
CHITRADURGA NEWS | 10 JUNE 2024
ಚಿತ್ರದುರ್ಗ: ಸರ್ಕಾರಿ ಕಲಾ ಕಾಲೇಜ್( ಸ್ವಾಯತ್ತ ) ಚಿತ್ರದುರ್ಗ, ಹಿತಚಿಂತನ ಚಾರಿಟೇಬಲ್ ಟ್ರಸ್ಟ್ ಹಾಗೂ ಪೊಲೀಸ್ ಬೇಟೆ ಕನ್ನಡ ವಾರ ಪತ್ರಿಕೆ ಸಮುಕ್ತಶಯದಲ್ಲಿ ನಗರದ ಸರ್ಕಾರಿ ಕಲಾ ಕಾಲೇಜ್( ಸ್ವಾಯತ್ತ )ನಾ, ಡಾ.ಬಿ.ಆರ್ ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ನಾಳೆ ಬೆಳಿಗ್ಗೆ 10.30ಕ್ಕೆ ಅಕ್ಷರ ಬ್ರಹ್ಮ ರವಿ ಬೆಳಗೆರೆ ಎಂದೂ ಅಮರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಕೆರೆ ಏರಿ ಮೇಲೆ ಲಾರಿ ಪಲ್ಟಿ | ಮದ್ಯದ ಬಾಟಲ್ಗಳು ಚೆಲ್ಲಾಪಿಲ್ಲಿ
ಹೊಸದುರ್ಗ ಭಗೀರಥ ಪೀಠದ ಶ್ರೀ ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕರಾದ ಭಾವನ ಬೆಳಗೆರೆ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಕಲ ಕಾಲೇಜು ಪ್ರಾಚಾರ್ಯ ಪ್ರೊ.ಬಿ.ಟಿ ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತವಿಕವಾಗಿ ಮಾತನಾಡುವವರು.
ಇದನ್ನೂ ಓದಿ: ಜೆಇಇ ಫಲಿತಾಂಶ | ರಾಷ್ಟ್ರಮಟ್ಟದಲ್ಲಿ ಚಿತ್ರದುರ್ಗದ SRS ಪಿಯು ವಿದ್ಯಾರ್ಥಿಗಳ ಸಾಧನೆ
ಮುಖ್ಯ ಅತಿಥಿಗಳಾಗಿ ರಿಪಬ್ಲಿಕ್ ಕನ್ನಡ ಟಿವಿಯ ಅಸೋಸಿಯೇಟ್ ಎಡಿಟರ್ ಸ್ಮಿತಾ ರಂಗನಾಥ್, ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹಿರಿಯ ಪತ್ರಕರ್ತ ಬಿ. ಕಾಂತರಾಜ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, IQAC ಕೋ ಆರ್ಡಿನೇಟರ್ ಪ್ರಾಧ್ಯಾಪಕ ಜಿ.ಡಿ.ಸುರೇಶ್, ಕಾಲೇಜು ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ.ಆರ್. ಗಂಗಾಧರ್, ಜಂಟಿ ಕಾರ್ಯದರ್ಶಿ, ಡಾ.ಕೆ.ಲೀಲಾವತಿ, ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವಕೀಲರು ಓ.ಪ್ರಕಾಶ್ ಜೋಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
