
CHITRADURGA NEWS | 15 MARCH 2024
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಸಿ.ಸಿ.ಪಾಟಿಲ್ ನಗರದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಬೆಳಗ್ಗೆ 11 ಗಂಟೆಗೆ ಮಠಕ್ಕೆಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ಬೊಮ್ಮಾಯಿ, ಮಠದಲ್ಲೇ ಉಪಹಾರ ಸೇವಿಸಿ ಸುಧೀರ್ಘ ಸಮಾಲೋಚನೆ ನಡೆಸಿದರು.
ಈ ವೇಳೆ ಹಾವೇರಿ ಕ್ಷೇತ್ರದ ಹಲವು ಮುಖಂಡರು ಮಠದಲ್ಲಿ ಇದ್ದು, ಶ್ರೀಗಳು ಹಾಗೂ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ಚಿತ್ರದುರ್ಗ ಬಿಜೆಪಿ ಟಿಕೇಟ್ ಇನ್ನೂ ಅಂತಿಮವಾಗದ ಹಿನ್ನೆಲೆಯಲ್ಲಿ ಮಾದಾರ ಚನ್ನಯ್ಯ ಗುರುಪೀಠಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಕುತೂಹಲ ಮೂಡಿಸಿತ್ತು.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಮುದಾಯಕ್ಕೆ ನೀಡಿದ ಪ್ರಾತಿನಿಧ್ಯ, ಕೊಡುಗೆಗಳ ಬಗ್ಗೆ ಸಮುದಾಯದ ಮುಖಂಡರಿಗೆ ಮಾಜಿ ಸಿಎಂ ಮನವರಿಕೆ ಮಾಡಿಕೊಟ್ಟರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

