Connect with us

    ಪಿಯುಸಿ ಸೈನ್ಸ್ ಕನ್ನಡದಲ್ಲೂ ಓದಬಹುದು | ಪ್ರತ್ಯೇಕ ವಿಭಾಗ ತೆರೆಯಲು ಡಿಸಿ ಸೂಚನೆ

    ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ ಕುರಿತ ಸಭೆ

    ಮುಖ್ಯ ಸುದ್ದಿ

    ಪಿಯುಸಿ ಸೈನ್ಸ್ ಕನ್ನಡದಲ್ಲೂ ಓದಬಹುದು | ಪ್ರತ್ಯೇಕ ವಿಭಾಗ ತೆರೆಯಲು ಡಿಸಿ ಸೂಚನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 22 MAY 2024

    ಚಿತ್ರದುರ್ಗ: ಪಿಯುಸಿ ಸೈನ್ಸ್ ವಿಷಯವನ್ನು ಕನ್ನಡ ಮಾಧ್ಯಮದಲ್ಲಿ ಓದಲು ಸರ್ಕಾರ ಅವಕಾಶ ಕಲ್ಪಿಸಿದೆ. ಇಂಗ್ಲೀಷ್ ಕಷ್ಟ ಎನ್ನುವ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲೇ ವಿಜ್ಞಾನವನ್ನು ಓದಲು ಪಠ್ಯ ಪುಸ್ತಕಗಳು ಬಂದಿವೆ. ಈ ಕುರಿತ ವಿವರ ಇಲ್ಲಿದೆ.

    ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುವ ಜಿಲ್ಲೆಯ ಕೆಲವು ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪಿಯು ವಿಜ್ಞಾನ ಕನ್ನಡ ಬೋಧನೆಗೆ ಪ್ರತ್ಯೇಕವಾಗಿ ವಿಭಾಗ ಪ್ರಾರಂಭ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಮೂರೇ ದಿನದಲ್ಲಿ 1 ಟಿಎಂಸಿಗಿಂತ ಹೆಚ್ಚು ನೀರು ಸಂಗ್ರಹ

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ ಕುರಿತ ಸಭೆ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆ ಕುರಿತ ಸಭೆಯಲ್ಲಿ ಮಾತನಾಡಿದರು.

    ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 1 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ತಕ್ಷಣ ಇಂಗ್ಲಿಷ್ ಮಾಧ್ಯಮ ಅಳವಡಿಸಿಕೊಳ್ಳುವುದು ಕಷ್ಟಸಾಧ್ಯ. ಹಾಗಾಗಿ ಜಿಲ್ಲೆಯ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪಿಯು ವಿಜ್ಞಾನ ಕನ್ನಡ ಬೋಧನೆಗೆ ಪ್ರತ್ಯೇಕವಾಗಿ ವಿಭಾಗ ಪ್ರಾರಂಭ ಮಾಡಿದರೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

    ಇದನ್ನೂ ಓದಿ: ಮಾನವೀಯತೆ ಮರೆತು ಶುಲ್ಕ ವಸೂಲಿ ಮಾಡಿದರೆ ಕ್ರಮ ಅನಿವಾರ್ಯ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ

    ಪಿಯು ವಿಜ್ಞಾನ ಸಿಇಟಿ, ನೀಟ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರವೇ ಪಿಯು ವಿಜ್ಞಾನ ಪಠ್ಯಪುಸ್ತಕಗಳನ್ನು ಕನ್ನಡದಲ್ಲಿ ಮುದ್ರಿಸಿ ಎಲ್ಲಾ ಪಿಯು ಕಾಲೇಜುಗಳಿಗೆ ಪೂರೈಕೆ ಮಾಡಿದೆ.

    ಪಿಯು ವಿಜ್ಞಾನ ಕನ್ನಡ ಮಾಧ್ಯಮಕ್ಕೆ ಪ್ರವೇಶಾತಿ, ಪೋಷಕರ ಪ್ರತಿಕ್ರಿಯೆ, ಉಪನ್ಯಾಸಕರ ಅಭಿಪ್ರಾಯ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಭಾಷಾ ವಿಷಯ ಪರಿಣಾಮಕಾರಿಯಾಗಿ ಕಲಿಸಿ:

    ಭಾಷಾ ವಿಷಯಗಳನ್ನು ಬೋಧನೆ ಮಾಡುವ ಶಿಕ್ಷಕರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳ್ನು ಪರಿಣಾಮಕಾರಿಯಾಗಿ ಕಲಿಸಬೇಕು. ಭಾಷೆಯ ಮೇಲೆ ಹಿಡಿತ ಸಾಧಿಸಿದರೆ ವಿದ್ಯಾರ್ಥಿಗಳು ಸುಲಭವಾಗಿ ಐಚ್ಚಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಹಾಗಾಗಿ ಭಾಷಾ ವಿಷಯಗಳನ್ನು ಕಡ್ಡಾಯವಾಗಿ, ಪರಿಣಾಮಕಾರಿಯಾಗಿ ಕಲಿಸಬೇಕು ಎಂದು ತಾಕೀತು ಮಾಡಿದರು.

    ಇದನ್ನೂ ಓದಿ: ಸೂಗೂರಿನಲ್ಲಿ 108 ಮಿ.‌ಮೀ ಮಳೆ | 34 ಮನೆಗಳಿಗೆ ಹಾನಿ | 28 ಎಕರೆ ತೋಟಗಾರಿಕೆ ಬೆಳೆ ಹಾನಿ

    ಭಾಷಾ ವಿಷಯಗಳನ್ನು ಸರಳವಾಗಿ, ಪರಿಣಾಮಕಾರಿಯಾಗಿ ಕಲಿಸಬೇಕು. ಪಿಯು ಫಲಿತಾಂಶದಲ್ಲಿ ಅಗ್ರಸ್ಥಾನ ಪಡೆಯುವುದಕ್ಕಿಂತ ಮುಖ್ಯವಾಗಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಪಿಯು ಪಾಸಾದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ, ಕೆಎಎಸ್, ಐಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವುದು ಮುಖ್ಯವಾಗಬೇಕು ಎಂದರು.

    ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ ಕುರಿತಂತೆ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಸಾಧಕ-ಬಾಧಕಗಳ ಕುರಿತು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮಾಹಿತಿ ನೀಡಿದರು.

    ಇದನ್ನೂ ಓದಿ: ಕತ್ತಲಲ್ಲಿ ಮೊಳಕಾಲ್ಮುರು ಆಸ್ಪತ್ರೆ..ನಿಮ್ಮ ಸರ್ಕಾರದಲ್ಲಿ ದುಡ್ಡಿಲ್ಲವೋ..? | ಸರ್ಕಾರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಶ್ನೆ

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಅನ್ನದ ಭಾಷೆಯಾಗಿ ಕನ್ನಡ ವೇದಿಕೆಯ ಚಿಕ್ಕಪ್ಪನಹಳ್ಳಿ ಷಣ್ಮುಖ ಸೇರಿದಂತೆ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top