Connect with us

    ಚಿತ್ರದುರ್ಗ ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ | ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

    ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

    ಮುಖ್ಯ ಸುದ್ದಿ

    ಚಿತ್ರದುರ್ಗ ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ | ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 29 may 2024

    ಚಿತ್ರದುರ್ಗ: ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಅತ್ಯುತ್ತಮವಾಗಿ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಕೃಷಿ ಇಲಾಖೆಗೆ ರಾಜ್ಯ ಸರ್ಕಾರದಿಂದ ಮೂರು ವಿಭಾಗಗಳಲ್ಲಿ ಪ್ರಶಸ್ತಿ ಲಭಿಸಿದೆ.

    ಕೃಷಿ ಇಲಾಖೆಯ ಮಣ್ಣು ಪರೀಕ್ಷಾ ಪ್ರಯೋಗಾಲಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಯ ಮಣ್ಣು ಪರೀಕ್ಷಾ ಪ್ರಯೋಗಾಲಯಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಲಭಿಸಿದೆ.

    ಇದನ್ನೂ ಓದಿ: ಮೇ.30 ರಂದು ವಿದ್ಯುತ್ ವ್ಯತ್ಯಯ

    ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕಾರಣಕ್ಕೆ ನರೇಗಾದಲ್ಲೂ ಪ್ರಥಮ ಸ್ಥಾನ ಬಂದಿದೆ.

    ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

    ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

    2023-24ನೇ ಸಾಲಿನಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿದೆ.

    ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆ ಸಿ.ಟಿ.ಸ್ಕ್ಯಾನ್‌ಗೆ ಪರ್ಯಾಯ ವ್ಯವಸ್ಥೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ

    ಬೆಂಗಳೂರಿನಲ್ಲಿ ಜರುಗಿದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರದಲ್ಲಿ ಪ್ರಶಂಸನಾ ಪತ್ರ ನೀಡಿ ಪುರಸ್ಕರಿಸಲಾಗಿದೆ.

    • ಮಣ್ಣು ಪರೀಕ್ಷಾ ಪ್ರಯೋಗಾಲದಲ್ಲಿ ಅತ್ಯುತ್ತಮ ಸಾಧನೆಗೆ ಪ್ರಶಸ್ತಿ
    • ನರೇಗಾದಲ್ಲಿ ಅತ್ಯುತ್ತಮ ಸಾಧನೆಗೆ ಪುರಸ್ಕಾರ
    • ಕೃಷಿ ಇಲಾಖೆ ಕಾರ್ಯಕ್ರಮಗಳ ಸಮಗ್ರ ಅನುಷ್ಠಾನಕ್ಕೆ ಪ್ರಶಸ್ತಿ

    ಜಿಲ್ಲೆಗೆ ಕೃಷಿ ಇಲಾಖಾ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಇಲಾಖೆಯ ವಿವಿಧ ಯೋಜನೆಗಳನ್ನು ಕಾಲಾನುಕಾಲಕ್ಕೆ ರೈತರಿಗೆ ತಲುಪಿಸಿ ತಾಂತ್ರಿಕ ಮಾಹಿತಿ ಒದಗಿಸಿ, ಬರಗಾಲದ ಪರಿಸ್ಥಿತಿಯಲ್ಲಿ ಇಳುವರಿ ಪಡೆದು, ಜೀವನ ನಿರ್ವಹಣೆಗೆ ಸುಲಲಿತಗೊಳಿಸಲು ರೈತರಿಗೆ ಭರವಸೆ ನೀಡಿದ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ಎರಡನೇ ಅತ್ಯುತ್ತಮ ಜಿಲ್ಲೆಯೆಂದು ಪ್ರಶಸ್ತಿ ಪಡೆದಿದೆ.

    ಇದನ್ನೂ ಓದಿ: ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ | ಜಿಪಂ ಸಿಇಒ ಎಸ್‌.ಜೆ.ಸೋಮಶೇಖರ್‌ ಸೂಚನೆ

    “ನಾವು ಸತ್ತರೆ ಮಣ್ಣಿಗೆ, ಮಣ್ಣು ಸತ್ತರೆ ಎಲ್ಲಿಗೆ”, “ಮಣ್ಣಿನ ಆರೋಗ್ಯದಿಂದ ಬೆಳೆಗಳ ಆರೋಗ್ಯ – ನಮ್ಮ ಆರೋಗ್ಯ” ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಮಣ್ಣು ಅಭಿಯಾನ ಕಾರ್ಯಕ್ರಮದಡಿ ಮಣ್ಣು ಪರೀಕ್ಷೆ ಮಹತ್ವ, ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರಗಳ ಸಮರ್ಥ ಬಳಕೆ ಕುರಿತು ಸಕಾಲದಲ್ಲಿ ಮಾಹಿತಿ ನೀಡಿದ ಮಣ್ಣು ಆರೋಗ್ಯ ಕೇಂದ್ರ ಚಿತ್ರದುರ್ಗವು ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ.

    ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

    ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ

    ಮಣ್ಣು ಹಾಗೂ ನೀರು ಸಂರಕ್ಷಣೆ ಕುರಿತು ಜಲಾನಯನ ಇಲಾಖೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ, ಕೃಷಿ ಹೊಂಡ, ಅರಣ್ಯ ಹಾಗೂ ತೋಟಗಾರಿಕೆ ಚಟುವಟುಕೆಗಳ ಮೂಲಕ ಮಣ್ಣು ಮತ್ತು ನೀರು ಸಂರಕ್ಷಣೆ ಮಾಡುವುದರ ಜೊತೆಗೆ ಕೃಷಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಮೂಲಕ ಉತ್ತಮ ಪ್ರಗತಿ ಸಾಧಿಸಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಮತ್ತೊಂದು ಗರಿ ಮುಡಿಗೇರಿಸಿಕೊಂಡಿದೆ.

    ಇದನ್ನೂ ಓದಿ: ಮುರುಘಾಮಠದಿಂದ ಸಸಿ ನೆಡುವ ಸಪ್ತಾಹ | ನಾಳೆಯಿಂದ ಚಾಲನೆ

    ಪ್ರಶಸ್ತಿಗೆ ಭಾಜನರಾದ ಹಿನ್ನಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರಿಗೆ ಅಭಿನಂದಿಸಿದರು.

    ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಉಪ ಕೃಷಿನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್ ಸೇರಿದಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು, ಮಣ್ಣು ಆರೋಗ್ಯ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top