ಮುಖ್ಯ ಸುದ್ದಿ
ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು

Published on
CHITRADURGA NEWS | 04 JUNE 2024
ಚಿತ್ರದುರ್ಗ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ .
ಇದನ್ನೂ ಓದಿ: ಗೋವಿಂದ ಕಾರಜೋಳ ಕೊರಳಿಗೆ ವಿಜಯಮಾಲೆ | ಪೈಪೋಟಿಯಿಲ್ಲದೆ ಗೆದ್ದು ಬೀಗಿದ ಬಿಜೆಪಿ
ಇದರ ಫಲವಾಗಿ ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯನ್ನು ENCORE ತಂತ್ರಾಂಶದಲ್ಲಿ ಅಧೀಕೃತವಾಗಿ ಘೋಷಣೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ.
Continue Reading
Related Topics:announcement, Chitradurga, Chitradurga news, first, Kannada News, Lok Sabha Elections, result, ಕನ್ನಡ ಸುದ್ದಿ, ಘೋಷಣೆ, ಚಿತ್ರದುರ್ಗ, ಚಿತ್ರದುರ್ಗ ಸುದ್ದಿ, ಫಲಿತಾಂಶ, ಮೊದಲು, ಲೋಕಸಭಾ ಚುನಾವಣೆ

Click to comment