By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    5 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    5 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    6 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    16 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    17 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    9 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    16 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    17 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

chitradurganews.com
Last updated: 23 April 2024 11:24
chitradurganews.com
2 years ago
Share
chitradurga lok saba election history
SHARE

CHITRADURGA NEWS | 17 APRIL 2024

ಚಿತ್ರದುರ್ಗ: ಮಧ್ಯ ಕರ್ನಾಟಕ, ಕೋಟೆನಾಡು ಚಿತ್ರದುರ್ಗ ಲೋಕಸಭೆ ಚುನಾವಣೆ ಬ್ರಿಟೀಷರ ಕಾಲದಿಂದಲೇ ಜಿಲ್ಲಾ ಕೇಂದ್ರ. ಪಕ್ಕದ ದಾವಣಗೆರೆ ಹಿಂದೆ ಚಿತ್ರದುರ್ಗ ಜಿಲ್ಲೆಯೊಳಗೆ ಇತ್ತು.

ಇಂತಹ ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ 1952 ರಿಂದ 2024 ವರೆಗೆ ನಡೆದ ಲೋಕಸಭಾ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಪ್ರತಿ ಚುನಾವಣೆಯೂ ಜಿದ್ದಾಜಿದ್ದಿನಿಂದ ಕೂಡಿರುವುದು ಸ್ಪಷ್ಟವಾಗುತ್ತದೆ.

chitradurga lok saba election history

ಇದನ್ನೂ ಓದಿ: ಬಂದೇ ಬಿಡ್ತು ಬಯಲು ಸೀಮೆಲಿ ಬೆಳೆಯುವ ಭತ್ತದ ತಳಿ | ಸಿರಿಗೆರೆಯಲ್ಲಿ ಯಶಸ್ವಿ ಪ್ರಯೋಗ

ಇಲ್ಲಿ ನಡೆದಿರುವ ಒಟ್ಟು 17 ಲೋಕಸಭಾ ಚುನಾವಣೆಗಳಲ್ಲಿ 13 ಸಂಸದರು ಆಯ್ಕೆಯಾಗಿದ್ದಾರೆ. ಇಬ್ಬರು ಸಂಸದರು ಮಾತ್ರ ಎರಡು ಅವಧಿಗೆ ಆಯ್ಕೆಯಾಗಿದ್ದನ್ನು ಹೊರತುಪಡಿಸಿದರೆ ಉಳಿದೆಲ್ಲಾ ಹೊಸಬರೇ ಆಗಿದ್ದಾರೆ.
ಸದ್ಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳು ಹಾಗೂ ಪಕ್ಕದ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ಸೇರಿದಂತೆ ಒಟ್ಟು 08 ವಿಧಾನಸಭಾ ಕ್ಷೇತ್ರಗಳನ್ನು ಈ ಲೋಕಸಭಾ ಕ್ಷೇತ್ರ ಒಳಗೊಂಡಿದೆ.

ಇದನ್ನೂ ಓದಿ: ಚಿತ್ರದುರ್ಗದ ಸಂಸದ, ನಾಡಿನ ಮುಖ್ಯಮಂತ್ರಿಯೇ ಆದರು

ಹೇಗಿತ್ತು ದುರ್ಗದ ಜಿದ್ದಾಜಿದ್ದಿ:

  • ಭಾರತ ಸ್ವಾತಂತ್ರ್ಯಾ ನಂತರ ನಡೆದ ಮೊದಲ ಚುನಾವಣೆ 1952 ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್.ನಿಜಲಿಂಗಪ್ಪ ಅವರು ಕಿಸಾನ್ ಮಜ್ದೂರ್ ಪ್ರಜಾ ಪಾರ್ಟಿ (ಕೆಎಂಪಿಪಿ) ಅಭ್ಯರ್ಥಿ ಜಿ.ಮರುಳಪ್ಪ ಅವರನ್ನು 79152 ಮತಗಳ ಅಂತರದಿಂದ ಮಣಿಸಿದ್ದರು. ಇನ್ನೂ ಪಕ್ಷೇತರ ಅಭ್ಯರ್ಥಿಯಾಗಿದ್ದ ಹೆಚ್.ಎಸ್. ವೆಂಕಟಾಚಲಯ್ಯ ಅವರು 44211 ಮತಗಳನ್ನು ಗಳಿಸಿದ್ದರು.
  • 1957 ರಲ್ಲಿ ನಡೆದ ಎರಡನೆ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಪ್ರಜಾ ಸೋಶಿಯಲಿಸ್ಟ್ ಪಕ್ಷ (ಪಿಎಸ್‍ಪಿ) ದಿಂದ ಸ್ಪರ್ಧಿಸಿದ್ದ ಜೆ.ಎಂ. ಮಹಮ್ಮದ್ ಇಮಾಮ್ ಸಾಬ್ ಅವರು ಕಾಂಗ್ರೆಸ್ ಪಕ್ಷದ ಎಸ್.ರಂಗರಾವ್ ಅವರಿಗಿಂತ 11,159 ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದರು.
  • 1962 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ವೀರಬಸಪ್ಪ ಪ್ರಜಾ ಸೋಶಿಯಲಿಸ್ಟ್ ಪಕ್ಷದ ಅಭ್ಯರ್ಥಿ ಜಿ.ಬಸಪ್ಪ ಅವರನ್ನು 44849 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಎಸ್. ವೀರಬಸಪ್ಪ ಅವರು 172673 ಮತಗಳನ್ನು ಗಳಿಸಿದರೆ, ಜಿ.ಬಸಪ್ಪ ಅವರು 127824 ಮತಗಳನ್ನು ಪಡೆದರು. ಉಳಿದಂತೆ ಪಕ್ಷೇತರ ಅಭ್ಯರ್ಥಿ ಸಿ.ರಂಗಯ್ಯ ಕೇವಲ 16515 ಮತಗಳನ್ನು ಗಳಿಸಿದರು.
  • 1967 ರ ಚುನಾವಣೆಯಲ್ಲಿ ಸ್ವತಂತ್ರ ಪಾರ್ಟಿ ಅಭ್ಯರ್ಥಿಯಾಗಿ ಪುನಃ ಸ್ಪರ್ಧಿಸಿದ ಜೆ.ಎಂ. ಮಹ್ಮದ್ ಇಮಾಮ್ ಅವರು ಕಾಂಗ್ರೆಸ್‍ನ ಎಸ್.ವೀರಬಸಪ್ಪ ಅವರಿಗಿಂತ 31932 ಹೆಚ್ಚು ಮತಗಳನ್ನು ಗಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಸಿ. ರಂಗಯ್ಯ ಹಾಗೂ ಪಿ.ಹೆಚ್. ಜಯದೇವಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಇದನ್ನೂ ಓದಿ: ಹಂಪಿ ಉತ್ಸವದ ಮಾದರಿಯಲ್ಲಿ ಮದಕರಿ ನಾಯಕ ಉತ್ಸವ | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  • 1971 ರ ಚುನಾವಣೆಯಲ್ಲಿ ಎನ್.ಪಿ.ಜೆ. ಪಕ್ಷದಿಂದ ಸ್ಪರ್ಧಿಸಿದ ಕೊಂಡಜ್ಜಿ ಬಸಪ್ಪ ಅವರು ಸ್ವತಂತ್ರ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆ.ಎಂ. ಮಹ್ಮದ್ ಇಮಾಮ್ ಅವರನ್ನು 169702 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯಶಾಲಿಯಾದರು. ಈ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ ರಂಗಯ್ಯ ಅವರು ಮೂರನೆ ಸ್ಥಾನ ಪಡೆದರು.
  • 1977 ರ ಲೋಕಸಭಾ ಚುನಾವಣೆಯಲ್ಲಿ ಕೆ.ಮಲ್ಲಣ್ಣ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಆಯ್ಕೆಯಾದರು. ಈ ಚುನಾವಣೆಯಲ್ಲಿ ಅವರು ಭಾರತೀಯ ಲೋಕದಳ ಪಕ್ಷದ ಅಭ್ಯರ್ಥಿ ಹೆಚ್.ಸಿ. ಬೋರಯ್ಯ ಅವರಿಗಿಂತ 86654 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾದರು, ಪಕ್ಷೇತರ ಅಭ್ಯರ್ಥಿ ಚಂದ್ರಶೇಖರಯ್ಯ ಮೂರನೆ ಸ್ಥಾನಕ್ಕೆ ತೃಪ್ತಿಪಟ್ಟರು.
  • 1980 ರ ಚುನಾವಣೆಯಲ್ಲಿ ಪುನಃ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕೆ. ಮಲ್ಲಣ್ಣ ಅವರು ಜನತಾ ಪಕ್ಷದ ಅಭ್ಯರ್ಥಿ ಬಿ.ಎಲ್.ಗೌಡ ಅವರನ್ನು 109361 ಮತಗಳಿಂದ ಸೋಲಿಸಿ ಎರಡನೆ ಬಾರಿ ಆಯ್ಕೆಯಾದರು, ಈ ಚುನಾವಣೆಯಲ್ಲಿ ಕಾಂಗ್ರೆಸ್(ಯು) ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್.ಸಿ. ಬೋರಯ್ಯ ಮೂರನೆ ಸ್ಥಾನ ಹಾಗೂ ಜನತಾ (ಎಸ್)ನ ಸಿ.ಆರ್. ಬಸಪ್ಪ ನಾಲ್ಕನೆ ಸ್ಥಾನ ಗಳಿಸಿದರು.
  • 1984 ರಲ್ಲಿ ನಡೆದ ಚುನಾವಣೆಯಲ್ಲಿ ಕೆ.ಹೆಚ್.ರಂಗನಾಥ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಜನತಾ ಪಕ್ಷದ ಅಭ್ಯರ್ಥಿ ಬಿ.ಎಲ್.ಗೌಡ ಅವರನ್ನು 56811 ಮತಗಳಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದರು.
  • 1989 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಮೂಡಲಗಿರಿಯಪ್ಪ ಅವರು ತಮ್ಮ ಪ್ರತಿಸ್ಪರ್ಧಿಯಾದ ಜನತಾದಳ ಪಕ್ಷದ ಅಭ್ಯರ್ಥಿ ಸಣ್ಣ ಚಿಕ್ಕಪ್ಪ ಅವರನ್ನು 142193 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯದ ನಗೆ ಬೀರಿದರು. ಈ ಚುನಾವಣೆಯಲ್ಲಿ ಒಟ್ಟು 6 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
  • 1991 ರ ಚುನಾವಣೆಯಲ್ಲಿ ಮತ್ತೆ ಸಿ.ಪಿ.ಮೂಡಲಗಿರಿಯಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಲ್.ಜಿ. ಹಾವನೂರು ಅವರನ್ನು 82512 ಮತಗಳ ಅಂತರದಿಂದ ಸೋಲಿಸಿ ಎರಡನೆ ಬಾರಿಗೆ ಆಯ್ಕೆಯಾದರು. ಈ ಚುನಾವಣೆಯಲ್ಲಿ ಒಟ್ಟು 07 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
  • 1996 ರ ಚುನಾವಣೆಯಲ್ಲಿ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ. ಕೋದಂಡರಾಮಯ್ಯ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ.ಮೂಡಲಗಿರಿಯಪ್ಪ ಅವರನ್ನು 19382 ಮತಗಳ ಅಂತರದಿಂದ ವಿಜಯಿಯಾದರು. ಈ ಚುನಾವಣೆಯಲ್ಲಿ ಬರೋಬ್ಬರಿ 17 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದರು.

ಇದನ್ನೂ ಓದಿ: ರೈತರಿಗೆ ಶುಭ ಸುದ್ದಿ | ವಾಡಿಕೆಗಿಂತ ಅಧಿಕ ಸುರಿಯಲಿದೆ ಮುಂಗಾರು | ಭಾರತೀಯ ಹವಾಮಾನ ಇಲಾಖೆ ಮಾಹಿತಿ

  • 1998 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಮೂಡಲಗಿರಿಯಪ್ಪ ಅವರು ಲೋಕಶಕ್ತಿ ಪಕ್ಷದ ಅಭ್ಯರ್ಥಿ ಪಿ.ಕೋದಂಡರಾಮಯ್ಯ ಅವರನ್ನು 58321 ಮತಗಳಿಂದ ಪರಾಭವಗೊಳಿಸಿ ಮೂರನೆ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು.
  • 1999 ರ ಚುನಾವಣೆಯಲ್ಲಿ ನಡೆದ ತುರುಸಿನ ಸ್ಪರ್ಧೆಯಲ್ಲಿ ಕನ್ನಡ ಚಲನ ಚಿತ್ರರಂಗದ ನಟ ಶಶಿಕುಮಾರ್ ಅವರು ಜನತಾದಳ (ಯು) ಪಕ್ಷದಿಂದ ಸ್ಪರ್ಧಿಸಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ. ಮೂಡಲಗಿರಿಯಪ್ಪ ಅವರನ್ನು ಕೇವಲ 11178 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು.
  • 2004 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರು ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ಪಿ. ಕೋದಂಡರಾಮಯ್ಯ ಅವರಿಗಿಂತ 37460 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ಒಟ್ಟು 06 ಅಭ್ಯರ್ಥಿಗಳು ಕಣದಲ್ಲಿದ್ದರು.
  • 2009 ರಲ್ಲಿ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಅಭ್ಯಥಿಯಾಗಿ ಸ್ಪರ್ಧಿಸಿದ ಜನಾರ್ಧನಸ್ವಾಮಿ ಅವರು, ಕಾಂಗ್ರೆಸ್‍ನ ಬಿ.ತಿಪ್ಪೇಸ್ವಾಮಿ ಅವರಿಗಿಂತ 135656 ಮತಗಳ ಅಂತರದಿಂದ ಜಯಶಾಲಿಯಾದರು. ಈ ಚುನಾವಣೆಯಲ್ಲಿ ಒಟ್ಟು 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.
  • 2014 ರಲ್ಲಿ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಿ.ಎನ್. ಚಂದ್ರಪ್ಪ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜನಾರ್ಧನಸ್ವಾಮಿ ಅವರನ್ನು 101291 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ 14 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ನೋಟಾ ಗೆ ಒಟ್ಟು 8895 ಮತಗಳು ಚಲಾವಣೆಯಾಗಿದ್ದವು.
  • 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಎ.ನಾರಾಯಣಸ್ವಾಮಿ 626195 ಮತಗಳನ್ನು ಪಡೆಯುವ ಮೂಲಕ ಪ್ರತಿಸ್ಪರ್ಧಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಬಿ.ಎನ್.ಚಂದ್ರಪ್ಪ ಅವರನ್ನು 80178 ಮತಗಳಿಂದ ಮಣಿಸಿದ್ದರು. ಈ ಚುನಾವಣೆಯಲ್ಲಿ 19 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurgachitradurga lok saba election historyComprehensive InformationElection BackgroundKotenaduLok Sabha Electionsಕೋಟೆನಾಡುಚಿತ್ರದುರ್ಗಚುನಾವಣಾ ಹಿನ್ನೆಲೆಲೋಕಸಭೆ ಚುನಾವಣೆಸಮಗ್ರ ಮಾಹಿತಿ
Share This Article
Facebook Email Print
Previous Article ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಗೋವಿಂದ ಕಾರಜೋಳ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ | ಗೂಳಿಹಟ್ಟಿ ಶೇಖರ್
Next Article ಗಡಿ ದಾಟಿದ್ರೂ ಮೂರು ದಿನ ‘ಎಣ್ಣೆ’ ಸಿಗಲ್ಲ | ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up