
CHITRADURGA NEWS | 31 MAY 2024
ಚಿತ್ರದುರ್ಗ: ಜೂನ್.3 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮತಯಾಚನೆ ಮಾಡಿದರು.
ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭ

ನಗರದ ದುರ್ಗದ ಸಿರಿ ಹೋಟೆಲ್ ನಲ್ಲಿ ತುರುವನೂರು ಹೋಬಳಿಯ ಪ್ರೌಢಶಾಲಾ ಶಿಕ್ಷಕರ ಸಭೆಯಲ್ಲಿ ಡಿ.ಟಿ.ಶ್ರೀನಿವಾಸ್ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರಿಗೆ ನೀಡುವ ಮೂಲಕ, ವಿಧಾನ ಪರಿಷತ್‌ನಲ್ಲಿ ನಮ್ಮ ಬಲ ಹೆಚ್ಚಿಸಿದರೆ ಶಿಕ್ಷಕರ ಪರವಾಗಿ ಕೆಲಸ ಮಾಡಲು ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಕ್ರಿಯಾಶೀಲ ವ್ಯಕ್ತಿಯಾಗಿದ್ದು ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ, ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅನುಭವವಿದ್ದು ಶಿಕ್ಷಕರ ಪರ ವಿಧಾನ ಪರಿಷತ್ ನಲ್ಲಿ ಮಾತನಾಡಿ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಕೆಲಸ ಮಾಡುತ್ತಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ದಿನಗಣನೆ | ಮಧ್ಯಾಹ್ನದೊಳಗೆ ಫಲಿತಾಂಶ ಘೋಷಣೆ ಸಾಧ್ಯತೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು ಶಿಕ್ಷಕರ ಪರವಾದ ತಿರ್ಮಾನಗಳನ್ನು ತೆಗೆದುಕೊಳ್ಳಲು ನಾವು ಬದ್ದವಾಗಿದ್ದೇವೆ. ವಿಧಾನ ಸಭೆ ಜೊತೆಗೆ ವಿಧಾನ ಪರಿಷತ್ ಸಹ ನಮ್ಮ ಬಹುಮತ ಬಂದರೆ, ಕಾಯ್ದೆ ಕಾನೂನು ಜಾರಿ ಮಾಡಲು ಅನುಕೂಲವಾಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉತ್ತಮ ಆಡಳಿತದ ಮೂಲಕ ಜನರಿಗೆ ಕೊಟ್ಟ ಮಾತಿನಂತೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದಾರೆ. ವಿಧಾನ ಪರಿಷತ್ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮದ್ಯಪ್ರಿಯರೇ ಗಮನಿಸಿ…ನಾಳೆಯಿಂದ ಮದ್ಯ ಮಾರಾಟ ಬಂದ್
ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಅಧ್ಯಕ್ಷ ರವಿಕುಮಾರ್, ಮಾಜಿ ಜಿ.ಪಂ.ಸದಸ್ಯರಾದ ಬಾಬುರೆಡ್ಡಿ, ಪ್ರಕಾಶ್ ಮೂರ್ತಿ ಮತ್ತು ಶಿಕ್ಷಕರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
