Connect with us

    ರೇಣುಕಾಸ್ವಾಮಿ ನಿವಾಸಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ | ಮಹತ್ವದ ಘೋಷಣೆ ಸಾಧ್ಯತೆ

    film chamber

    ಮುಖ್ಯ ಸುದ್ದಿ

    ರೇಣುಕಾಸ್ವಾಮಿ ನಿವಾಸಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ | ಮಹತ್ವದ ಘೋಷಣೆ ಸಾಧ್ಯತೆ

    CHITRADURGA NEWS | 15 JUNE 2024
    ಚಿತ್ರದುರ್ಗ:‌ ನಗರದ ವಿಆರ್‌ಎಸ್‌ ಬಡಾವಣೆ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣ ದೇಶದಲ್ಲೇ ಸಂಚಲನ ಮೂಡಿಸಿದೆ. ನಟ ದರ್ಶನ್‌ ಮತ್ತು ಆತನ ನಟೋರಿಯಸ್‌ ಗ್ಯಾಂಗ್‌ ನಡೆಸಿದ ಹೀನಾಯ ಹತ್ಯೆ ಘಟನೆಯಿಂದ ಚಲನಚಿತ್ರ ವಾಣಿಜ್ಯ ಮಂಡಳಿ ತೀವ್ರ ಮುಜುಗರಕ್ಕೆ ಸಿಲುಕಿದೆ.

    ಘಟನೆ ಹೊರ ಬಂದ ಕ್ಷಣದಿಂದ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು. ಜತೆಗೆ ಆತನನ್ನು ರೌಡಿ ಶೀಟರ್‌ ಪಟ್ಟಿಗೆ ಸೇರಿಸಬೇಕು ಎಂಬ ಕೂಗು ಜೋರಾಗುತ್ತಿದೆ. ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ನಟ ದರ್ಶನ್‌ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಜೂನ್‌ 15 (ಶನಿವಾರ) ಹತ್ಯೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಆಗಮಿಸುತ್ತಿದೆ. ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಕ್ಕೆ ಸ್ವಾಂತನ ಹೇಳಲಿದೆ.

    renuka swamy house

    ಚಿತ್ರದುರ್ಗ ನಗರದ ವಿಆರ್‌ಎಸ್‌ ಬಡಾವಣೆಯ ರೇಣುಕಾಸ್ವಾಮಿ ನಿವಾಸ

    ಫಿಲ್ಮ್‌ ಚೇಂಬರ್ ಅಧ್ಯಕ್ಷ್ಯ ಎನ್‌.ಎಂ.ಸುರೇಶ್‌, ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ.

    ಕ್ಲಿಕ್ ಮಾಡಿ ಓದಿ: ಫಾರ್ಚೂನರ್ ಕಾರು ಲಾರಿ‌ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು | ಐದು ಜನರಿಗೆ ಗಂಭೀರ ಗಾಯ

    ಆರೋಪಿ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವುದು ಹಾಗೂ ಅಸಹಕಾರ ನೀಡುವುದರ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಆರೋಪ ಸಾಬೀತಾದರೆ ಅಸಹಕಾರ ನೀಡುವ ವಿಚಾರಾಗಿ ನಿರ್ಧಾರ ಮಾಡಲಾಗುತ್ತದೆ ಎಂದು ಫಿಲ್ಮ್‌ ಚೇಂಬರ್ ಅಧ್ಯಕ್ಷ್ಯ ಎನ್‌.ಎಂ.ಸುರೇಶ್‌ ಜೂ.13ರಂದು ಬೆಂಗಳೂರಿನಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

    renuka swamy father mother

    ಮಗನನ್ಶು ಕಳೆದುಕೊಂಡ ನೋವಿನಲ್ಲಿ ಕಾಶಿನಾಥ ಶಿವಣ್ಣಗೌಡರ್‌ ಹಾಗೂ ರತ್ನಪ್ರಭಾ ದಂಪತಿ

    ಈ ಪ್ರಕರಣವನ್ನು ನಾವು ಖಂಡಿಸುತ್ತೇವೆ. ಅವರನ್ನು ತಕ್ಷಣಕ್ಕೆ ಬ್ಯಾನ್‌ ಮಾಡಲು ಆಗುವುದಿಲ್ಲ. ಬ್ಯಾನ್‌ ಮಾಡಲು, ಕಲಾವಿದರ ಸಂಘ ಹಾಗೂ ಇತರ ಅಂಗ ಸಂಸ್ಥೆಗಳು ಭಾಗಿಯಾಗಬೇಕು ಎಂದು ಅವರು ಹೇಳಿದ್ದಾರೆ.

    ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ | ಮಗ ಪೊಲೀಸ್ ವಶಕ್ಕೆ | ತಂದೆ ಲೋ ಬಿಪಿಯಿಂದ ಸಾವು

    ಈಗಾಗಲೇ ಚಿತ್ರದುರ್ಗ ಸೇರಿದಂತೆ ರಾಜ್ಯಾದ್ಯಂತ ಜನಾಕ್ರೋಶ ವ್ಯಕ್ತವಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ಕುಟುಂಬಗಳ ಮನೆಗಳಲ್ಲಿ ಸಶ್ಮಾನ ಮೌನ ಆವರಿಸಿದೆ. ಶುಕ್ರವಾರ ರಾತ್ರಿ ಅನು ತಂದೆ ನಿಧನರಾಗಿರುವುದರಿಂದ ದರ್ಶನ್ ಮೇಲೆ ಜನರ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top