CHITRADURGA NEWS | 20 JUNE 2024
ಚಿತ್ರದುರ್ಗ: ಬುಧವಾರ ಸಂಜೆ ಹೊಳಲ್ಕೆರೆ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ರಸ್ತೆ ಪಕ್ಕದ ಗುಂಡಿಗೆ ಒಂದು ಕಾರು ಪಲ್ಟಿಯಾಗಿ ಬಿದ್ದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ | ಶಾರ್ಟ್ ಸಕ್ರ್ಯೂಟ್‍ನಿಂದ ಅನಾಹುತ
ಬುಧವಾರ ಸಂಜೆ 6 ಗಂಟೆ ವೇಳೆಗೆ, ಹೊಳಲ್ಕೆರೆ ರಸ್ತೆಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಶಿವಮೊಗ್ಗ ಕಡೆಯಿಂದ ಬಂದ ಸ್ವಿಫ್ಟ್ ಕಾರಿಗೆ ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ರಸ್ತೆ ಪಕ್ಕದಲ್ಲಿದ್ದ ಚರಂಡಿಗೆ ಉರುಳಿದೆ. ಕಾರಿನಲ್ಲಿದ್ದವರು ಹಾವೇರಿ ಜಿಲ್ಲೆ ಶಿಗ್ಗಾವಿ ಮೂಲದವರು. ಮತ್ತೊಂದು ಕಾರಿನಲ್ಲಿ ಬೆಂಗಳೂರಿನ ದಾಸರಹಳ್ಳಿಯವರಿದ್ದರು ಎನ್ನಲಾಗಿದೆ.
ಅಪಘಾತದಿಂದಾಗಿ ಎರಡೂ ಕಾರುಗಳು ಸಂಪೂರ್ಣ ಜಖಂ ಆಗಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
