
CHITRADURGA NEWS | 27 MAY 2024
ಚಿತ್ರದುರ್ಗ: KSRTC ಬಸ್ ಹರಿದು ಕುರಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸೇರಿದಂತೆ 21 ಕುರಿಗಳು ಮೃತಪಟ್ಟಿವೆ.
ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಈರಜ್ಜನಹಟ್ಟಿ ಗೇಟ್ ಬಳಿ ಈ ಅವಘಡ ನಡೆದಿದೆ.
ಇದನ್ನೂ ಓದಿ: ಮೊಳಕಾಲ್ಮೂರು ಘಟನೆಗೆ ಬೆಸ್ಕಾಂ ಸ್ಪಷ್ಟನೆ | ಹಾಗಾದರೆ ಅಂದು ರಾತ್ರಿ ಎಷ್ಟೊತ್ತು ವಿದ್ಯುತ್ ಇರಲಿಲ್ಲ
ಚಳ್ಳಕೆರೆ ತಾಲೂಕು ನೆಲಗೇತನಹಟ್ಟಿ ನಿವಾಸಿ ರಾಜಪ್ಪ(30) ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಕುರಿಗಾಯಿ ತಿಪ್ಪಣ್ಣ ಗಂಭೀರವಾಗಿ ಗಾಯಗೊಂಡು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಳೆ ಇಲ್ಲದೆ ಮೇವು, ನೀರಿಗೆ ಸಮಸ್ಯೆ ಆಗಿದ್ದ ಕಾರಣಕ್ಕೆ ಚನ್ನಗಿರಿ ಭಾಗಕ್ಕೆ ನೆಲಗೇತನಹಟ್ಟಿಯಿಂದ ಕುರಿ ಮೇಯಿಸಲು ಹೋಗಿದ್ದರು. ಕಳೆದ ಹತ್ತು ದಿನಗಳಿಂದ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ವಾಪಾಸು ಊರಿಗೆ ಮರಳುತ್ತಿದ್ದಾಗ ಈ ಅವಘಡ ನಡೆದಿದೆ.
ಇದನ್ನೂ ಓದಿ: ಕಾಂಗ್ರೆಸ್ OPS ಪರವಾಗಿದೆ | MLC ಪುಟ್ಟಣ್ಣ
ಸುಮಾರು 2 ಲಕ್ಷಕ್ಕೂ ಹೆಚ್ಚು ಮೌಲ್ಯದ 21 ಕುರಿಗಳು ಈರಜ್ಜನಹಟ್ಟಿ ರಸ್ತೆ ಬದಿಯಲ್ಲಿವೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, KSRTC ಬಸ್ ಪೊಲೀಸರ ವಶದಲ್ಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
