಯ ಅಥವಾ ಇತರೆ ಸಾಮಾಜಿಕ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

    ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಲಿಂಗತ್ವ ಆಧಾರಿತ ವಿಷಯದ ಮೇಲೆ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ 35 ಸಾವಿರ ಗೌರವ ಧನ ಧನ ನೀಡಲಾಗುವುದು.

    ಹಣಕಾಸು ಸಾಕ್ಷರತೆ ಹಾಗೂ ಲೆಕ್ಕಿಗ ತಜ್ಞ (Spacalist in financial literacy and accountant) ಒಂದು ಹುದ್ದೆ. ಅಂಗೀಗೃತ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ, ಬ್ಯಾಂಕಿಂಗ್, ಇತರೆ ಸಂಖ್ಯಾ ಶಾಸ್ತ್ರ ವಿಷಯಗಳಲ್ಲಿ ಯಾವುದಾದರು ಒಂದರಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

    ಇದನ್ನೂ ಓದಿ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್ ವಿಭಾಗದಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಆಯ್ಕೆ ಆಗುವ ಅಭ್ಯರ್ಥಿಗೆ ಮಾಸಿಕ 28 ಸಾವಿರ ರೂ. ಗೌರವ ಧನ ನೀಡಲಾಗುವುದು.

    ಅರ್ಜಿ ಸಲ್ಲಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ನಗರದ ಜಿಲ್ಲಾ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-235259 ಹಾಗೂ ಇ-ಮೇಲ್ ddwcdcta@gmail.com ಸಂಪರ್ಕಿಸಬಹುದು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top