
CHITRADURGA NEWS | 21 MAY 2024
ಚಿತ್ರದುರ್ಗ: ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: ಮಳೆ ಬಂದಾಗ ಈ ಆಸ್ಪತ್ರೆಯಲ್ಲಿ ಉಂಟು..ಕ್ಯಾಂಡಲ್ ಲೈಟ್ ಟ್ರೀಟ್‌ಮೆಂಟ್…!
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4 ಮಿ.ಮೀ, ಈಶ್ವರಗೆರೆಯಲ್ಲಿ 51 ಮಿ.ಮೀ, ಬಬ್ಬೂರಿನಲ್ಲಿ 59.2ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 45.8 ಮಿ.ಮೀ, ಚಿತ್ರದುರ್ಗ-2ರಲ್ಲಿ 41.3 ಮಿ.ಮೀ ಭರಮಸಾಗರದಲ್ಲಿ 38.4ಮಿ.ಮೀ, ಹಿರೇಗುಂಟನೂರಿನಲ್ಲಿ 13.4ಮಿ.ಮೀ, ತುರುವನೂರಿನಲ್ಲಿ 28.6ಮಿ.ಮೀ, ಸಿರಿಗೆರೆ 28.8ಮಿ.ಮೀ ಹಾಗೂ ಐನಳ್ಳಿಯಲ್ಲಿ 36.2 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: ವಾಹನ ಸವಾರರೇ ಎಚ್ಚರ…ಕೊರಕಲು ಬಿದ್ದಿವೆ ರಸ್ತೆಗಳು | ಕ್ರಮಕ್ಕೆ ಸ್ಥಳೀಯರ ಒತ್ತಾಯ
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 72.6 ಮಿ.ಮೀ, ಬಾಗೂರು 55.5 ಮಿ.ಮೀ, ಮಾಡದಕೆರೆ 62 ಮಿ.ಮೀ, ಮತ್ತೋಡಿನಲ್ಲಿ 13.2 ಮಿ.ಮೀ ಹಾಗೂ ಶ್ರೀರಾಂಪುರದಲ್ಲಿ 45.2 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 30.6 ಮಿ.ಮೀ, ರಾಮಗಿರಿ 31.5ಮಿ.ಮೀ, ಚಿಕ್ಕಜಾಜೂರು 30.5 ಮಿ.ಮೀ, ಬಿ.ದುರ್ಗ 29.2 ಮಿ.ಮೀ, ಹೆಚ್.ಡಿ.ಪುರ 38.6 ಮಿ.ಮೀ ಮತ್ತು ತಾಳ್ಯದಲ್ಲಿ 6.2ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 44 ಮಿ.ಮೀ, ಪರಶುರಾಂಪುರ 46.2ಮಿ.ಮೀ, ನಾಯಕನಹಟ್ಟಿ 50.4ಮಿ.ಮೀ, ತಳಕು 31.2ಮಿ.ಮೀ ಹಾಗೂ ಡಿ.ಮರಿಕುಂಟೆಯಲ್ಲಿ 35.4ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: ಕೋಟೆನಾಡಲ್ಲಿ ತಡರಾತ್ರಿ ಅಬ್ಬರಿಸಿದ ಮಳೆ | ಕೊಚ್ಚಿ ಹೋದ ರಸ್ತೆ, ಕುಸಿದು ಬಿದ್ದ ಮನೆ
ಜಿಲ್ಲೆಯಾದ್ಯಂತ 34 ಮನೆ ಭಾಗಶಃ ಹಾನಿ, 11.48 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ:
ಸೋಮವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 34 ಮನೆಗಳು ಭಾಗಶಃ ಹಾನಿಯಾಗಿದ್ದು, 1 ದೊಡ್ಡ ಜಾನುವಾರು, 2 ಸಣ್ಣ ಜಾನುವಾರು ಹಾಗೂ 1 ಜೀವಹಾನಿಯಾಗಿದೆ. ಜಿಲ್ಲೆಯಾದ್ಯಂತ ಒಟ್ಟು 11.48 ಹೆಕ್ಟೇರ್ ತೋಟಗಾರಿಕೆ ಬೆಳೆನಾಶ ಮತ್ತು ಮೂರು ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ನೀರಿನ ಹರಿವಿನ ಪ್ರಮಾಣ ಹೆಚ್ಚಳ | ಇಂದು ಜಲಾಶಯಕ್ಕೆ ಬಂದ ನೀರೆಷ್ಟು ಗೊತ್ತಾ
ಚಿತ್ರದುರ್ಗ ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಭಾಗಶಃ 7 ಮನೆಹಾನಿ, 1 ದೊಡ್ಡ ಜಾನುವಾರು ಹಾಗೂ 1 ಜೀವಹಾನಿ ಹಾಗೂ 3 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 4 ಮನೆಗಳು ಹಾನಿಯಾಗಿವೆ. ಹೊಸದುರ್ಗ ತಾಲ್ಲೂಕಿನಲ್ಲಿ 10 ಮನೆಗಳು ಭಾಗಶಃ ಹಾನಿ ಹಾಗೂ 2 ಸಣ್ಣ ಜಾನುವಾರು, 1 ಹೆಕ್ಟೇರ್ ತೋಟಗಾರಿಕೆ ಬೆಳೆ ಮತ್ತು 3 ಮನೆಗಳಿಗೆ ನೀರು ನುಗ್ಗಿರುವ ಕುರಿತು ಪ್ರಕರಣ ವರದಿಯಾಗಿದೆ.
ಇದನ್ನೂ ಓದಿ: ಜಿಟಿಟಿಸಿ ತರಬೇತಿಗೆ ಅರ್ಜಿ ಆಹ್ವಾನ
ಹಿರಿಯೂರು ತಾಲ್ಲೂಕಿನಲ್ಲಿ ಭಾಗಶಃ 5 ಮನೆಹಾನಿ ಮತ್ತು 7.48 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭಾಗಶಃ 3 ಮನೆಗಳು ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

