Connect with us

    ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು

    ಅಡಕೆ ಧಾರಣೆ

    ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು

    CHITRADURGA NEWS | 14 FEBRUARY 2024

    ಚಿತ್ರದುರ್ಗ: ನಮ್ಮ ದೇಶದಲ್ಲಿ ಕರ್ನಾಟಕದಲ್ಲಿ ಶೇ.79ರಷ್ಟು ಅಡಿಕೆ ಬೆಳೆ ಬೆಳೆಯುತ್ತಿದ್ದು, ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಶಿವಮೊಗ್ಗ ಅಡಿಕೆ ಸಂಶೋಧನಾ ಕೇಂದ್ರ ಮುಖ್ಯಸ್ಥ ಡಾ. ನಾಗರಾಜ್ ಅಡಿವಪ್ಪರ್ ಹೇಳಿದರು.

    ಹಿರಿಯೂರಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ ‘ಅಡಿಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಇದನ್ನೂ ಓದಿ: 106 ಜನರಿಗೆ 4.80 ಕೋಟಿ ರೂ. ವಂಚನೆ | ಚಿತ್ರದುರ್ಗ ಜಿಲ್ಲೆಯಲ್ಲಿ ಬಯಲಿಗೆ ಬಂತು ದೊಡ್ಡ ಹಗರಣ

    ಅಡಿಕೆ ಬೆಳೆಯನ್ನು ಬೆಳೆಯಲು ನೀರು ಬಸಿದು ಹೋಗುವ ಕೆಂಪು ಮಣ್ಣು ಸೂಕ್ತವಾಗಿದ್ದು, ನೀರು ನಿಲ್ಲುವ ಜೌಗು ಮತ್ತು ಸವಳು ಮಣ್ಣಿನ ಪ್ರದೇಶಗಳು ಅಡಿಕೆಗೆ ಸೂಕ್ತವಲ್ಲ. ಮಣ್ಣಿನ ರಸಸಾರ 6 ರಿಂದ 7 ಸೂಕ್ತ. ಅಡಿಕೆಯನ್ನು 9*9 ಅಡಿ ಅಂತರದಲ್ಲಿ 2*2*2 ಅಡಿ ಅಳತೆಯ ಗುಂಡಿಯಲ್ಲಿ ನಾಟಿ ಮಾಡುವುದು ಸೂಕ್ತ ಎಂದು ತಿಳಿಸಿದ ಅವರು, ಅಡಿಕೆಯಲ್ಲಿ ಅಂತರ ಬೆಳೆಯಾಗಿ ಬಾಳೆ, ವೀಳ್ಯೆದೆಳೆ, ಜಾಯಿಕಾಯಿ ಮತ್ತು ಕರಿಮೆಣಸು ಚಿತ್ರದುರ್ಗ ಜಿಲ್ಲೆಗೆ ಸೂಕ್ತವಾಗಿದೆ ಎಂದು ಹೇಳಿದರು.

    ತರಬೇತಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 75 ಕ್ಕೂ ಹೆಚ್ಚು ಆಸಕ್ತ ರೈತರು ಭಾಗವಹಿಸಿದ್ದು

    ತರಬೇತಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 75 ಕ್ಕೂ ಹೆಚ್ಚು ಆಸಕ್ತ ರೈತರು ಭಾಗವಹಿಸಿದ್ದು

    ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ರೈತರು ಅಡಿಕೆಯನ್ನು ಪ್ರಮುಖ ತೋಟಗಾರಿಕೆ ವಾಣಿಜ್ಯ ಬೆಳೆಯಾಗಿ ಬೆಳೆಯಲು ಆಸಕ್ತಿ ತೋರುತ್ತಿದ್ದು, ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಉತ್ತಮ ತಳಿಗಳ ಆಯ್ಕೆ, ಬೇಸಾಯ ಕ್ರಮ, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆಯ ತಾಂತ್ರಿಕ ಮಾಹಿತಿ ಅಗತ್ಯವಿದೆ.

    ಇದನ್ನೂ ಓದಿ: ರಾಗಿ ಖರೀಧಿಗೆ ನೊಂದಣಿ ಪ್ರಾರಂಭ | ಅವಧಿ ವಿಸ್ತರಣೆಗೆ ರೈತರ ಆಗ್ರಹ

    ಇದಲ್ಲದೆ ರೈತರಿಗೆ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಮಾಡುವ ವಿಧಾನದ ಮಾಹಿತಿಯೊಂದಿಗೆ ಪ್ರಾತ್ಯಕ್ಷಿಕೆ ಮಾಡುವುದು ಸಹ ಈ ತರಬೇತಿಯ ಪ್ರಮುಖ ವಿಷಯವಾಗಿದ್ದು, ಇದರಿಂದ ಅಡಿಕೆ ಸಿಪ್ಪೆಯನ್ನು ಎಲ್ಲೆಂದರಲ್ಲೆ ಬಿಸಾಕುವುದು ಹಾಗೂ ಇದರಿಂದಾಗುವ ಅವಘಡಗಳನ್ನು ತಪ್ಪಿಸಲು ಮತ್ತು ರೈತರು ಸ್ವತಃ ತಮ್ಮ ತೋಟಕ್ಕೆ ಬೇಕಾಗುವ ಕಾಂಪೋಸ್ಟ್ ಗೊಬ್ಬರ ಮಾಡಿಕೊಳ್ಳಬಹುದಾಗಿರುವುದರಿಂದ ಈ ತರಬೇತಿಯು ಸಹಕಾರಿಯಾಗಲಿದೆ ಎಂದರು.

    ತೋಟಗಾರಿಕೆ ತಜ್ಞ ಡಾ.ಸುದೀಪ್ ಮಾತನಾಡಿ, ಅಡಿಕೆಯ ವಿವಿಧ ತಳಿಗಳು ಮತ್ತು ಅವುಗಳ ವಿಶೇಷ ಗುಣಗಳು, ಸಸ್ಯಾಭಿವೃದ್ದಿಯ ಕ್ರಮಗಳು, ಪೋಷಕಾಂಶಗಳ ನಿರ್ವಹಣೆ, ಹಸಿರೆಲೆ ಗೊಬ್ಬರದ ನಿರ್ವಹಣೆ, ಹಾಗೂ ನೀರು ಮತ್ತು ಬಸಿಗಾಲುವೆಯ ನಿರ್ವಹಣೆ ಕುರಿತು ತಿಳಿಸಿದರು.

    ಇದನ್ನೂ ಓದಿ: ಅಡಿಕೆ ಧಾರಣೆ | ಫೆಬ್ರವರಿ 13 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ

    ಕೀಟಶಾಸ್ತ್ರ ತಜ್ಞೆ ಡಾ.ಸ್ವಾತಿ ಮಾತನಾಡಿ, ಅಡಿಕೆಯಲ್ಲಿ ಬರುವ ಪ್ರಮುಖ ರೋಗಗಳಾದ ಸುಳಿ ಕೊಳೆ, ಹಿಂಗಾರು ಒಣಗುವ ರೋಗ, ದುಂಡಾಣು ಎಲೆ ಪಟ್ಟಿ ರೋಗ, ಅಣಬೆ ರೋಗ, ಎಲೆ ಚುಕ್ಕಿ ಮತ್ತು ಹಿಡಿಮುಂಡಿಗೆ ಹಾಗೂ ಪ್ರಮುಖ ಕೀಟಗಳಾದ ನುಸಿ, ರುಗೋಸ್ ಸುರಳಿ ಸುತ್ತುವ ಬಿಳಿನೊಣ, ಸುಳಿ ತಿಗಣೆ, ಹಿಂಗರು ತಿನ್ನುವ ಹುಳುಗಳ ಹಾನಿಯ ಲಕ್ಷಣ ಮತ್ತು ಅವುಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

    ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಆವರಣದಲ್ಲಿ ರೈತರಿಗೆ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆಯ ವಿಧಾನವನ್ನು ವಿವರಿಸಲಾಯಿತು.

    ತರಬೇತಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 75 ಕ್ಕೂ ಹೆಚ್ಚು ಆಸಕ್ತ ರೈತರು ಭಾಗವಹಿಸಿದ್ದು, ಭಾಗವಹಿಸಿದ ರೈತರಿಗೆ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿಕೊಳ್ಳಲು ಉಚಿತವಾಗಿ ಕಾಂಪೋಸ್ಟ್ ಕಲ್ಚರ್‍ನ್ನು ನೀಡಲಾಯಿತು.

    Click to comment

    Leave a Reply

    Your email address will not be published. Required fields are marked *

    More in ಅಡಕೆ ಧಾರಣೆ

    To Top