By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೆಳಗೋಟೆಯ ಅಂಬಾ ಭವಾನಿ ದೇವಿ
    ಕೆಳಗೋಟೆಯ ಅಂಬಾ ಭವಾನಿ ದೇವಿಗೆ ಅರಿಶಿನ ಅಲಂಕಾರ
    7 hours ago
    ಸಂದೀಪ್ ಗುಂಡಾರ್ಪಿ ಕಾಂಗ್ರೆಸ್‌ಗೆ ಸೇರ್ಪಡೆ
    ಮಾಜಿ ಸಚಿವ ಅಶ್ವತ್ಥರೆಡ್ಡಿ ಮೊಮ್ಮಗ ಸಂದೀಪ್ ಗುಂಡಾರ್ಪಿ ಕಾಂಗ್ರೆಸ್‌ಗೆ ಸೇರ್ಪಡೆ
    7 hours ago
    ತಾಲ್ಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ
    ಯುವಜನತೆ ಜನಪರ ಕಾಳಜಿ ಬೆಳೆಸಿಕೊಂಡು ನಾಯಕತ್ವ ಗುಣ ರೂಢಿಸಿಕೊಳ್ಳಲಿ | ಡಾ.ಆಕಾಶ್
    8 hours ago
    ನವರಾತ್ರಿ ಗೊಂಬೆ ಪ್ರದರ್ಶನ
    35 ವರ್ಷಗಳಿಂದ ನವರಾತ್ರಿ ಗೊಂಬೆ ಪ್ರದರ್ಶನ | 400ಕ್ಕೂ ಹೆಚ್ಚು ಗೊಂಬೆಗಳಲ್ಲಿ ಪುರಾಣ, ಸಂಸ್ಕೃತಿ, ಜೀವನಶೈಲಿಯ ಅನಾವರಣ
    1 day ago
    ಕಣಿವೆ ಮಾರಮ್ಮನಿಗೆ ಗಾಯತ್ರಿ ದೇವಿ ಅಲಂಕಾರ
    ನವರಾತ್ರಿಯ ಮೊದಲ ದಿನ ಕಣಿವೆ ಮಾರಮ್ಮಗೆ ಗಾಯತ್ರಿದೇವಿ ಅಲಂಕಾರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    6 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 12 | ಕೈಗೊಂಡ ಕಾರ್ಯಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    21 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 10 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 08 | ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ, ಕೈಗೆತ್ತಿಕೊಂಡ ಕೆಲಸಗಳು ಪೂರ್ಣ 
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 week ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    6 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    Slim waist
    ನಿಮ್ಮ ಸೊಂಟ ಸ್ಲಿಮ್ ಆಗಬೇಕೆಂದು ಬಯಸುವಿರಾ? ಹಾಗಾದ್ರೆ ಈ ಸರಳ ಸಲಹೆಗಳನ್ನು ಅನುಸರಿಸಿ
    19 hours ago
    Cardamom water
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಏಲಕ್ಕಿ ನೀರು ಕುಡಿದರೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ?
    20 hours ago
    Knee pain
    ಮೊಣಕಾಲು ನೋವಿಗೆ ಈ ಮಸಾಲೆಗಳನ್ನು ಸೇವಿಸಿ
    2 days ago
    oats
    ನಿಮ್ಮ ಮುಖದ ಹೊಳಪನ್ನು ಹೆಚ್ಚಿಸಲು ಓಟ್ಸ್ ಅನ್ನು ಹೀಗೆ ಬಳಸಿ
    2 days ago
    potatoes
    ಮೊಳಕೆಯೊಡೆದ ಆಲೂಗಡ್ಡೆ ತಿನ್ನುವುದು ಹಾನಿಕಾರಕವೇ? ತಿಳಿಯಿರಿ
    3 days ago
Reading: MUDA CASE: ಸಮಾಜವಾದಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸಚಾ ಎಂದು ಸಾಬೀತು ಮಾಡಲಿ | ಗೋವಿಂದ ಎಂ.ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

MUDA CASE: ಸಮಾಜವಾದಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸಚಾ ಎಂದು ಸಾಬೀತು ಮಾಡಲಿ | ಗೋವಿಂದ ಎಂ.ಕಾರಜೋಳ

News Desk Chitradurga News
Last updated: 11 July 2024 11:33
News Desk Chitradurga News
2 years ago
Share
BJP
ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿದರು.
SHARE

CHITRADURGA NEWS | 11 JULY 2024
ಚಿತ್ರದುರ್ಗ: ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಸಿದ್ದರಾಮಯ್ಯ ಸರ್ಕಾರ ಒಂದು ರೂಪಾಯಿ ಅಭಿವೃದ್ಧಿ ಕೆಲಸ ಮಾಡಿಲ್ಲ. ಭ್ರಷ್ಟಾಚಾರ, ಸ್ವಜನಪಕ್ಷಪಾತದಲ್ಲಿ ಸಿಲುಕಿ ವಿಲವಿಲ ಒದ್ದಾಡುತ್ತಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ದೂರಿದರು.

‘ನಾನು ಸಮಾಜವಾದಿ, ಭ್ರಷ್ಟಾಚಾರ ಮಾಡುವುದಿಲ್ಲ, ಸಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಾರೆ. ಸಜ್ಜನ‌ ರಾಜಕಾರಣಿ ಸಮಾಜಕ್ಕೆ ಮಾದರಿ ಆಗಬೇಕು. ತಮ್ಮ ಮೇಲೆ ಆಪಾದನೆ ಬಂದಾಗ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ತನಿಖೆಗೆ‌ ಸಹಕಾರ ನೀಡಿದ ಉದಾಹರಣೆ ಇವೆ. ಆದರೆ ಆ ಕೆಲಸವನ್ನು ಸಿದ್ದರಾಮಯ್ಯ ಇನ್ನೂ ಮಾಡಿಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ರಾಮಕೃಷ್ಣ ಹೆಗಡೆ ಟಿಲಿಫೋನ್ ಕದ್ದಾಲಿಕೆ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹೆಸರಿನಲ್ಲಿ ಸರ್ಕಾರದ ಖಜಾನೆ ಲೂಟಿ ಹೊಡೆದಿದೆ. ಸರ್ಕಾರದ ಇಲಾಖೆಯ ಆಯುಕ್ತರ ಹೆಸರಿಗೆ ಹಣ ಬಿಡುಗಡೆ ಆಗಬೇಕು.‌ ಆದರೆ, ಎಲ್ಲಿಯೋ ತೆಗೆದ ನಕಲಿ ಖಾತೆಗೆ ಹಣ ಜಮೆ ಆಗಿದ್ದು ಇತಿಹಾಸದಲ್ಲಿ ಮೊದಲು’ ಎಂದರು.

‘ಮುಡಾ (MUDA CASE) ಸ್ವಾಧೀನ ಮಾಡಿಕೊಂಡ ಜಮೀನನ್ನು ಡಿನೋಟಿಫಿಕೇಶನ್ ಮಾಡಿದ್ದೇ ಮೊದಲ ತಪ್ಪು. ಅದನ್ನು ಮತ್ತೊಬ್ಬರ ಹೆಸರಿನಲ್ಲಿ ಖರೀದಿಸಿದ್ದು ಸ್ಪಷ್ಟವಾಗಿ ಭ್ರಷ್ಟಾಚಾರ ಕಾಣಿಸುತ್ತಿದೆ. ಸಿದ್ದರಾಮಯ್ಯ ಸಹಿತ ಇದರಲ್ಲಿ ಭಾಗಿಯಾದ ಸಂಪುಟದ‌ ಎಲ್ಲರೂ ರಾಜೀನಾಮೆ ಕೊಡಬೇಕು. ನಾವು ಸಾಚಾ ಇದ್ದೇವೆ ಎಂದು ತನಿಖೆ‌ ಮೂಲಕ ತಿಳಿಸಲಿ’ ಎಂದು ಸವಾಲ್‌ ಹಾಕಿದರು.

‘ಕೇಂದ್ರ ಸರ್ಕಾರ ಇಡಿ,‌ಸಿಬಿಐ, ಐಟಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಪದೇ ಪದೇ ಹೇಳುತ್ತಾರೆ. ಅವೆಲ್ಲಾ ಸಾಂವಿಧಾನಿಕ‌ ಸಂಸ್ಥೆಗಳು, ಅವು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಅದು ದುರುಪಯೋಗ ಅಲ್ಲ, ಪ್ರಾಮಾಣಿಕವಾಗಿ ಕೆಲಸ‌ಮಾಡುತ್ತಿವೆ’ ಎಂದು ತಿರುಗೇಟು ನೀಡಿದರು.

ಕ್ಲಿಕ್‌ ಮಾಡಿ ಓದಿ: ಶಿಕ್ಷಕಿ ಮನೆಯ ಬಂಗಾರ ದೋಚಿದ ಕಳ್ಳರು | ತಿಥಿ ಕಾರ್ಯಕ್ಕೆ ತೆರಳಿದ್ದಾಗ ಕೈಚಳಕ

‘ಕಾಂಗ್ರೆಸ್ ದೇಶದಲ್ಲಿ‌ ಆಡಳಿತ ನಡೆಸಿದಾಗ ಅನೇಕ ಬಾರಿ ದಾಳಿ ಆಗಿವೆ.‌ ಆಗಲೂ ದುರುಪಯೋಗ ಮಾಡಿಕೊಂಡಿದ್ದರಾ. ಕಾನೂನು‌ ಚೌಕಟ್ಟಿನಲ್ಲಿ ಈ‌ ಸಂಸ್ಥೆಗಳು‌ ಕೆಲಸ‌ ಮಾಡುತ್ತವೆ’ ಎಂದರು.

‘ವಾಲ್ಮೀಕಿ‌ ನಿಗಮದ ಹಗರಣದಲ್ಲಿ ಇಡಿ‌ ಬಂದಿರುವುದು ಬ್ಯಾಂಕುಗಳ ಕಾರಣಕ್ಕೆ. ಇದೊಂದು ಅಂತರ ರಾಜ್ಯ ಹಗರಣ. ಬ್ಯಾಂಕ್ ಕೇಂದ್ರದ ವ್ಯಾಪ್ತಿಗೆ ಬರುತ್ತವೆ. ಈ ಪ್ರಕರಣದಲ್ಲಿ‌ ನೀವು ತಪ್ಪೇ ಮಾಡಿಲ್ಲ ಅನ್ನುವುದಾದರೆ ಭೈರತಿ ಸುರೇಶ್ ಓಡಿ ಹೋಗಿ ಅಧಿಕಾರಿಗಳನ್ನು ಅಮಾನತು ಮಾಡಿದ್ಯಾಕೆ. ಎಲ್ಲ ದಾಖಲೆಗಳನ್ನು ಬೆಂಗಳೂರಿಗೆ ತರಲಾಗಿದೆ. ತಿದ್ದುವ ಸಾಧ್ಯತೆ ಇದೆ. ಈ‌ ಹಿನ್ನೆಲೆಯಲ್ಲಿ ಅವರು ಮೌಲ್ಯಾಧಾರಿತ ರಾಜಕಾರಣಿ ಎನ್ನುವುದನ್ನು ಸಾಬೀತು ಮಾಡಲಿ’ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್‌ ಮಾತನಾಡಿ, ‘ಮುಖ್ಯಮಂತ್ರಿಗಳೇ ಅತೀ ದೊಡ್ಡ ರಿಯಲ್‌ ಎಸ್ಟೇಟ್ ಹಗರಣದಲ್ಲಿ ಭಾಗಿಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಮೊದಲು. ಮುಡಾದಲ್ಲಿ ನಿವೇಶನಕ್ಕಾಗಿ 62 ಸಾವಿರ ಜನ ಅರ್ಜಿ ಹಾಕಿ ಕಾಯುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ತಮ್ಮ ಅಧಿಕಾರ,‌ ಪ್ರಭಾವ ಬಳಸಿ 1995 ರ ಕಾಯ್ದೆ ಅನ್ವಯ ಎಂದು ಉಲ್ಲೇಖಿಸಿ, ಅರ್ಕಾವತಿ ಬಡಾವಣೆಗೆ 2005 ರಲ್ಲಿ ರೂಪುಗೊಂಡ ನಿಯಮವನ್ನು ಬಳಕೆ ಮಾಡಿಕೊಂಡು ಮೈಸೂರಿನ ವಿಜಯನಗತದಂತಹ ಬಡಾವಣೆಗಳಲ್ಲಿ ನಿವೇಶನ ತೆಗೆದುಕೊಂಡಿದ್ದಾರೆ’ ಎಂದು ಆರೋಪಿಸಿದರು.

ಕ್ಲಿಕ್‌ ಮಾಡಿ ಓದಿ: LOKAYUKTHA; ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಲೋಕಾಯುಕ್ತರ ದಾಳಿ

‘2010 ರಲ್ಲಿ‌ಸಿದ್ದರಾಮಯ್ಯ ಪತ್ನಿ ಹೆಸರಿಗೆ ಜಮೀನು‌ ಬಂದಿದೆ. ಆದರೆ, ಅದಕ್ಕಿಂತ ಹಿಂದೆಯೇ ರಚನೆಯಾದ ಬಡಾವಣೆಯಲ್ಲಿ‌ ನಿವೇಶನ ಪಡೆದಿದ್ದಾರೆ. ಸಮಾಜದಲ್ಲಿ ಸಾಧನೆ ಮಾಡಿದವರಿಗೆ ಶೇ.25 ರಷ್ಟು‌ನಿವೇಶನ ಕೊಡಬೇಕು.‌ ಆದರೆ, ಅಲ್ಲಿಯೂ ಇವರು ಕೈ ಹಾಕಿದ್ದಾರೆ.‌ ಕೆಸರೆ ಜಮೀನಿನಲ್ಲಿ ಸಿದ್ದರಾಮಯ್ಯ ಕೈ ಕೆಸರಾಗಿದೆ. ವಿಪಕ್ಷದ ಶಾಸಕರು ಸದನಲ್ಲಿ ಮಾತನಾಡಿದರೆ ಹೆದರಿಸಿ ಕೂರಿಸುವ ಕೆಲಸ ಮಾಡುತ್ತಾರೆ. ಲೋಕಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಲಿದೆ. ರಾಹುಲ್ ಗಾಂಧಿ ಅವರ ಮುಖ್ಯಮಂತ್ರಿ ಮಾಡಿರುವ ಹಗರಣಗಳ ಬಗ್ಗೆ ಮಾತನಾಡಬೇಕು’ ಎಂದರು.

ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಎ.ಮುರುಳಿ, ಮುಖಂಡರಾದ ಸುರೇಶ್‌ ಸಿದ್ದಾಪುರ, ಸಂಪತ್, ರಾಮರೆಡ್ಡಿ, ದಗ್ಗೆ ಶಿವಪ್ರಕಾಶ್‌, ಬೇದ್ರೆ ನಾಗರಾಜ್, ಚಾಲುಕ್ಯ‌ ನವೀನ್, ವೆಂಕಟೇಶ್‌ ಯಾದವ್‌ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:InvestigationMPMudaProofScamSiddaramaiahSocialistತನಿಖೆಮುಡಾಸಮಾಜವಾದಿಸಂಸದಸಾಬೀತುಸಿದ್ದರಾಮಯ್ಯಹಗರಣ
Share This Article
Facebook Email Print
Previous Article Lokayuktha LOKAYUKTHA; ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಲೋಕಾಯುಕ್ತರ ದಾಳಿ
Next Article CAR ACCIDENT Car accident: ಹೆದ್ದಾರಿಯಲ್ಲಿ ಕಾರು ಅಪಘಾತ | ಕೃಷಿ ಪತ್ತಿನ ಸಹಕಾರ ಸಂಘದ ಮೂವರು ಮೃತ
Leave a Comment

Leave a Reply Cancel reply

Your email address will not be published. Required fields are marked *

ಕೆಳಗೋಟೆಯ ಅಂಬಾ ಭವಾನಿ ದೇವಿ
ಕೆಳಗೋಟೆಯ ಅಂಬಾ ಭವಾನಿ ದೇವಿಗೆ ಅರಿಶಿನ ಅಲಂಕಾರ
ಮುಖ್ಯ ಸುದ್ದಿ
ಸಂದೀಪ್ ಗುಂಡಾರ್ಪಿ ಕಾಂಗ್ರೆಸ್‌ಗೆ ಸೇರ್ಪಡೆ
ಮಾಜಿ ಸಚಿವ ಅಶ್ವತ್ಥರೆಡ್ಡಿ ಮೊಮ್ಮಗ ಸಂದೀಪ್ ಗುಂಡಾರ್ಪಿ ಕಾಂಗ್ರೆಸ್‌ಗೆ ಸೇರ್ಪಡೆ
ಮುಖ್ಯ ಸುದ್ದಿ
ತಾಲ್ಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮ
ಯುವಜನತೆ ಜನಪರ ಕಾಳಜಿ ಬೆಳೆಸಿಕೊಂಡು ನಾಯಕತ್ವ ಗುಣ ರೂಢಿಸಿಕೊಳ್ಳಲಿ | ಡಾ.ಆಕಾಶ್
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up