
CHITRADURGA NEWS | 23 FEBRUARY 2024
ಚಿತ್ರದುರ್ಗ: ಗ್ರಾನೈಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಈಚರ್ ಲಾರಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ಕಾಲುಗಳು ಮುರಿದು ಗಂಭಿರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.
ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಗಿರಿಯಜ್ಜನ ಕಪಿಲೆ ಬಳಿ ಅಪಘಾತ ನಡೆದಿದೆ.
ಇದನ್ನೂ ಓದಿ: ಪಕ್ಷದ ತೀರ್ಮಾನಕ್ಕೆ ನಾನು ಬದ್ಧ | ಕಾರ್ಯಕರ್ತನಾಗಿರು ಎಂದರೆ ಅದಕ್ಕೂ ಸಿದ್ಧನಿದ್ದೇನೆ
ಚಳ್ಳಕೆರೆ ಕಡೆಯಿಂದ ಗ್ರಾನೈಟ್ಸ್ ತುಂಬಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಗೆ ವೇಗವಾಗಿ ಬಂದ ಈಚರ್ ಲಾರಿ, ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿಯ ಚಾಲಕ ಅಶೋಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಾಳು ಅಶೋಕನನ್ನು ಸ್ಥಳೀಯರು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಸ್ಥಿರತೆ ಕಂಡುಕೊಳ್ಳದ ಅಡಿಕೆ ಧಾರಣೆ | ಮಾರಾಟ ಮಾಡದ ಬೆಳೆಗಾರರಲ್ಲಿ ಗೊಂದಲ
ಘಟನೆಯಲ್ಲಿ ಈಚರ್ ಲಾರಿಯ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಇನ್ಸ್‍ಪೆಕ್ಟರ್ ಕೆ.ಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
