By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹಳ್ಳಿಹಳ್ಳಿಗೂ ಯೋಗ ಪಸರಿಸಿದ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ | ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹಳ್ಳಿಹಳ್ಳಿಗೂ ಯೋಗ ಪಸರಿಸಿದ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ | ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌

ಮುಖ್ಯ ಸುದ್ದಿ

ಹಳ್ಳಿಹಳ್ಳಿಗೂ ಯೋಗ ಪಸರಿಸಿದ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ | ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌

News Desk Chitradurga News
Last updated: 21 June 2024 12:25
News Desk Chitradurga News
1 year ago
Share
DIST YOGA
ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವಿಶೇಷ ಯೋಗ ನೃತ್ಯ ಪ್ರದರ್ಶಿಸಿದ ಅಮೃತ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 JUNE 2024
ಚಿತ್ರದುರ್ಗ: ‘ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ ಬದುಕಿನಲ್ಲಿ ಯುವ ಜನರಿಗೆ ಮಾನಸಿಕ ಶಕ್ತಿ ಅವಶ್ಯಕವಾಗಿದೆ. ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಲು ಮಾನಸಿಕವಾಗಿ ಸದೃಢರಾಗಿರಲು ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿಯಾಗಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಯುವಜನರು ಒತ್ತಡದಿಂದ ಹೃದಯಾಘಾತಕ್ಕೆ ಒಳಗಾಗುವುದು. ಜೀವನದ ಕಠಿಣ ಸಮಯ ಎದುರಿಸಲಾಗದೆ ಆತ್ಮಹತ್ಯೆ ಅಂತಹ ಕೃತ್ಯಗಳಿಗೆ ಮುಂದಾಗುವುದನ್ನು ದಿನ ನಿತ್ಯ ಕಾಣುತ್ತಿದ್ದೇವೆ. ಬಹಳಷ್ಟು ಯುವ ಜನರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯೋಗದಿಂದ ಈ ಇವೆಲ್ಲವೂಗಳಿಗೂ ಪರಿಹಾರ ದೊರಕಲಿದೆ’ ಎಂದರು.

ಕ್ಲಿಕ್ ಮಾಡಿ ಓದಿ: ಮನಸ್ಸಿನ ಹತೋಟಿಗೆ ಯೋಗ ಸಹಕಾರಿ |ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

‘ಜೀವನದಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಸದೃಢ ಮನೋಭಾವ ಹೊಂದಲು ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಯುವಜನತೆಯಲ್ಲಿ ಕ್ರೋಧ ಮತ್ಸರ, ದ್ವೇಷ, ಸಮಾಜ ಘಾತುಕ ಮನೋಭಾವ ಮೂಡದಂತೆ ಯೋಗಾಭ್ಯಾಸ ತಡೆಯುತ್ತದೆ. ಇದರಿಂದ ಯುವ ಜನತೆಗೆ ಲಾಭವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

DIST YOGA 2
ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮವನ್ನು ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಉದ್ಘಾಟಿಸಿದರು

‘ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತದ್ದು, ವಿಶ್ವ ಸಂಸ್ಥೆ 2014 ರಲ್ಲಿ ಸರ್ವಾನುಮತದಿಂದ ಜೂನ್21ನ್ನು ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದೆ. ಇಂದು ವಿಶ್ವದ 187 ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಗವನ್ನು ವಿಶ್ವದಾದ್ಯಂತ ಪಸರಿಸಲು ಪ್ರಯತ್ನ ಮಾಡುತ್ತಿದ್ದಾರೆ’ ಎಂದರು.

‘ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮಗಳು ಇಲ್ಲದ ಸಂದರ್ಭದಲ್ಲಿ ಮಲ್ಲಾಡಿಹಳ್ಳಿಯ ರಾಘವೇಂದ್ರ ಸ್ವಾಮಿಗಳು ಯೋಗವನ್ನು ಗ್ರಾಮ ಗ್ರಾಮಗಳಿಗೆ ಕೊಂಡೊಯ್ಯದರು. ರಾಜ್ಯದಲ್ಲಿ ಯೋಗವನ್ನು ಹೆಚ್ಚು ಪ್ರಚಾರ ಮಾಡಿದವರು ನಟ ಸಾರ್ವಭೌಮ ಡಾ.ರಾಜಕುಮಾರ್‌ ಅವರ ಕಾಮನಬಿಲ್ಲು ಎಂಬ ಚಲನಚಿತ್ರದಲ್ಲಿ ಸ್ವತಃ ಯೋಗ ಮಾಡುವುದರ ಮೂಲಕ ಎಲ್ಲರಿಗೂ ಪ್ರೇರಣೆಯಾದರು. ಇದೇ ಮಾದರಿಯಲ್ಲಿ ಇಂದು ಯೋಗಭ್ಯಾಸದಲ್ಲಿ ಪಾಲ್ಗೊಂಡ ಎಲ್ಲರೂ ಯೋಗ ರಾಯಭಾರಿಗಳಾಗಿ ಯೋಗವನ್ನು ಎಲ್ಲಡೆ ಪಸರಿಸಬೇಕು. ಮುಂದಿನ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇಳೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಜನರು ಸಾಮೂಹಿಕ ಯೋಗಾಭ್ಯಾಸದಲ್ಲಿ ತೊಡಗುವಂತಾಗಬೇಕು. ಆಯುಷ್ ಇಲಾಖೆ ಈ ಕಾರ್ಯ ಕೈಗೊಳ್ಳುವ ಮೂಲಕ ಇತರೆ ಜಿಲ್ಲೆಗಳಿಗೆ ಮಾದರಿಯಾಗಲಿ’ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್ ಮಾತನಾಡಿ, ‘ಯೋಗವನ್ನು ಯಾವುದೇ ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಯೋಗದ ಮಹತ್ವ ಅರಿತುಕೊಂಡಿವೆ. ಯುವ ಜನತೆ ಯೋಗದ ಬಗ್ಗೆ ಒಲವು ಬೆಳಸಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಕಾಲುಗಳಲ್ಲಿ ಅಡಗಿದೆ. ಯುವಕರು ದೇಹಕ್ಕೆ ಹಾನಿಕರವಾದ ದುಶ್ಚಟಗಳಿಂದ ದೂರ ಇರಬೇಕು’ ಎಂದರು.

ಕ್ಲಿಕ್ ಮಾಡಿ ಓದಿ: ಉದ್ಯೋಗಾಸಕ್ತರಿಗೆ ಸುವರ್ಣಾವಕಾಶ | ವರ್ಷಾ ಅಸೋಸಿಯೇಟ್ಸ್ ಉಚಿತ ತರಬೇತಿ

‘ನಾಡಿನೆಲ್ಲೆಡೆ ಯೋಗವನ್ನು ಪ್ರಚಾರ ಮಾಡುವಲ್ಲಿ ಮಲ್ಲಾಡಿಹಳ್ಳಿಯ ರಾಘವೇಂದ್ರ ಸ್ವಾಮಿಗಳ ಕೊಡುಗೆ ಮಹತ್ವದಾಗಿದೆ. ಶತಾಯುಷಿಗಳಾಗಿದ್ದ ಅವರು ತಮ್ಮ ಇಡೀ ಜೀವನವನ್ನು ಯೋಗಕ್ಕೆ ಮುಡಿಪಾಗಿಟ್ಟಿದ್ದರು. ಯೋಗಾಸಕ್ತರು ಮಲ್ಲಾಡಿಹಳ್ಳಿ ಆಶ್ರಮಕ್ಕೆ ಭೇಟಿ ನೀಡಿ ಅವರ ಯೋಗ ಸಾಧನೆಗಳನ್ನು ಅರಿಯಬೇಕು’ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಯೋಗ ದೇಶದ ಸಾಂಸ್ಕೃತಿಕತೆಯ ಪ್ರತೀಕವಾಗಿದೆ. ಯೋಗ ಅಂತರಾಷ್ಟ್ರೀಯ ಮನ್ನಣೆಗಳಿಸಿದೆ. ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಲು ಕರೆ ನೀಡಿದರು.

DIST YOGA 1
ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಾಮೂಹಿಕ ಯೋಗಾಭ್ಯಾಸ

ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಮಾತನಾಡಿ, ಪ್ರತಿ ಮನೆ ಮನೆಗಳಲ್ಲಿ ಯೋಗಭ್ಯಾಸ ಮಾಡಬೇಕು. ಯೋಗವು ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಾಯಕವಾಗಿದೆ ಎಂದರು.

ಅಮೃತ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ವಿಶೇಷ ಯೋಗ ನೃತ್ಯ ಪ್ರದರ್ಶಿಸಿದರು. ನಗರದ ನಿಸರ್ಗ ಯೋಗ ಕೇಂದ್ರದ 73 ವರ್ಷದ ಯೋಗಗುರು ಶಿವಲಿಂಗಪ್ಪ ವೇದಿಕೆ ಮೇಲೆ ಯೋಗಾಭ್ಯಾಸ ನೆಡಿಸಿ ಗಮನ ಸೆಳೆದರು. ಯೋಗ ಶಿಕ್ಷಕ ಭರಮಸಾಗರದ ತಿಪ್ಪೇಸ್ವಾಮಿ ಸಾಮೂಹಿಕ ಯೋಗಭ್ಯಾಸ ಆಸನಗಳನ್ನು ಬೋಧಿಸುವ ಮೂಲಕ ಯೋಗದ ಮಹತ್ವ ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಸಾಹಿತಿಗಳು ರಾಜಕಾರಣಿಗಳೇ ಎಂದಿದ್ದು ತಪ್ಪು | ಸಾಣೇಹಳ್ಳಿ ಶ್ರೀ

ಈ ಬಾರಿಯ ಯೋಗ ದಿನಾಚರಣೆಯ ಘೋಷವಾಕ್ಯ ಸ್ವಂತ ಹಾಗೂ ಸಮಾಜಕ್ಕಾಗಿ ಯೋಗ ಎನ್ನುವುದನ್ನು ಸಾರುವ ನಿಟ್ಟಿನಲ್ಲಿ 2000 ಕ್ಕೂ ಹೆಚ್ಚು ಯೋಗಾಸಕ್ತರು ಸುಮಾರು 45 ನಿಮಿಷಗಳ ಕಾಲ ಸಾಮೂಹಿಕ ಯೋಗಾಭ್ಯಾಸ ಮಾಡಿದರು. ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ವೈದ್ಯಾಧಿಕಾರಿ ಗಿರೀಶ್ ಸ್ವಾಗತಿಸಿದರು. ವೈದ್ಯಾಧಿಕಾರಿ ಪ್ರಶಾಂತ್ ವಂದಿಸಿದರು.

ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಜೆ.ಕುಮಾರಸ್ವಾಮಿ, ಲಕ್ಷ್ಮೀನಾರಾಯಣ, ನಗರ ಸಭೆ ಆಯುಕ್ತೆ ಎಂ.ರೇಣುಕಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ವಿವಿಧ ಇಲಾಕೆ ಅಧಿಕಾರಿಗಳು, ಜಿಲ್ಲೆಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ಥರು, ಸದಸ್ಯರು ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:MalladihalliRaghavendraSwamijivillageYogaಮಲ್ಲಾಡಿಹಳ್ಳಿಯೋಗರಾಘವೇಂದ್ರಸ್ವಾಮೀಜಿಹಳ್ಳಿ
Share This Article
Facebook Email Print
Previous Article sanehali yoga ಮನಸ್ಸಿನ ಹತೋಟಿಗೆ ಯೋಗ ಸಹಕಾರಿ | ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
Next Article dc ಕಲ್ಲು ಗಣಿ ಗುತ್ತಿಗೆ ಮಂಜೂರಾತಿಗೆ 160 ಅರ್ಜಿ ಬಾಕಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್‌
Leave a Comment

Leave a Reply Cancel reply

Your email address will not be published. Required fields are marked *

ಮಧುಮೇಹ ರೋಗಿಗಳಿಗೆ ಈ ಹಣ್ಣಿನ ಬೀಜ ಪ್ರಯೋಜನಕಾರಿಯಂತೆ
Life Style
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಡಾ.ಅನಂತರಾಮು, ಪಾಪಣ್ಣಗೆ ಬೀಳ್ಕೊಡುಗೆ
ಮುಖ್ಯ ಸುದ್ದಿ
ಕ್ರೀಡಾ ಪ್ರೋತ್ಸಾಹಧನ | ಸರ್ಕಾರಿ ಶಾಲೆಯಿಂದ ಪ್ರಸ್ತಾವನೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up