
CHITRADURGA NEWS | 26 JUNE 2024
ಚಿತ್ರದುರ್ಗ: ಮೊಳಕಾಲ್ಮುರು ಸಮೀಪದ ಮರ್ಲಹಳ್ಳಿಯ ದುರುಗಮ್ಮನ ಗುಡಿ ಅರಣ್ಯ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಮೃತನನ್ನು ಚಳ್ಳಕೆರೆ ತಾಲ್ಲೂಕಿನ ಗೌರಸಮುದ್ರ ಗ್ರಾಮದ ಹೇಮಂತ್ (22) ಎಂದು ಗುರುತಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಹಜ್ ಯಾತ್ರೆಗೆ ತೆರಳಿದ್ದ ಮಹಿಳೆ ಸಾವು | ಮೆಕ್ಕಾದಲ್ಲಿ ಅಂತ್ಯಸಂಸ್ಕಾರ
ಚಳ್ಳಕೆರೆ ಮೂಲವಾಗಿದ್ದರು ಸಹ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಓಬಳಶೆಟ್ಟಿ ಗ್ರಾಮದಲ್ಲಿ ವಾಸವಿದ್ದರು. ಮೃತ ಯುವಕ ಕೆಲ ದಿನಗಳಿಂದ ವಿಪರೀತ ಮದ್ಯಪಾನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
