
CHITRADURGA NEWS | 16 MAY 2024
ಚಿತ್ರದುರ್ಗ: ಹಳೆ ಬೆಂಗಳೂರು ರಸ್ತೆಯ ಕುಂಚಿಗನಾಳು ಗ್ರಾಮದಲ್ಲಿ ನೆಲೆ ನಿಂತಿರುವ ಕಣಿವೆಮಾರಮ್ಮ ದೇವಿ, ಮಾತಂಗೆಮ್ಮ ದೇವಿ ದೇಗುಲಗಳ ನವೀಕರಣ, ನೂತನ ಗೋಪುರ ನಿರ್ಮಾಣ ಹಾಗೂ ಕಳಸಾರೋಹಣ ಧಾರ್ಮಿಕ ಕಾರ್ಯಕ್ರಮ ನೂರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ವಿಜೃಂಭಣೆಯಿಂದ ಜರುಗಿತು.
ಇದನ್ನೂ ಓದಿ: ಡಾ.ಬಿ.ಎಲ್.ವೇಣುಗೆ ಅನಾರೋಗ್ಯ | ಫೋರ್ಟೀಸ್ ಆಸ್ಪತ್ರೆಗೆ ದಾಖಲು, ಚೇತರಿಕೆ
ಬ್ರಾಹ್ಮೀ ಮುಹೂರ್ತದಲ್ಲಿ ಗಂಗಾಪೂಜೆ ಬಳಿಕ ಶ್ರೀ ಕ್ಷೇತ್ರ ಕೊಟ್ಟೂರಿನ ಭೂತ ಬುಜಂಗಮಠದ ಶ್ರೀ ರಾಜ ಯೋಗೇಂದ್ರ ಶಿವಾಚಾರ್ಯ ಸ್ವಾಮೀಜಿ ಶಕ್ತಿದೇವತೆಗಳ ದೇಗುಲದ ನೂತನ ಗೋಪುರಕ್ಕೆ ಕಳಸಾರೋಹಣ ನೆರವೇರಿಸಿದರು.
ದೇವಿ ದೇಗುಲ ಆಧುನಿಕವಾಗಿ ನಿರ್ಮಾಣವಾಗಿದ್ದು, ಸಾವಿರಾರು ಭಕ್ತರು ಭೇಟಿ ನೀಡಿ ಕಣ್ತುಂಬಿಕೊಂಡರು. ಗರ್ಭಗುಡಿಯಲ್ಲಿನ ಪುಷ್ಪಾಲಂಕೃತ ದೇವಿಯ ಮೂರ್ತಿ ಕಂಗೊಳಿಸಿತು.
ಇದನ್ನೂ ಓದಿ: ತಪ್ಪಿದ ಭಾರೀ ಅನಾಹುತ | 49 ಪ್ರಯಾಣಿಕರ ಜೀವ ಉಳಿಸಿದ ಐರಾವತ ಬಸ್ ಚಾಲಕ
ಚಂಡಿಕಾ ಹೋಮ, ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತರು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು. ಸೋಮವಾರ ರಾತ್ರಿ ಗಣ, ವಾಸ್ತು, ರಕ್ಷಜ್ಞ ಹೋಮ ಸೇರಿ ಇತರೆ ಪೂಜಾ ಕೈಂಕರ್ಯ ದೊಡ್ಡಸಿದ್ಧವ್ವನ ಹಳ್ಳಿಯ ಪುರೋಹಿತ ತಿಪ್ಪೇಸ್ವಾಮಿ ನೇತೃತ್ವದಲ್ಲಿ ನೆರವೇರಿದವು.
ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಿಯ ಸದ್ಭಕ್ತರು, ಕುಂಚಿಗನಾಳ್ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಫಲ್ಯಗೊಳಿಸಿದರು ಎಂದು ದೇಗುಲ ಅಭಿವೃದ್ಧಿ ಸಮಿತಿ ತಿಳಿಸಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ವಧು-ವರರ ಸಮಾವೇಶ | ಸರ್ವಧರ್ಮಿಯ ವಧು, ವರರು ಭಾಗವಹಿಸಲು ಅವಕಾಶ
ಚಿತ್ರದುರ್ಗ ತಾಲೂಕಿನ ಕುಂಚಿಗನಾಳು ಗ್ರಾಮದ ಕಣಿವೆಮಾರಮ್ಮ, ಮಾತಂಗೆಮ್ಮ ದೇಗುಲ ಲೋಕಾರ್ಪಣೆ, ಕಳಸಾರೋಹಣದ ಅಂಗವಾಗಿ ದೇಗುಲ ಆವರಣವನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
