CHITRADURGA NEWS | 12 MARCH 2024
ಚಿತ್ರದುರ್ಗ: ನಗರದ ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗ ಯುವಕರಿಗೆ ಸ್ವ ಉದ್ಯೋಗಕ್ಕಾಗಿ ಮೊಬೈಲ್ ರಿಪೇರಿ ತರಬೇತಿ ಆಯೋಜಿಸಲಾಗಿದೆ.
30 ದಿನಗಳ ತರಬೇತಿ ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಪ್ರಾರಂಭವಾಗಲಿದೆ. ತರಬೇತಿಗೆ ಆಯ್ಕೆ ಮಾಡಲು ಮಾರ್ಚ್ 18 ರಂದು ರುಡ್‌ಸೆಟ್ ಸಂಸ್ಥೆ ಆವರಣದಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.

ಸಂದರ್ಶಕ್ಕೆ ಆಗಮಿಸುವರು18 ರಿಂದ 45 ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. ಕನ್ನಡ ಓದು ಬರಹ ಬಲ್ಲವರಾಗಿರಬೇಕು. ಮೊಬೈಲ್ ರಿಪೇರಿ ವೃತ್ತಿಯನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ಜತೆಗೆ ತರಬೇತಿಗೆ ಸಂಬಂದಪಟ್ಟ ಕೌಶಲ್ಯ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಕ್ಲಿಕ್ ಮಾಡಿ ಓದಿ: https://chitradurganews.com/victory-yatra-of-karataka-damanaka/
ತರಬೇತಿ ವೇಳೆ ಊಟ ಮತ್ತು ವಸತಿಯನ್ನು ಸಂಪೂರ್ಣ ಉಚಿತವಾಗಿರುತ್ತದೆ. ಆಸಕ್ತರು ಮೊಬೈಲ್ ನಂಬರ್‌ನ ಸ್ವವಿಳಾಸದ ಅರ್ಜಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ 8618282445, 9449732805, 9481778047 / 08194 – 223505 ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆ ನಿರ್ದೇಶಕಿ ಎಚ್.ಆರ್.ರಾಧಮ್ಮ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
