CHITRADURGA NEWS | 20 MARCH 2024
ಚಿತ್ರದುರ್ಗ: ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಇಂದು ನಗರದ ಜೆಎಂಎಫ್ಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಮಾತನಾಡಿದ್ದಾರೆ ಎಂದು ಬಿಜೆಪಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ
ಹಿರಿಯೂರಿನ ಹರಿಶ್ಚಂದ್ರ ಘಾಟ್ ಬಳಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಕಳೆದ ಹತ್ತು ವರ್ಷಗಳಿಂದ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿ, ಚುನಾವಣೆ ಹತ್ತಿರ ಬಂದಾಗ ದರ ಇಳಿಕೆ ಮಾಡಿದ್ದಾರೆ ಎಂಬಿತ್ಯಾದಿ ಮಾತುಗಳನ್ನು ಬಳಕೆ ಮಾಡಿದ್ದರು.
ಜಿ.ಎಸ್.ಮಂಜುನಾಥ್ ಭಾಷಣ ಸಾಮಾಜಿಕ ಜಾಲಾ ತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಬೇಲಿಯ ಬೆಂಕಿಗೆ ತಾಯಿ ಮಕ್ಕಳ ಬಲಿ
ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಕಲ್ಲೇಶಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ. ಶಾಂತಿ ಕದಡುವ ಕೆಲಸ ಮಾಡಿದ್ದಾರೆ ಜಿ.ಎಸ್.ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದರು. ಇದರೊಟ್ಟಿಗೆ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿ ಮನವಿ, ದೂರುಗಳನ್ನು ಪೊಲೀಸ್ ಇಲಾಖೆ ಹಾಗೂ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ನಗರದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಜಿ.ಎಸ್.ಮಂಜುನಾಥ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಂಜುನಾಥ್ ಅವರಿಗೆ ಶ್ಯೂರಿಟಿ ಹಾಕಿದ್ದದ್ದರು.
ಇದನ್ನೂ ಓದಿ: ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ
ಜಾಮೀನು ಲಭಿಸಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಜಿ.ಎಸ್.ಮಂಜುನಾಥ್, ಗ್ಯಾಸ್ ಸಿಲಿಂಡರ್ ದರವನ್ನು ಚುನಾವಣೆ ಹೊತ್ತಿನಲ್ಲಿ ಇಳಿಕೆ ಮಾಡಿದ್ದನ್ನು ಪ್ರಶ್ನೆ ಮಾಡಬೇಕು ಎಂದು ಜನರಿಗೆ ಹೇಳಿದ್ದೆ. ಬದಲಾಗಿ ಯಾರನ್ನೂ ವೈಯಕ್ತಿಕವಾಗಿ ನಿಂಧನೆ ಮಾಡಿಲ್ಲ. ವಿಡಿಯೋ ಇದೆ, ಸೈಬರ್ ತಜ್ಞರಿದ್ದಾರೆ ತನಿಖೆಯಾಗಲಿ ಎಂದರು.
ಇದನ್ನೂ ಓದಿ: ಚಿತ್ರದುರ್ಗದ ಮತದಾರರೆ ಇಲ್ಲಿದೆ ನೋಡಿ ನಿಮ್ಮ ಮತದಾನದ ದಿನ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
