
CHITRADURGA NEWS | 20 APRIL 2024
ಚಿತ್ರದುರ್ಗ: ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯ ನಿಮಿತ್ಯ ಮತದಾನ ದಿನದಂದು ಗೈರು ಹಾಜರಿ ಹಾಗೂ ಅಗತ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಪೋಸ್ಟಲ್ ವೋಟಿಂಗ್ ಸೆಂಟರ್‌ನಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಿದ್ದು, ಮೊದಲ ದಿನವಾದ ಶುಕ್ರವಾರ ಜಿಲ್ಲೆಯ 99 ಅಗತ್ಯ ಸೇವಾ ಮತದಾರರು ಮತ ಚಲಾಯಿಸಿದ್ದಾರೆ.
ಇದನ್ನೂ ಓದಿ: ಕುಡಿಯುವ ನೀರಿನ ಕಾಮಗಾರಿಗಳಿಗೆ ಚುಕುರು
ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ವಿವಿಧ ಕ್ಷೇತ್ರಗಳ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತದಾನ ಮಾಡಲು ವಿಶೇಷ ಕಲ್ಪಿಸಿದ್ದು, ಮೊದಲ ದಿನ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೆಎಸ್‍ಆರ್‍ಟಿಸಿ, ಪೊಲೀಸ್ ಇಲಾಖೆ, ಆಕಾಶವಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪತ್ರಕರ್ತರು ಸೇರಿದಂತೆ ಅಗತ್ಯ ಸೇವೆಗಳ ಕ್ಷೇತ್ರದ 99 ಮತದಾರರು ಮತ ಚಲಾಯಿಸಿದರು.
ಇದನ್ನೂ ಓದಿ: ಅನ್ಯ ಕೋಮಿನ ಯುವತಿಗೆ ಡ್ರಾಪ್ ನೀಡಿದಕ್ಕೆ ಹಲ್ಲೆ ಆರೋಪ | ದೂರು-ಪ್ರತಿ ದೂರು ದಾಖಲು | ತಡರಾತ್ರಿ ಹಿಂದೂ ಸಂಘಟನೆಗಳ ಪ್ರತಿಭಟನೆ
ಚಿತ್ರದುರ್ಗ ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತದಾನ ಕೇಂದ್ರಕ್ಕೆ (ಪೋಸ್ಟಲ್ ವೋಟಿಂಗ್ ಸೆಂಟರ್) ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಕರ್ತವ್ಯ ನಿರತ ಗೈರು ಹಾಜರಿ ಮತದಾರರು ಆಗಮಿಸಿ ತಮ್ಮ ಮತ ಚಲಾಯಿಸಬಹುದು. ಅಗತ್ಯ ಸೇವೆಗಳ ನೌಕರರು ಮತ ಚಲಾಯಿಸಲು ಏಪ್ರಿಲ್ 21 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
