ಕ್ರೈಂ ಸುದ್ದಿ
ಮುರುಘಾ ಶ್ರೀ ಪ್ರಕರಣದ ಸಾಕ್ಷಿಯಾಗಿದ್ದ ಬಾಲಕಿ ಚಿಕ್ಕಪ್ಪನ ವಿರುದ್ಧ ದೂರು ದಾಖಲು
CHITRADURGA NEWS | 29 MAY 2024
ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ದಾಖಲಾಗಿರುವ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ಥೆಯಾಗಿರುವ ಬಾಲಕಿಯ ಚಿಕ್ಕಪ್ಪನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ಬಾಲಕಿಯ ಚಿಕ್ಕಪನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಮುರುಘಾ ಶರಣರ ವಿರುದ್ಧ ಸಾಕ್ಷಿ ಹೇಳದಂತೆ, ದೂರು ಹಿಂಪಡೆಯುವಂತೆ ಬಾಲಕಿ ಮೇಲೆ ಚಿಕ್ಕಪ್ಪ ಒತ್ತಡ ಹೇರಿದ್ದರು ಎನ್ನುವ ಅಂಶ ದೂರಿನಲ್ಲಿ ಉಲ್ಲೇಖವಾಗಿದೆ.
ಇದನ್ನೂ ಓದಿ: ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಹೆಚ್ಚಳ
ಬಾಲಕಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಹಿನ್ನೆಲೆಯಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಗೆ ತೆರಳಿದ್ದರು. ಆದರೆ, ಮೇ.22 ರಂದು ಬಾಲಕಿ ಕಾಣೆಯಾಗಿದ್ದಾರೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಾಲಕಿ ಒಡನಾಡಿ ಸಂಸ್ಥೆಯ ಆಶ್ರಯದಲ್ಲಿರುವುದನ್ನು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿ ಎದುರು ಬಾಲಕಿಯನ್ನು ಹಾಜರುಪಡಿಸಿ, ಅಲ್ಲಿಂದ ಚಿತ್ರದುರ್ಗಕ್ಕೆ ಕಳಿಸಲಾಗಿತ್ತು.
ಇದನ್ನೂ ಓದಿ: ಚಿತ್ರದುರ್ಗ ಕೃಷಿ ಇಲಾಖೆಗೆ ಪ್ರಶಸ್ತಿಗಳ ಸುರಿಮಳೆ | ಮಣ್ಣು ಪರೀಕ್ಷೆ, ಸಮಗ್ರ ಕೃಷಿ, ನರೇಗಾದಲ್ಲಿ ರಾಜ್ಯಮಟ್ಟದ ಪುರಸ್ಕಾರ
ಚಿತ್ರದುರ್ಗದ ಮಕ್ಕಳ ಕಲ್ಯಾಣ ಸಮಿತಿ ಬಾಲಕಿಯ ಜೊತೆ ಆಪ್ತ ಸಮಾಲೋಚನೆ ನಡೆಸಿದ ಬಳಿಕ ಬಾಲಕಿಯ ಚಿಕ್ಕಪ್ಪನ ವಿರುದ್ಧ ದೂರು ದಾಖಲಿಸುವಂತೆ ಮಕ್ಕಳ ರಕ್ಷಣಾಧಿಕಾರಿಗೆ ಶಿಫಾರಸ್ಸು ಮಾಡಿದ್ದರು.
ಅದರಂತೆ ಮೇ.29 ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾಧಿಕಾರಿ ಕೆ.ಎಸ್.ಮಂಜುಳಾ ಬಾಲಕಿಯ ಪರವಾಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆ ಸಿ.ಟಿ.ಸ್ಕ್ಯಾನ್‌ಗೆ ಪರ್ಯಾಯ ವ್ಯವಸ್ಥೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ
ದೂರು ಆಧರಿಸಿ ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆ ಪೊಲೀಸರು ಬಾಲಕಿಯ ಚಿಕ್ಕಪ್ಪನನ್ನು ವಶಕ್ಕೆ ಪಡೆದಿದ್ದಾರೆ.