CHITRADURGA NEWS | 17 MARCH 2024
ಹೊಳಲ್ಕೆರೆ : ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ಗಾಂಧೀಜಿ ಜಯಂತಿಯಂದು ನೀರು ತುಂಬಿಸುವುದಾಗಿ ಶಾಸಕ ಎಂ. ಚಂದ್ರಪ್ಪ ಭರವಸೆ ನೀಡಿದರು.
ಸಂಗೇನಹಳ್ಳಿ, ನಂದನಹೊಸೂರು, ಚೌಡಗೊಂಡನಹಳ್ಳಿ, ಎಂ.ಜಿ. ಕಟ್ಟೆ ಗ್ರಾಮಗಳಲ್ಲಿ 9.10 ಕೋಟಿ ವೆಚ್ಚದ ನೂತನ ಚೆಕ್ ಡ್ಯಾಮ್ ನಿರ್ಮಾಣ ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,
ಇದನ್ನೂ ಓದಿ: ಶಕ್ತಿ ಯೋಜನೆಯಡಿ 1.52 ಕೋಟಿ ಮಹಿಳೆಯರು ಪ್ರಯಾಣ
ಈ ವರ್ಷ ಉತ್ತಮ ಮಳೆ ಆಗುವ ಲಕ್ಷಣಗಳಿದೆ, ಅಕ್ಟೋಬರ್ 2 ಗಾಂಧೀಜಿ ಜಯಂತಿಯಂದು ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಪಥ ಮಾಡಿದ್ದೇನೆ, ಕ್ಷೇತ್ರದ ಮತದಾರರು ಹಾಗೂ ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿದ್ದೇನೆ, ವಾಣಿಜ್ಯ ಬೆಳೆ ಅಡಿಕೆ ಬೆಳೆಯುವ ರೈತರಿಗೆ ತೊಂದರೆ ಆಗಬಾರದೆನ್ನುವ ಉದ್ದೇಶವಿಟ್ಟುಕೊಂಡು ಎಲ್ಲಾ ಕೆರೆಗಳಿಗೆ ನೀರು ತುಂಬಿಸುತ್ತೇನೆ, ಬಡವರಿಗೆ ಸುಲಭವಾಗಿ ಚಿಕಿತ್ಸೆ ಸಿಗಲಿ ಎಂದು ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ, ಅದೇ ರೀತಿ ಶಾಲಾ-ಕಾಲೇಜು ರಸ್ತೆಗಳ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಲೋಕ ಸಮರಕ್ಕೆ ಡೇಟ್ ಫಿಕ್ಸ್ | ಏ.16, ಮೇ 7ಕ್ಕೆ ಮತದಾನ | ಜೂನ್ 4 ಕ್ಕೆ ಫಲಿತಾಂಶ
ಈ ವೇಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜ್ಯೋತಿ, ಬಿಜೆಪಿ ಮುಖಂಡ ಚಿತ್ರಹಳ್ಳಿ ದೇವರಾಜ್, ಪಾಲಣ್ಣ, ಪ್ರಕಾಶ್, ಮಂಜಣ್ಣ, ಸತೀಶ್, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ನಾಗರಾಜ್, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

