
CHITRADURGA NEWS | 09 MAY 2024
ಚಿತ್ರದುರ್ಗ: ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ ನಗರದಲ್ಲಿ ಬೈಕ್ ರ್ಯಾಲಿ ನಡೆಯಿತು.
ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಹೊರಟ ಬೈಕ್ ರ್ಯಾಲಿಯಲಿ ನೂರಾರು ಬೈಕುಗಳಲ್ಲಿ ಯುವಕರು, ಸಮಾಜದವರು ಭಾಗವಹಿಸಿದ್ದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯ SSLC ಟಾಪರ್ಸ್ ಇವರೇ ನೋಡಿ
ನಗರದ ಆನೆಬಾಗಿಲು, ದೊಡ್ಡಪೇಟೆ, ರಂಗಯ್ಯನಬಾಗಿಲು, ಮದಕರಿ ಸರ್ಕಲ್, ಗಾಯತ್ರಿ ಸರ್ಕಲ್, ಜೆ.ಸಿ.ಆರ್. ಆರ್.ಟಿ.ಓ. ಕಚೇರಿ ರಸ್ತೆ, ಕೆಳಗೋಟೆ, ಡಿ.ಸಿ.ಸರ್ಕಲ್, ಕನಕವೃತ್ತದ ಮೂಲಕ ನೀಲಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಬೈಕ್ ರ್ಯಾಲಿ ಮುಕ್ತಾಯಗೊಂಡಿತು.
ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ಜಿತೇಂದ್ರ, ಕೆ.ಎಂ.ತಿಪ್ಪೇಸ್ವಾಮಿ, ಮುಖಂಡರಾದ ಪ್ರಕಾಶ್, ರುದ್ರೇಶ್, ಸಿದ್ದವ್ವನಹಳ್ಳಿ ಪರಮೇಶ್, ಪಿಳ್ಳೆಕೆರನಹಳ್ಳಿ ಬಸವರಾಜ್, ವೀರೇಂದ್ರ, ನಗರಸಭೆ ಸದಸ್ಯರಾದ ಕೆ.ಬಿ.ಸುರೇಶ್, ಜಯಣ್ಣ, ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ: ಮಹಾದೇವಪುರ ಬಳಿ ಭರ್ಜರಿ ಮಳೆ | ನೀರು ಹರಿಯುವ ವೀಡಿಯೋ ವೈರಲ್
ರ್ಯಾಲಿಯಲ್ಲಿ ಬಸವಣ್ಣನವರ ಭಾವಚಿತ್ರವುಳ್ಳ ಕೇಸರಿ ಭಾವುಟಗಳು ಮೆರವಣಿಗೆಯಲ್ಲಿ ರಾರಾಜಿಸಿದವು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
