
CHITRADURGA NEWS | 19 JUNE 2024
ಚಿತ್ರದುರ್ಗ: 2023 ರ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ಅವರ ಬೆಂಬಲಿಗರಿಗೆ ಜೆಎಂಎಫ್ಸಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಸಂದರ್ಭದಲ್ಲಿ ವೀರೇಂದ್ರ ಹಾಗೂ ಬೆಂಬಲಿಗರು ಮಧ್ಯರಾತ್ರಿ ಪಟಾಕಿ ಸಿಡಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಆರೋಪದ ಮೇಲೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಕ್ಕೂ ಮೊದಲೇ ಒಂದು ಪ್ರಕರಣದಲ್ಲಿ ಶಾಸಕರಿಗೆ ಜಾಮೀನು ಸಿಕ್ಕಿತ್ತು. ಇನ್ನೊಂದು ಪ್ರಕರಣದಲ್ಲಿ ಮಂಗಳವಾರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕ್ಲಿಕ್ ಮಾಡಿ ಓದಿ: ದೊಡ್ಡ ಮಾತನಾಡುತ್ತಿದ್ದಾರೆ ನೂತನ ಸಂಸದರು | ಮಾಜಿ ಸಂಸದ ಬಿ.ಎನ್.ಚಂದ್ರಪ್ಪ
ಪ್ರಕರಣಗಳ ರದ್ದು ಕೋರಿ ವೀರೇಂದ್ರ ಹಾಗೂ ಬೆಂಬಲಿಗರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಿರ್ದೇಶನದಂತೆ ಸ್ಥಳೀಯ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದರು. ಇದೀಗ ಕೋರ್ಟ್ ಜಾಮೀನು ನೀಡಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

