ಮುಖ್ಯ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ರಿಸಲ್ಟ್ ನೋಡುವುದೇಗೆ ? ಇಲ್ಲಿದೆ ಸಂಪೂರ್ಣ ವಿವರ
CHITRADURGA NEWS | 10 APRIL 2024
ಚಿತ್ರದುರ್ಗ: ಈ ಬಾರಿ ಹೊಸ ಮಾದರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಏಪ್ರಿಲ್ 10 (ಬುಧವಾರ) ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ. ಬಳಿಕ 11 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಸಿದ್ಧತೆ ನಡೆದಿದೆ.
ಕ್ಲಿಕ್ ಮಾಡಿ ಓದಿ: ಮನೆಯಿಂದಲೇ ಮತದಾನಕ್ಕೆ ಡೇಟ್ ಫಿಕ್ಸ್ | ಕೇವಲ ಮೂರು ದಿನ ಅವಕಾಶ
ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 129 ಪದವಿ ಪೂರ್ವ ಕಾಲೇಜುಗಳಿವೆ. ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 14242 ಹೊಸ, 978 ಪುನರಾವರ್ತಿತ ಹಾಗೂ 402 ಖಾಸಗಿ ಸೇರಿದಂತೆ ಒಟ್ಟು 15622 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಕ್ಲಿಕ್ ಮಾಡಿ ಓದಿ: ಮೇ 14 ರಿಂದ ಉಚ್ಚಂಗಿ ಯಲ್ಲಮ್ಮ ಜಾತ್ರಾ ಮಹೋತ್ಸವ | ದೇವಿಗೆ ಹೊಸ ಬೆಳ್ಳಿ ಮುಖಪದ್ಮ
ಚಿತ್ರದುರ್ಗ ತಾಲ್ಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳಿದ್ದು, 6129 ವಿದ್ಯಾರ್ಥಿಗಳು. ಚಳ್ಳಕೆರೆ ತಾಲ್ಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳಲ್ಲಿ 2917 ವಿದ್ಯಾರ್ಥಿಗಳು, ಹಿರಿಯೂರು ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ 1893 ವಿದ್ಯಾರ್ಥಿಗಳು, ಹೊಸದುರ್ಗ ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ 2172 ವಿದ್ಯಾರ್ಥಿಗಳು. ಮೊಳಕಾಲ್ಮೂರು ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ 1027 ವಿದ್ಯಾರ್ಥಿಗಳು ಹಾಗೂ ಹೊಳಲ್ಕೆರೆ ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ 1484 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕ್ಲಿಕ್ ಮಾಡಿ ಓದಿ: ಯುಗಾದಿಯಲ್ಲಿ 4 ರಾಶಿಗೆ ರಾಜಯೋಗ | ಹಬ್ಬದ ಸಂಭ್ರಮದಲ್ಲಿ ಜೊತೆಯಾಗಲಿದೆ ಅದೃಷ್ಟ
2023ರಲ್ಲಿ ಜಿಲ್ಲೆಯ ಶೇ 69.5ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 4,130 ವಿದ್ಯಾರ್ಥಿಗಳಲ್ಲಿ 2,269, ವಾಣಿಜ್ಯ ವಿಭಾಗದ 3,492 ವಿದ್ಯಾರ್ಥಿಗಳಲ್ಲಿ 2,603 ಹಾಗೂ ವಿಜ್ಞಾನ ವಿಭಾಗದ 4,780 ವಿದ್ಯಾರ್ಥಿಗಳಲ್ಲಿ 3,748 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು. ಹೊಸ ಪದ್ಧತಿ ಪರೀಕ್ಷೆಯಿಂದಾದರೂ ಜಿಲ್ಲೆಗೆ ಅಂಟಿರುವ ಕಳಪೆ ಸಾಧನೆ ಹಣೆಪಟ್ಟಿ ಕಳಚಲಿದೆಯೇ ಎಂಬುದನ್ನು ನೋಡಬೇಕಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ಸರಳ ವಿಧಾನ
– ಮೊದಲಿಗೆ ವೆಬ್‌ಸೈಟ್ ಲಿಂಕ್ karresults.nic.in ಗೆ ಭೇಟಿ ನೀಡಿ
– ಓಪನ್ ಆದ ಪುಟದಲ್ಲಿ ‘2nd PUC Exam 1 Results’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
– ಮತ್ತೊಂದು ಹೊಸ ಪುಟ ತೆರೆಯುತ್ತದೆ. ಇಲ್ಲಿ ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್ ಜತೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
– ರಿಜಿಸ್ಟರ್ ನಂಬರ್ ಟೈಪಿಸಿ. ನಂತರ ‘Submit’ಎಂಬಲ್ಲಿ ಕ್ಲಿಕ್ ಮಾಡಿ.
– ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
– ರಿಸಲ್ಟ್ ಶೀಟ್ ಅನ್ನು ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.