By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    5 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    7 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    7 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    14 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    6 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    18 hours ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    19 hours ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    2 days ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    3 days ago
Reading: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು | ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕೇಸರಿ ಪಡೆ ಆಕ್ರೋಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು | ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕೇಸರಿ ಪಡೆ ಆಕ್ರೋಶ

News Desk Chitradurga News
Last updated: 28 June 2024 13:43
News Desk Chitradurga News
2 years ago
Share
bjp protest
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ನಡೆದ ಪ್ರತಿಭಟನೆ.
SHARE

CHITRADURGA NEWS | 28 JUNE 2024
ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹ 187 ಕೋಟಿ ಹಗರಣದ ಅಕ್ರಮ ಖಂಡಿಸಿ ಶುಕ್ರವಾರ
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

‘ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ ಹಾಕುತ್ತಿದೆ. ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರ ನಿರಂತರ ಭ್ರಷ್ಟಾಚಾರದಲ್ಲಿ ತೊಡಗಿದೆ. ಅಭಿವೃದ್ಧಿ ನಿಂತು ಹೋಗಿದೆ. ಬಿಜೆಪಿ‌ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿ ಅಧಿಕಾರಕ್ಕೆ ಬಂದವರು, ಅಭಿವೃದ್ಧಿಯನ್ನೇ ಮರೆತಿದ್ದಾರೆ’ ಎಂದು ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಈ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ವಾಲ್ಮೀಕಿ ಅಭಿವೃದ್ಧಿ‌ ನಿಗಮದಿಂದ ಆಂಧ್ರದ ಲೋಕಸಭಾ ಚುನಾವಣೆಗೆ ಹಣ ಬಳಕೆ ಮಾಡಲಾಗಿದೆ. ಬಾರ್‌ನಲ್ಲಿ ಕುಳಿತು ಕುಡಿದ ಬಿಲ್‌ ಅನ್ನು ಸಹ ವಾಲ್ಮೀಕಿ‌ ನಿಗಮದ ಹಣದಲ್ಲಿ‌ ಕೊಟ್ಟಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

bjp protest 1
ಬಿಜೆಪಿ ಪ್ರತಿಭಟನೆ

‘ಯಡಿಯೂರಪ್ಪ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪಿಸಿ‌ ನೂರಾರು ಕೋಟಿ ಅನುದಾನ ನೀಡಿದರು. ಸಮಾಜದ ಬಡ ಮಕ್ಕಳು, ಹಿಂದುಳಿದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದರು.‌ ಆದರೆ, ಈ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ಪಡೆಯಲಾಗಿದೆ. ಇದು ನಾಗೇಂದ್ರ ಒಬ್ಬರ ತಪ್ಪಲ್ಲ. ಮುಖ್ಯಮಂತ್ರಿ ಆರ್ಥಿಕ‌ ಸಚಿವರ ಗಮನದಲ್ಲೇ ಪ್ರಕರಣ ನಡೆದಿದೆ’ ಎಂದು ದೂರಿದರು.

ಕ್ಲಿಕ್‌ ಮಾಡಿ ಓದಿ: ಕೆಎಸ್‌ಸಿಎ ಕ್ರಿಕೆಟ್‌ ಆಯ್ಕೆ ಟ್ರಯಲ್ಸ್‌ 30ಕ್ಕೆ | ಬೆಳಗಟ್ಟದ ಸಿಸಿಎ ಟರ್ಫ್‌ ಮೈದಾನ

‘ಬೇರೆ ರಾಜ್ಯಗಳ ಲೋಕಸಭೆ ಚುನಾವಣೆಗೆ ಕರ್ನಾಟಕವನ್ನು ಎಟಿಎಂ ಆಗಿ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿಗೆ ಹಣ ಕೊಡಬೇಕು. ನಿಗಮ ಹಣವನ್ನ ಬಳಕೆ‌ ಮಾಡಿಕೊಂಡಿರುವುದು ಸಿಎಂ ಗಮನಕ್ಕೆ ಬರದೆ ಇರಲು ಸಾಧ್ಯ ಇಲ್ಲ. ಸಚಿವ ಶರಣ ಪ್ರಕಾಶ್ ಪಾಟೀಲ್‌, ನಿಗಮದ ಅಧ್ಯಕ್ಷ ಬಸವರಾಜ ದದ್ದಲ್‌ ಹೆಸರು ಇದೆ. ಸ್ವತಃ ಮುಖ್ಯಮಂತ್ರಿ‌ ಕೂಡಾ ಇದರಲ್ಲಿ ಭಾಗಿಯಾಗಿದ್ದಾರೆ. ಎಲ್ಲರೂ ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.

bjp protest 2
ಬಿಜೆಪಿ ಪ್ರತಿಭಟನೆ

‘ರಾಜ್ಯದಲ್ಕಿ ಭೀಕರ ಬರಗಾಲ ಬಂದಾಗ ರೈತರಿಗೆ ಈ ಸರ್ಕಾರ ಸ್ಪಂದಿಸಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಇದಕ್ಕೆ ತಕ್ಕ ಪ್ರಾಯಶ್ಚಿತ್ತ ಆಗಬೇಕು. ಲೆಕ್ಕಾಧಿಕಾರಿ ಚಂದ್ರಶೇಖರ್‌ ಬರೆದಿದ್ದ ಡೆತ್‌ನೋಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಹಣ ಕೊಡಲು ಕಾಂಗ್ರೆಸ್‌ ಹೈಕಮಾಂಡ್ ಒತ್ತಡವಿತ್ತು. ಹಾಗಾಗಿ ಬೇರೆ ನಿಗಮಗಳಲ್ಲೂ ಅವ್ಯವಹಾರ ಆಗಿದೆ. ಎಸ್‌ಇಪಿ, ಟಿಎಸ್‌ಪಿ ಅನುದಾನವೂ ದುರ್ಬಳಕೆ ಆಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಮಂತ್ರಿಗಳೆಲ್ಲರೂ ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿದರು.

ಕ್ಲಿಕ್‌ ಮಾಡಿ ಓದಿ: ಈ ವರ್ಷವೂ ಚಿತ್ರದುರ್ಗಕ್ಕೆ ಭದ್ರೆ ಹರಿಯುವುದು ಅನುಮಾನ

‘ವಾಲ್ಮೀಕಿ‌ ನಿಗಮದ 187 ಕೋಟಿ‌ ರೂ.ಗಳನ್ನು ಆಂಧ್ರಪ್ರದೇಶದ ಚುನಾವಣೆಗೆ ಕಳಿಸಿದ್ದಾರೆ. ಅನೇಕ‌ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌, ಡೀಸೆಲ್ ದರ ಹೆಚ್ಚಿಸಿದ್ದಾರೆ. ಬಿಟ್ಟಿ ಭಾಗ್ಯ ಕೊಟ್ಟು ಹೆಣ್ಣು ಮಕ್ಕಳನ್ನು ಮರುಳು ಮಾಡಿ ಈಗ ಬೆಲೆ ಹೆಚ್ಚಿಸಿದ್ದಾರೆ. ಸಂಪನ್ಮೂಲ 60 ಸಾವಿರ ಕೋಟಿ ಬೇಕು. ಅದಕ್ಕೆ ನಾಯಕರ ದುಡ್ಡೇ ಬೇಕಾ. ಬಡವರು, ಬೋರ್‌ವೆಲ್ ಹಾಕಿಸುವ ಹಣ ನುಂಗಿದರೂ ಒಬ್ಬ ಶಾಸಕರು‌ ಪ್ರಶ್ನೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು’ ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆಗ್ರಹಿಸಿದರು.

ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌, ಮಾಜಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ರಾಮಚಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮುರುಳಿ, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮುಖಂಡರಾದ ಲಿಂಗಮೂರ್ತಿ, ಕೆ.ಟಿ.ಕುಮಾರ ಸ್ವಾಮಿ, ಜಿ.ಎಸ್‌.ಅನಿತ್‌, ಎಂ.ಸಿ.ರಘುಚಂದನ್‌, ಉಮೇಶ್‌ ಕಾರಜೋಳ, ರಾಮದಾಸ್‌, ಡಾ.ಸಿದ್ದಾರ್ಥ್‌, ಹನುಮಂತೇಗೌಡ, ಚಂದ್ರ ವಿ.ಎಸ್.ಹಳ್ಳಿ, ಸಂಪತ್‌, ಸುರೇಶ್‌ ಸಿದ್ದಾಪುರ, ಪಂಪಾ, ಚಾಲುಕ್ಯ ನವೀನ್‌, ಸಿದ್ದೇಶ್‌, ಕಲ್ಲೇಶಯ್ಯ, ಕವನ, ವೆಂಕಟೇಶ್‌ ಯಾದವ್‌ ಇತರರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B.Y.VijayendraBJPChief MinisterOutrageresignationSiddaramaiahಆಕ್ರೋಶಬಿ.ವೈ.ವಿಜಯೇಂದ್ರಬಿಜೆಪಿಮುಖ್ಯಮಂತ್ರಿರಾಜೀನಾಮೆಸಿದ್ದರಾಮಯ್ಯ
Share This Article
Facebook Email Print
Previous Article Majestic-2 film ಕ್ಲೈಮ್ಯಾಕ್ಸ್‌ ಹಂತಕ್ಕೆ ‘ಮೆಜೆಸ್ಟಿಕ್–2’ | ಹಿರಿಯ ನಟಿ ಶ್ರುತಿ ಎಂಟ್ರಿ
Next Article s.nijalingapa ನಿಜಲಿಂಗಪ್ಪ ಉದ್ಘಾಟಿಸಿದ್ದ ದೃಶ್ಯ ಕಲಾ ಕಾಲೇಜಿಗೆ ವಜ್ರ ಮಹೋತ್ಸವ ಸಂಭ್ರಮ
Leave a Comment

Leave a Reply Cancel reply

Your email address will not be published. Required fields are marked *

ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
ARECANUT RATE
ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
Municipal Council
ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
ಮುಖ್ಯ ಸುದ್ದಿ
MLC KS NAVEEN
ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up