Connect with us

    ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ | ಸಡಗರ ಸಂಭ್ರಮದಿಂದ ನೆರವೇರಿದ ಕೆಂಡಾರ್ಚನೆ

    ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ

    ಮುಖ್ಯ ಸುದ್ದಿ

    ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ | ಸಡಗರ ಸಂಭ್ರಮದಿಂದ ನೆರವೇರಿದ ಕೆಂಡಾರ್ಚನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 18 MARCH 2024

    ಚಿತ್ರದುರ್ಗ: ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಸೋಮವಾರ ಸ್ವಾಮಿಯ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಸ್ವಾಮಿಗೆ ಹೂವಿನ ಉತ್ಸವ ನಡೆದಿದ್ದು, ನಂತರ ಪಲ್ಲಕ್ಕಿಯಲ್ಲಿ ಸ್ವಾಮಿಯನ್ನು ಪ್ರತಿಷ್ಠಾಪಿಸಿ ದೇವಾಲಯದ ಪ್ರದಕ್ಷಿಣೆ ಹಾಕಲಾಯಿತು.

    ಇದನ್ನೂ ಓದಿ: ಹಟ್ಟಿ ತಿಪ್ಪೇಶನ ಜಾತ್ರೆಗೆ ನೀತಿ ಸಂಹಿತೆ ಕಣ್ಗಾವಲು

    ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕಾರ್ಯಕ್ರಮಗಳು ಜರುಗಿದವು.

    ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ ಸಮಯದಲ್ಲಿ ಕಡೂರಿನಿಂದ ಬಂದಿದ್ದ ಚನ್ನವೀರಪ್ಪ ಮತ್ತು ತಂಡದವರು ಸ್ವಾಮಿಯ ಮುಂದೆ ವೀರಭದ್ರ ಸ್ವಾಮಿಯ ಒಡಪುಗಳನ್ನು ಹೇಳುವುದರ ಮೂಲಕ ಪಲ್ಲಕ್ಕಿಯ ಮೆರವಣಿಗೆಗೆ ಮೆರುಗು ನೀಡಿದರು.

    ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ನೆರೆದಿದ್ದ ಭಕ್ತಾಧಿಗಳು ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ, ವೀರಭದ್ರ ಸ್ವಾಮಿಜೀ ಕೀ ಜೈ ಎಂಬ ಘೋಷಣೆ ಮುಗಿಲು ಮುಟ್ಟಿದವು.

    ಇದನ್ನೂ ಓದಿ: ಚಿತ್ರದುರ್ಗ ಬಿಜೆಪಿ ಟಿಕೇಟ್ ನಾರಾಯಣಸ್ವಾಮಿಗೆ | ಶಿವಮೊಗ್ಗ ಮೋದಿ ಸಮಾವೇಶದಲ್ಲಿ ಸಿಕ್ತಾ ಸೂಚನೆ

    ಶ್ರೀ ಬಸವೇಶ್ವರ ಸ್ವಾಮಿ ಪ್ರತಿಷ್ಠಾಪನೆ ಮಾಡಿದ್ದ ಪಲ್ಲಕ್ಕಿಯನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಪಲ್ಲಕ್ಕಿಗೆ ಹೆಗಲು ಕೊಟ್ಟ ಭಕ್ತರು ಶ್ರದ್ಧಾ ಭಕ್ತಿಯಿಂದ ಹೊತ್ತು ಸಾಗಿದರು.

    ನಂತರ ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾದ ಕೆಂಡದ ಕುಂಡದಲ್ಲಿ ಸ್ವಾಮಿಯ ಪಲ್ಲಕ್ಕಿಯನ್ನು ಹೊತ್ತ ಭಕ್ತಾಧಿಗಳು ಅದರ ಮೇಲೆ ಆಗಮಿಸುವುದರ ಮೂಲಕ ಕೆಂಡಾರ್ಚನೆ ಕಾರ್ಯಕ್ರಮವನ್ನು ನೇರವೇರಿಸಲಾಯಿತು.

    ಇದನ್ನೂ ಓದಿ: ಸಿರಿಧಾನ್ಯ ಬಳಕೆಯಿಂದ ಸಕ್ಕರೆ ಕಾಯಿಲೆ ನಿಯಂತ್ರಣ ಸಾಧ್ಯ

    ಮಾ.19 ರಂದು ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ 5 ಗಂಟೆಗೆ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಮಾ.20 ರಂದು ಸಂಜೆ 5 ಕ್ಕೆ ಕಂಕಣ ವಿಸರ್ಜನೆ ಹಾಗೂ  ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top