ಮುಖ್ಯ ಸುದ್ದಿ
ಚಿತ್ರದುರ್ಗದ ಜಿ.ಎಸ್.ಮಂಜುನಾಥ್ ಅವರನ್ನು ಎಂಎಲ್ಸಿ ಮಾಡಲು ಕಾಂಗ್ರೆಸ್ ಮುಖಂಡರ ಒತ್ತಾಯ
CHITRADURGA NEWS | 26 MAY 2024
ಚಿತ್ರದುರ್ಗ: ವಿಧಾನ ಪರಿಷತ್ತಿನಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡುವುದಾದರೆ ಚಿತ್ರದುರ್ಗದ ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ಅವರಿಗೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಎಸ್.ಜಯಣ್ಣ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮೂಡಿಗೆರೆ ಬಳಿ ಭೀಕರ ಅಪಘಾತದಲ್ಲಿ ಮಡಿದವರಿಗೆ ಪರಿಹಾರದ ಭರವಸೆ | ಸಚಿವ ಡಿ.ಸುಧಾಕರ್
ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಕಾಂಗ್ರೆಸ್‍ನಲ್ಲಿ ಹಲವು ವರ್ಷಗಳಿಂದ ಸಂಘಟನೆ ಮಾಡಿರುವ ಜಿ.ಎಸ್.ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯರಾದರೆ ರಾಜ್ಯಪೂರ್ತಿ ಪ್ರವಾಸ ಮಾಡಿ ಸಂಘಟನೆ ಮಾಡಲಿದ್ದಾರೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿ.ಎಸ್.ಮಂಜುನಾಥ್ ಸಾಮರ್ಥ್ಯ ಗುರುತಿಸಿ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅದೇ ರೀತಿ ಪರಿಷತ್ ಸದಸ್ಯರನ್ನಾಗಿ ಮಾಡಿದರೆ ಪಕ್ಷ ಹಾಗೂ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ, ಜಿ.ಎಸ್.ಮಂಜುನಾಥ್ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾಗಿ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ನಾಯಕ. ಎಲ್ಲಾ ಸಮಾಜದವರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಶಕ್ತಿ ಅವರಿಗಿದೆ ಎಂದು ಹೇಳಿದರು.
ಇದನ್ನೂ ಓದಿ: ಬೆಸ್ಕಾ ಕಚೇರಿ ಸ್ಥಳಾಂತರ | ಇನ್ನೂ ವಿದ್ಯುತ್ ಬಿಲ್ ಕಟ್ಟಲು ಇಲ್ಲಿಗೆ ಬನ್ನಿ
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ, ರವಿಕುಮಾರ್, ಅಶೋಕ ನಾಯ್ಡ, ಅಶ್ವಿನ್ ಕುಮಾರ್, ಸುನೀಲ್ ಇದ್ದರು.