Connect with us

    YOUNG GENERATION; ಯುವ ಪೀಳಿಗೆ ದುಶ್ಚಟಗಳಿಂದ ದೂರವಿರಿ | ಎಎಸ್ಪಿ ಕುಮಾರಸ್ವಾಮಿ 

    ಸ್ವಾಸ್ಥ್ಯ ಸಂಕಲ್ಪ ಮತ್ತು ವಿಶ್ವ ಮಾದಕ ವಸ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ

    ಮುಖ್ಯ ಸುದ್ದಿ

    YOUNG GENERATION; ಯುವ ಪೀಳಿಗೆ ದುಶ್ಚಟಗಳಿಂದ ದೂರವಿರಿ | ಎಎಸ್ಪಿ ಕುಮಾರಸ್ವಾಮಿ 

    CHITRADURGA NEWS | 03 JULY 2024

    ಚಿತ್ರದುರ್ಗ: ಈಗಿನ ಯುವ ಪೀಳಿಗೆವು ದುಶ್ಚಟಗಳಿಗೆ ಬಲಿಯಾಗದೆ, ಅವುಗಳಿಂದ ದೂರವಿರಬೇಕೆಂದು ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಕುಮಾರಸ್ವಾಮಿ ತಿಳಿಸಿದರು.

    ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಏರಿಕೆ | ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಬಂಡಿ ಏರಿ ಪ್ರತಿಭಟನೆ 

    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಮತ್ತು ವಿಶ್ವ ಮಾದಕ ವಸ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು.

    ಡ್ರಗ್ಸ್ ಸೇವನೆ ಮತ್ತು ಮಾರಾಟದಿಂದ ದೇಶವೇ ಹಾಳಾಗುತ್ತದೆ. ಮದ್ಯಪಾನ, ಡ್ರಗ್ಸ್ ಚಟಕ್ಕೆ ಒಮ್ಮೆ ಬಲಿಯಾದರೆ ಅದರಿಂದ ಹೊರ ಬರುವುದು ಕಷ್ಟ. ಮನೆ, ಮನಸ್ಸು, ಸಮಾಜ ಆರೋಗ್ಯ ಪೂರ್ಣವಾಗಿರಬೇಕಾದರೆ ಯುವ ಪೀಳಿಗೆ ಇಂತಹ ಚಟಗಳಿಂದ ದೂರವಿರಬೇಕು.

    ಮೊಬೈಲ್ ಚಟ ಡ್ರಗ್ಸ್‍ಗಿಂತಲೂ ಅಪಾಯಕಾರಿ. ನಿಮ್ಮ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಮೊಬೈಲ್‍ಗಳನ್ನು ಬಳಸಿ. ಮೊಬೈಲ್ ಚಟಕ್ಕೆ ಬಲಿಯಾದವರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗವನ್ನು ತೆರೆಯಲಾಗಿದೆ. ಒಂದು ಸಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾದರೆ ಭಾರತದಲ್ಲಿ ನೀವು ಎಲ್ಲಿಗೆ ಹೋದರು ಅಪರಾಧಿಗಳೆ.

    ಇದನ್ನೂ ಓದಿ: ವಚನ ಸಾಹಿತ್ಯ ಸಂರಕ್ಷಿಸಿದವರು ಡಾ.ಫ.ಗು.ಹಳಕಟ್ಟಿ | ಬಿ.ಟಿ.ಕುಮಾರಸ್ವಾಮಿ

    ಸರ್ಕಾರಿ ಕೆಲಸ, ಪಾಸ್‍ಪೋರ್ಟ್ ಹೀಗೆ ಯಾವುದನ್ನೆ ಪಡೆಯಲು ಪೊಲೀಸ್ ರಿಪೋರ್ಟ್ ಬೇಕಾಗುತ್ತದೆ. ಹಾಗಾಗಿ ಕೆಟ್ಟ ಕೆಲಸಗಳಿಗೆ ಕೈ ಹಾಕಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಶಿಕ್ಷಣವಂತರಾಗುವ ಮೂಲಕ ಒಳ್ಳೆಯ ಪ್ರಜೆಗಳಾಗಿ ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ತನ್ನಿ ಎಂದು ವಿದ್ಯಾರ್ಥಿಗಳಿಗೆ ಕುಮಾರಸ್ವಾಮಿ ಕರೆ ನೀಡಿದರು.

    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು 1982 ರಲ್ಲಿ ಗ್ರಾಮಾಭಿವೃದ್ದಿ ಯೋಜನೆ ಹುಟ್ಟುಹಾಕಿ ಅಂದಿನಿಂದ ಇಲ್ಲಿಯವರೆಗೂ ಗ್ರಾಮಗಳ ಏಳಿಗೆಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ.

    ಜನಜಾಗೃತಿ ವೇದಿಕೆಯಡಿ ಮದ್ಯವರ್ಜನ ಶಿಬಿರಗಳನ್ನು ನಡೆಸಿ ಒಂದು ಲಕ್ಷ ಮೂವತ್ತು ಸಾವಿರ ಮಂದಿಯನ್ನು ಕುಡಿತದ ಚಟದಿಂದ ಹೊರತರಲಾಗಿದೆ. ಸ್ವಾಸ್ಥ್ಯ ಸಂಕಲ್ಪ ಯೋಜನೆಯಡಿ 1800 ಶಿಬಿರಗಳನ್ನು ನಡೆಸಿ 14 ಲಕ್ಷ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದೇವೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇಲ್ಲಿಗೆ ಬಂದು ಹದಿಮೂರು ವರ್ಷಗಳಾಗಿದೆ. 50 ಶಿಬಿರಗಳನ್ನು ನಡೆಸಿರುವುದರಿಂದ ಮೂರು ಸಾವಿರ ಮಂದಿಯ ಮನಃ ಪರಿವರ್ತನೆಯಾಗಿದೆ ಎಂದು ಹೇಳಿದರು.

    ಇದನ್ನೂ ಓದಿ: IMA AWARD; ಚಿತ್ರದುರ್ಗ ಮೂಲದ ವೈದ್ಯ ಡಾ.ಜಿ.ವಿ.ಬಸವಾಜ್ ಅವರಿಗೆ ಅತ್ಯುನ್ನತ ಪ್ರಶಸ್ತಿ

    ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಹೆಚ್.ಬಿ.ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

    ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್, ಸದಸ್ಯರುಗಳಾದ ನಾಗರಾಜ್ ಸಂಗಮ್, ರೂಪ ಜನಾರ್ಧನ್, ಮೊಹಮದ್ ನೂರುಲ್ಲಾ, ಕಿರಣ್‍ಶಂಕರ್, ಡಿ.ವೈ.ಎಸ್ಪಿ. ದಿವಕರ್ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top